< ಸಮುವೇಲನು - ಪ್ರಥಮ ಭಾಗ 8 >

1 ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.
וַיְהִ֕י כַּאֲשֶׁ֥ר זָקֵ֖ן שְׁמוּאֵ֑ל וַיָּ֧שֶׂם אֶת־בָּנָ֛יו שֹׁפְטִ֖ים לְיִשְׂרָאֵֽל׃
2 ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು.
וַיְהִ֞י שֶׁם־בְּנ֤וֹ הַבְּכוֹר֙ יוֹאֵ֔ל וְשֵׁ֥ם מִשְׁנֵ֖הוּ אֲבִיָּ֑ה שֹׁפְטִ֖ים בִּבְאֵ֥ר שָֽׁבַע׃
3 ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.
וְלֹֽא־הָלְכ֤וּ בָנָיו֙ בִּדְרָכָ֔יו וַיִּטּ֖וּ אַחֲרֵ֣י הַבָּ֑צַע וַיִּ֨קְחוּ־שֹׁ֔חַד וַיַּטּ֖וּ מִשְׁפָּֽט׃ פ
4 ಆದ್ದರಿಂದ ಇಸ್ರಾಯೇಲರ ಹಿರಿಯರೆಲ್ಲರೂ ಸೇರಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು
וַיִּֽתְקַבְּצ֔וּ כֹּ֖ל זִקְנֵ֣י יִשְׂרָאֵ֑ל וַיָּבֹ֥אוּ אֶל־שְׁמוּאֵ֖ל הָרָמָֽתָה׃
5 ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.
וַיֹּאמְר֣וּ אֵלָ֗יו הִנֵּה֙ אַתָּ֣ה זָקַ֔נְתָּ וּבָנֶ֕יךָ לֹ֥א הָלְכ֖וּ בִּדְרָכֶ֑יךָ עַתָּ֗ה שִֽׂימָה־לָּ֥נוּ מֶ֛לֶךְ לְשָׁפְטֵ֖נוּ כְּכָל־הַגּוֹיִֽם׃
6 ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.
וַיֵּ֤רַע הַדָּבָר֙ בְּעֵינֵ֣י שְׁמוּאֵ֔ל כַּאֲשֶׁ֣ר אָמְר֔וּ תְּנָה־לָּ֥נוּ מֶ֖לֶךְ לְשָׁפְטֵ֑נוּ וַיִּתְפַּלֵּ֥ל שְׁמוּאֵ֖ל אֶל־יְהוָֽה׃ פ
7 ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.
וַיֹּ֤אמֶר יְהוָה֙ אֶל־שְׁמוּאֵ֔ל שְׁמַע֙ בְּק֣וֹל הָעָ֔ם לְכֹ֥ל אֲשֶׁר־יֹאמְר֖וּ אֵלֶ֑יךָ כִּ֣י לֹ֤א אֹֽתְךָ֙ מָאָ֔סוּ כִּֽי־אֹתִ֥י מָאֲס֖וּ מִמְּלֹ֥ךְ עֲלֵיהֶֽם׃
8 ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ.
כְּכָֽל־הַמַּעֲשִׂ֣ים אֲשֶׁר־עָשׂ֗וּ מִיּוֹם֩ הַעֲלֹתִ֨י אֹתָ֤ם מִמִּצְרַ֙יִם֙ וְעַד־הַיּ֣וֹם הַזֶּ֔ה וַיַּ֣עַזְבֻ֔נִי וַיַּעַבְד֖וּ אֱלֹהִ֣ים אֲחֵרִ֑ים כֵּ֛ן הֵ֥מָּה עֹשִׂ֖ים גַּם־לָֽךְ׃
9 ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.
וְעַתָּ֖ה שְׁמַ֣ע בְּקוֹלָ֑ם אַ֗ךְ כִּֽי־הָעֵ֤ד תָּעִיד֙ בָּהֶ֔ם וְהִגַּדְתָּ֣ לָהֶ֔ם מִשְׁפַּ֣ט הַמֶּ֔לֶךְ אֲשֶׁ֥ר יִמְלֹ֖ךְ עֲלֵיהֶֽם׃ ס
10 ೧೦ ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ,
וַיֹּ֣אמֶר שְׁמוּאֵ֔ל אֵ֖ת כָּל־דִּבְרֵ֣י יְהוָ֑ה אֶל־הָעָ֕ם הַשֹּׁאֲלִ֥ים מֵאִתּ֖וֹ מֶֽלֶךְ׃ ס
11 ೧೧ “ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.
