< ಸಮುವೇಲನು - ಪ್ರಥಮ ಭಾಗ 6 >

1 ಯೆಹೋವನ ಮಂಜೂಷವು ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳ ಕಾಲ ಇತ್ತು.
Rəbbin sandığı Filiştlilərin diyarında yeddi ay qaldı.
2 ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, “ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ” ಅನ್ನಲು
Filiştlilər kahinlərlə falçıları çağırıb dedilər: «Bu Rəbbin sandığını nə edək? Onu öz yerinə necə qaytarmağı bizə başa salın».
3 ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.
Kahinlər və baxıcılar dedilər: «İsrail Allahının sandığını geri göndərmək istəyirsinizsə, boş göndərməyin. Ona mütləq təqsir təqdimi verməlisiniz. O zaman sağalacaqsınız və O sizdən nə üçün əl çəkmədiyini bildirəcək».
4 ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.
Filiştlilər soruşdular: «Ona göndərəcəyimiz təqsir təqdimi nə olmalıdır?» Kahinlər və baxıcılar belə cavab verdi: «Filiştlilərin ağalarının sayına görə beş qızıl şiş surəti ilə beş qızıl siçovul surəti düzəldib göndərin. Çünki bu bəla həm sizin, həm də ağalarınızın üstündədir.
5 ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.
Ona görə də həm şişlərinizin, həm də ölkənizi dağıdan siçovulların surətlərini yaradın və İsrailin Allahını şərəfləndirin. Bəlkə O sizin, allahlarınızın və torpağınızın üstündə əlini yüngülləşdirdi.
6 ಐಗುಪ್ತರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವುದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.
Misirlilərlə fironun ürəyi inadkarlıq etdiyi kimi nə üçün sizin də ürəkləriniz inadkarlıq edir? Allah onlarla sərt davrananda İsrailliləri azad buraxmadılarmı?
7 ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿರಿ. ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ
İndi isə bir təzə araba düzəldin və boyunduruğa qoşulmayan iki sağmal inəyi arabaya qoşun. Balalarını isə onlardan ayırıb evə göndərin.
8 ಆ ಬಂಡಿಯ ಮೇಲೆ ಯೆಹೋವನ ಮಂಜೂಷವನ್ನೂ, ನೀವು ಪ್ರಾಯಶ್ಚಿತ್ತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಟ್ಟು ಕಳುಹಿಸಿಬಿಡಿರಿ.
Rəbbin sandığını götürüb arabaya qoyun və təqsir təqdimi olaraq Ona ödəyəcəyiniz qızıl əşyaları isə bir mücrü içərisində sandığın yanına qoyun, sonra da yola salın getsin.
9 ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.
Amma baxın, onlar sandığın olduğu torpağa – Bet-Şemeş yoluna qalxarlarsa, deməli, bu böyük bəlanı bizə verən Odur. Yox, əgər oraya getməzlərsə, onda biləcəyik ki, bizi vuran Onun əli deyil və bu qəza başımıza təsadüfən gəlmişdir».
10 ೧೦ ಅದೇ ಪ್ರಕಾರ ಫಿಲಿಷ್ಟಿಯರು ಹಾಲುಕರೆಯುವ ಎರಡು ಹಸುಗಳನ್ನು ಹಿಡಿದುಕೊಂಡು ಬಂಡಿಗೆ ಹೂಡಿ ಅವುಗಳ ಕರುಗಳನ್ನು ಮನೆಯಲ್ಲಿ ಕಟ್ಟಿಹಾಕಿದರು.
Adamlar belə də etdilər. İki sağmal inək gətirib arabaya qoşdular və balalarını da evdə bağladılar.
11 ೧೧ ಯೆಹೋವನ ಮಂಜೂಷವನ್ನೂ, ಚಿನ್ನದ ಇಲಿಗಳೂ, ಗಡ್ಡೆಗಳೂ ಇದ್ದ ಚಿಕ್ಕ ಪೆಟ್ಟಿಗೆಯನ್ನೂ ಬಂಡಿಯ ಮೇಲಿಟ್ಟರು.
Rəbbin sandığı ilə bərabər içərisində siçovulların və şişlərin qızıl surətləri yığılmış mücrünü də arabaya qoydular.
