< ಸಮುವೇಲನು - ಪ್ರಥಮ ಭಾಗ 7 >
1 ೧ ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.
Toen kwamen de inwoners van Kirjat-Jearim de ark van Jahweh halen; ze brachten haar in het huis van Abinadab op de heuvel, en wijdden zijn zoon Elazar, om de ark van Jahweh te bewaken.
2 ೨ ಮಂಜೂಷವು ಕಿರ್ಯಾತ್ಯಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು.
Er verliep een geruime tijd, wel twintig jaar, sinds de ark in Kirjat-Jearim een plaats had gevonden. Toen nam heel het huis Israël zijn toevlucht tot Jahweh.
3 ೩ ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.
En Samuël sprak tot heel het huis Israël: Indien gij u met geheel uw hart tot Jahweh wilt bekeren, moet gij de vreemde goden, de Báals en de Asjtarten uit uw midden verwijderen, uw hart op Jahweh richten en Hem alleen dienen; dan zal Hij u uit de macht der Filistijnen bevrijden.
4 ೪ ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು.
Inderdaad verwijderden de Israëlieten de Báals en de Asjtarten, en dienden Jahweh alleen.
5 ೫ ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು.
Nu sprak Samuël: Laat heel Israël bijeenkomen in Mispa; dan zal ik voor u tot Jahweh bidden.
6 ೬ ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
Zo kwamen ze bijeen in Mispa, schepten water en goten het uit voor het aanschijn van Jahweh, vastten die dag en beleden daar: Wij hebben tegen Jahweh gezondigd! Zo richtte Samuël de Israëlieten te Mispa.
7 ೭ ಇಸ್ರಾಯೇಲ್ಯರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆ ಎಂದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲರು ಬಹಳವಾಗಿ ಭಯಪಟ್ಟು ಸಮುವೇಲನಿಗೆ,
Toen de Filistijnen hoorden, dat de Israëlieten in Mispa bijeenwaren, trokken de Filistijnse tyrannen tegen Israël op. De Israëlieten vernamen het, en werden bevreesd voor de Filistijnen.
8 ೮ “ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ” ಅಂದರು.
En de Israëlieten zeiden tot Samuël: Houd niet op, voor ons tot Jahweh onzen God te bidden, dat Hij ons uit de macht der Filistijnen bevrijde.
9 ೯ ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.
En Samuël nam een leplammetje, en terwijl hij dat als een brandoffer aan Jahweh opdroeg, bad hij voor Israël tot Jahweh. En Jahweh verhoorde hem.
10 ೧೦ ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು.
Nog was Samuël bezig, het brandoffer op te dragen, toen de Filistijnen Israël begonnen aan te vallen. Maar Jahweh liet die dag tegen de Filistijnen zijn donder kraken, en bracht ze in verwarring, zodat ze door Israël werden verslagen.
11 ೧೧ ಇಸ್ರಾಯೇಲ್ಯರಾದರೋ ಮಿಚ್ಪೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು.
De krijgslieden van Israël zetten uit Mispa de Filistijnen achterna, en hakten tot onder Bet-Kar op hen in.
12 ೧೨ ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.
Toen nam Samuël een steen, plaatste die halverwege tussen Mispa en Sjen, noemden hem: Ében-Haézer, en sprak: "Tot hier toe heeft Jahweh ons geholpen."
13 ೧೩ ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.
Zo werden de Filistijnen vernederd en waagden het niet meer, het gebied van Israël binnen te vallen. En zolang Samuël leefde, bleef de hand van Jahweh op de Filistijnen drukken.
14 ೧೪ ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.
Ook de steden, die de Filistijnen op Israël veroverd hadden, kwamen aan Israël terug; zowel Ekron als Gat met hun omgeving bevrijdde Israël uit de macht der Filistijnen. Ook tussen Israël en de Amorieten bleef het vrede.
15 ೧೫ ಸಮುವೇಲನು ಜೀವದಿಂದ ಇರುವವರೆಗೆ ಇಸ್ರಾಯೇಲರಿಗೆ ನ್ಯಾಯತೀರಿಸುತ್ತಿದ್ದನು.
Samuël richtte Israël zolang hij leefde.
16 ೧೬ ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು.
Elk jaar maakte hij een rondreis over Betel en Gilgal en Mispa, en op al die plaatsen sprak hij recht over Israël.
17 ೧೭ ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.
Dan keerde hij weer naar Rama terug, want daar stond zijn huis. Daar richtte hij Israël, en bouwde er een altaar voor Jahweh.