וַיֹּ֕אמֶר זֶ֗ה יִֽהְיֶה֙ מִשְׁפַּ֣ט הַמֶּ֔לֶךְ אֲשֶׁ֥ר יִמְלֹ֖ךְ עֲלֵיכֶ֑ם אֶת־בְּנֵיכֶ֣ם יִקָּ֗ח וְשָׂ֥ם לוֹ֙ בְּמֶרְכַּבְתּ֣וֹ וּבְפָרָשָׁ֔יו וְרָצ֖וּ לִפְנֵ֥י מֶרְכַּבְתּֽוֹ׃
12 ೧೨ ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.
וְלָשׂ֣וּם ל֔וֹ שָׂרֵ֥י אֲלָפִ֖ים וְשָׂרֵ֣י חֲמִשִּׁ֑ים וְלַחֲרֹ֤שׁ חֲרִישׁוֹ֙ וְלִקְצֹ֣ר קְצִיר֔וֹ וְלַעֲשׂ֥וֹת כְּלֵֽי־מִלְחַמְתּ֖וֹ וּכְלֵ֥י רִכְבּֽוֹ׃
13 ೧೩ ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.
וְאֶת־בְּנוֹתֵיכֶ֖ם יִקָּ֑ח לְרַקָּח֥וֹת וּלְטַבָּח֖וֹת וּלְאֹפֽוֹת׃
14 ೧೪ ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.
וְאֶת־שְׂ֠דֽוֹתֵיכֶם וְאֶת־כַּרְמֵיכֶ֧ם וְזֵיתֵיכֶ֛ם הַטּוֹבִ֖ים יִקָּ֑ח וְנָתַ֖ן לַעֲבָדָֽיו׃
15 ೧೫ ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು.
וְזַרְעֵיכֶ֥ם וְכַרְמֵיכֶ֖ם יַעְשֹׂ֑ר וְנָתַ֥ן לְסָרִיסָ֖יו וְלַעֲבָדָֽיו׃
16 ೧೬ ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು.
וְאֶת־עַבְדֵיכֶם֩ וְֽאֶת־שִׁפְח֨וֹתֵיכֶ֜ם וְאֶת־בַּחוּרֵיכֶ֧ם הַטּוֹבִ֛ים וְאֶת־חֲמוֹרֵיכֶ֖ם יִקָּ֑ח וְעָשָׂ֖ה לִמְלַאכְתּֽוֹ׃
17 ೧೭ ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು.
צֹאנְכֶ֖ם יַעְשֹׂ֑ר וְאַתֶּ֖ם תִּֽהְיוּ־ל֥וֹ לַעֲבָדִֽים׃
18 ೧೮ ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.
וּזְעַקְתֶּם֙ בַּיּ֣וֹם הַה֔וּא מִלִּפְנֵ֣י מַלְכְּכֶ֔ם אֲשֶׁ֥ר בְּחַרְתֶּ֖ם לָכֶ֑ם וְלֹֽא־יַעֲנֶ֧ה יְהוָ֛ה אֶתְכֶ֖ם בַּיּ֥וֹם הַהֽוּא׃
19 ೧೯ ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;
וַיְמָאֲנ֣וּ הָעָ֔ם לִשְׁמֹ֖עַ בְּק֣וֹל שְׁמוּאֵ֑ל וַיֹּאמְר֣וּ לֹּ֔א כִּ֥י אִם־מֶ֖לֶךְ יִֽהְיֶ֥ה עָלֵֽינוּ׃
20 ೨೦ ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.
וְהָיִ֥ינוּ גַם־אֲנַ֖חְנוּ כְּכָל־הַגּוֹיִ֑ם וּשְׁפָטָ֤נוּ מַלְכֵּ֙נוּ֙ וְיָצָ֣א לְפָנֵ֔ינוּ וְנִלְחַ֖ם אֶת־מִלְחֲמֹתֵֽנוּ׃
21 ೨೧ ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ
וַיִּשְׁמַ֣ע שְׁמוּאֵ֔ל אֵ֖ת כָּל־דִּבְרֵ֣י הָעָ֑ם וַֽיְדַבְּרֵ֖ם בְּאָזְנֵ֥י יְהוָֽה׃ פ
22 ೨೨ ಆತನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು” ಎಂದನು. ಆಗ ಸಮುವೇಲನು ಇಸ್ರಾಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ” ಎಂದು ಅಪ್ಪಣೆಕೊಟ್ಟನು.
וַיֹּ֨אמֶר יְהוָ֤ה אֶל־שְׁמוּאֵל֙ שְׁמַ֣ע בְּקוֹלָ֔ם וְהִמְלַכְתָּ֥ לָהֶ֖ם מֶ֑לֶךְ וַיֹּ֤אמֶר שְׁמוּאֵל֙ אֶל־אַנְשֵׁ֣י יִשְׂרָאֵ֔ל לְכ֖וּ אִ֥ישׁ לְעִירֽוֹ׃ פ

< ಸಮುವೇಲನು - ಪ್ರಥಮ ಭಾಗ 8 >