12 ೧೨ ಕೂಡಲೆ ಆ ಹಸುಗಳು ಬೇತ್ ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಕೂಗುತ್ತಾ ನೆಟ್ಟಗೆ ಮುಂದೆ ನಡೆದವು; ಎಡಬಲಕ್ಕೆ ತಿರುಗಲಿಲ್ಲ. ಫಿಲಿಷ್ಟಿಯ ಪ್ರಭುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆ ಹೋದರು.
İnəklər birbaşa Bet-Şemeşə gedən yolla sağa-sola dönmədən, böyürə-böyürə getdilər. Filiştlilərin ağaları isə onları Bet-Şemeş sərhədinə qədər ötürdülər.
13 ೧೩ ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹು ಸಂತೋಷಪಟ್ಟರು.
O zaman Bet-Şemeşlilər zəmidə buğda biçirdilər. Onlar başlarını qaldırıb sandığı görəndə sevindilər.
14 ೧೪ ಬಂಡಿಯು ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ದೊಡ್ಡ ಕಲ್ಲಿನ ಬಳಿಯಲ್ಲಿ ಬಂದು ನಿಂತಿತು. ಆಗ ಅವರು ಹೋಗಿ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಆ ಹಸುಗಳನ್ನು ಯೆಹೋವನಿಗೆ ಯಜ್ಞಮಾಡಿದರು.
Araba Bet-Şemeşli Yeşuanın zəmisinə girib böyük bir daşın yanında dayandı. Bet-Şemeşlilər arabanın ağaclarını qırdılar, inəkləri isə Rəbbə yandırma qurbanı verdilər.
15 ೧೫ ಲೇವಿಯರು ಯೆಹೋವನ ಮಂಜೂಷವನ್ನೂ, ಚಿನ್ನದ ವಸ್ತುಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್ ಷೆಮೆಷಿನವರು ಅದೇ ದಿನ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಮತ್ತು ಯಜ್ಞಗಳನ್ನೂ ಸಮರ್ಪಿಸಿದರು.
Levililər Rəbbin sandığını və onun yanındakı qızıl əşyalar yığılmış mücrünü arabadan endirib böyük bir daşın üstünə qoydular. O gün Bet-Şemeşlilər Rəbbə yandırma qurbanı verib başqa qurbanlar da kəsdilər.
16 ೧೬ ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.
Filiştlilərin beş ağası bu hadisəni gördükdən sonra həmin gün Eqrona qayıtdı.
17 ೧೭ ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ
Filiştlilərin təqsir təqdimi olaraq Rəbbə gətirdikləri qızıl şişlərin hər biri Aşdod, Qəzzə, Aşqelon, Qat, Eqron üçün olub bu şəhərlərin sayına görə idi.
18 ೧೮ ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅರಸುಗಳ ಅಧೀನದಲ್ಲಿದ್ದ ಎಲ್ಲಾ ಗ್ರಾಮ ನಗರಗಳ ಸಂಖ್ಯೆಗಳಿಗೂ ಸರಿಯಾಗಿದ್ದವು. ಬೇತ್ ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಇರುವ ಯೆಹೋವನ ಮಂಜೂಷವೂ ಇಡಲ್ಪಟ್ಟ ಆ ದೊಡ್ಡ ಕಲ್ಲೇ ಇದಕ್ಕೆ ಸಾಕ್ಷಿಯಾಗಿ ಇಂದಿಗೂ ಇದೆ.
Qızıl siçovullar isə qala divarlı şəhərlərlə ətraf kəndlər də daxil olmaqla beş ağaya məxsus Filişt şəhərlərinin sayına görə beş dənə idi. Bet-Şemeşli Yeşuanın zəmisində Rəbbin sandığı qoyulan böyük daş bu günə qədər şahid kimi qalmaqdadır.
19 ೧೯ ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.
Rəbbin sandığının içinə baxdıqları üçün Allah Bet-Şemeşliləri də vurdu və əlli ailədən yetmiş nəfəri öldürdü. Xalq isə Rəbbin onların başına gətirdiyi müsibətə görə yas tutdu.
20 ೨೦ ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು
Bet-Şemeşlilər dedilər: «Bu müqəddəs Allah olan Rəbbin qarşısında kim dayana bilər? Bizdən sonra kimin yanına gedəcək?»
21 ೨೧ ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು.
Sonra Qiryat-Yearim əhalisinə qasidlər göndərib dedilər: «Filiştlilər Rəbbin sandığını geri qaytardılar, gəlin onu aparın».

< ಸಮುವೇಲನು - ಪ್ರಥಮ ಭಾಗ 6 >