< ಸಮುವೇಲನು - ಪ್ರಥಮ ಭಾಗ 8 >
1 ೧ ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.
E aconteceu que havendo Samuel envelhecido, pôs seus filhos por juízes sobre Israel.
2 ೨ ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು.
E o nome de seu filho primogênito foi Joel, e o nome do segundo, Abias: foram juízes em Berseba.
3 ೩ ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.
Mas não andaram os filhos pelos caminhos de seu pai, antes se inclinaram atrás a ganância, recebendo suborno e pervertendo o direito.
4 ೪ ಆದ್ದರಿಂದ ಇಸ್ರಾಯೇಲರ ಹಿರಿಯರೆಲ್ಲರೂ ಸೇರಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು
Então todos os anciãos de Israel se juntaram, e vieram a Samuel em Ramá,
5 ೫ ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.
E disseram-lhe: Eis que tu envelheceste, e teus filhos não vão por teus caminhos: portanto, constitui-nos agora um rei que nos julgue, como todas as nações.
6 ೬ ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.
E descontentou a Samuel esta palavra que disseram: Dá-nos rei que nos julgue. E Samuel orou ao SENHOR.
7 ೭ ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.
E disse o SENHOR a Samuel: Ouve a voz do povo em tudo o que te disserem: porque não rejeitaram a ti, mas sim a mim me rejeitaram, para que eu não reine sobre eles.
8 ೮ ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ.
Conforme todas as obras que fizeram desde o dia que os tirei do Egito até hoje, que me deixaram e serviram a deuses alheios, assim fazem também contigo.
9 ೯ ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.
Agora, pois, ouve sua voz: mas protesta contra eles declarando-lhes o direito do rei que há de reinar sobre eles.
10 ೧೦ ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ,
E disse Samuel todas as palavras do SENHOR ao povo que lhe havia pedido rei.
11 ೧೧ “ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.
Disse, pois: Este será o direito do rei que houver de reinar sobre vós: tomará vossos filhos, e os porá em seus carros, e em seus cavaleiros, para que corram diante de seu carro:
12 ೧೨ ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.
E se escolherá capitães de mil, e capitães de cinquenta: os porá também a que arem seus campos, e ceifem suas plantações, e a que façam suas armas de guerra, e os equipamentos de seus carros:
13 ೧೩ ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.
Tomará também vossas filhas para que sejam perfumistas, cozinheiras, e padeiras.
14 ೧೪ ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.
Também tomará vossas terras, vossas vinhas, e vossos bons olivais, e os dará a seus servos.
15 ೧೫ ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು.
Ele tomará o dízimo de vossas sementes e vossas vinhas, para dar a seus eunucos e a seus servos.
16 ೧೬ ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು.
Ele tomará vossos servos, e vossas servas, e vossos bons rapazes, e vossos asnos, e com eles fará suas obras.
17 ೧೭ ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು.
Tomará o dízimo também do vosso rebanho, e sereis seus servos.
18 ೧೮ ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.
E clamareis aquele dia por causa de vosso rei que vos havereis escolhido, mas o SENHOR não vos ouvirá naquele dia.
19 ೧೯ ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;
Porém o povo não quis ouvir a voz de Samuel; antes disseram: Não, mas sim que haverá rei sobre nós:
20 ೨೦ ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.
E nós seremos também como todas as nações, e nosso rei nos governará, e sairá diante de nós, e fará nossas guerras.
21 ೨೧ ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ
E ouviu Samuel todas as palavras do povo, e referiu-as aos ouvidos do SENHOR.
22 ೨೨ ಆತನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು” ಎಂದನು. ಆಗ ಸಮುವೇಲನು ಇಸ್ರಾಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ” ಎಂದು ಅಪ್ಪಣೆಕೊಟ್ಟನು.
E o SENHOR disse a Samuel: Ouve sua voz, e põe rei sobre eles. Então disse Samuel aos homens de Israel: Ide-vos cada um à sua cidade.