< ಥೆಸಲೋನಿಕದವರಿಗೆ ಮೊದಲನೆಯ ಪತ್ರಿಕೆ 2 >
1 ೧ ಸಹೋದರರೇ, ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ,
For you yourselves, brothers, are conscious that our coming among you was not without effect:
2 ೨ ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.
But after we had first undergone much pain and been cruelly attacked as you saw, at Philippi, by the help of God we gave you the good news without fear, though everything was against us.
3 ೩ ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.
For our witness does not come from error or from an unclean heart or from deceit:
4 ೪ ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.
But even as the good news was given to us by the approval of God, so we give it out; not as pleasing men, but God by whom our hearts are tested.
5 ೫ ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ.
For it is common knowledge among you that we never made use of smooth-sounding false words, and God is witness that at no time were we secretly desiring profit for ourselves,
6 ೬ ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.
Or looking for glory from men, from you or from others, when we might have made ourselves a care to you as Apostles of Christ.
7 ೭ ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.
But we were gentle among you, like a woman caring for her little ones:
8 ೮ ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.
Even so, being full of loving desire for you, we took delight in giving you not only God's good news, but even our lives, because you were dear to us.
9 ೯ ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.
For you have the memory, my brothers, of our trouble and care; how, working night and day, so that we might not be a trouble to any of you, we gave you the good news of God.
10 ೧೦ ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.
You are witnesses, with God, how holy and upright and free from all evil was our way of life among you who have faith;
11 ೧೧ ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,
Even as you saw how, like a father with his children, we were teaching and comforting you all, and giving witness,
12 ೧೨ ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.
So that your lives might be pleasing to God, who has given you a part in his kingdom and his glory.
13 ೧೩ ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.
And for this cause we still give praise to God, that, when the word came to your ears through us, you took it, not as the word of man, but, as it truly is, the word of God, which has living power in you who have faith.
14 ೧೪ ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
For you, my brothers, took as your examples the churches of God which are in Judaea in Christ Jesus; because you underwent the same things from your countrymen as they did from the Jews;
15 ೧೫ ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
Who put to death the Lord Jesus and the prophets, violently driving us out; who are unpleasing to God and against all men;
16 ೧೬ ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.
Who, to make the measure of their sins complete, kept us from giving the word of salvation to the Gentiles: but the wrath of God is about to come on them in the fullest degree.
17 ೧೭ ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.
But we, my brothers, being away from you for a short time, in body but not in heart, had all the more desire to see your face;
18 ೧೮ ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು.
For which reason we made attempts to come to you, even I, Paul, once and again; but Satan kept us from coming.
19 ೧೯ ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.
For what is our hope or joy or crown of glory? Are not even you, before our Lord Jesus, at his coming?
20 ೨೦ ಹೀಗಿರಲಾಗಿ ನೀವೇ ನಮ್ಮ ಮಹಿಮೆ ಮತ್ತು ಸಂತೋಷವೂ ಆಗಿದ್ದೀರಿ.
For you are our glory and our joy.