< ಥೆಸಲೋನಿಕದವರಿಗೆ ಮೊದಲನೆಯ ಪತ್ರಿಕೆ 5 >
1 ೧ ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ.
Men om tider och stunder, käre bröder, är icke behof att skrifva eder.
2 ೨ ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
Ty I veten väl, att Herrans dag skall komma såsom en tjuf om nattena.
3 ೩ “ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
Derföre, när de varda sägande: Det är frid, och all ting utan fara; då skall dem hasteligit förderf öfverkomma, lika som födslopinan qvinnone påkommer, som hafvandes är; och de skola icke kunna undfly.
4 ೪ ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ.
Men I, käre bröder, ären icke uti mörkret, att den dagen, såsom en tjuf, skall få eder fatt.
5 ೫ ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
Alle I ären ljusens barn, och dagsens barn; vi hörom icke nattene till, icke heller mörkret.
6 ೬ ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
Så låter oss nu icke sofva, såsom de andre; utan låter oss vaka och nyktre vara;
7 ೭ ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ.
Ty de som sofva, de sofva om nattena; och de som druckne äro, de äro druckne om nattena.
8 ೮ ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
Men vi, som dagen tillhöre, skole nyktre vara, iklädde trones och kärlekens kräfveto, och salighetenes hopp för en hjelm.
9 ೯ ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
Ty Gud hafver icke satt oss till vrede, utan att äga salighet, genom vår Herra Jesum Christum;
10 ೧೦ ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.
Den för oss död är; på det, ehvad vi vake eller sofve, skole vi lefva samt med honom.
11 ೧೧ ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
Derföre förmaner eder inbördes, och uppbygger hvar den andra, såsom I ock gören.
12 ೧೨ ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ,
Men vi bedje eder, käre bröder, att I kännen dem som arbeta ibland eder, och stå eder före i Herranom, och förmana eder;
13 ೧೩ ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.
Håller dem dess kärare, för deras verks skull; och varer fridsamme med dem.
14 ೧೪ ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
Men vi bedje eder, käre bröder, förmaner de osediga, tröster de klenmodiga, hjelper de svaga, varer långmodige vid hvar man.
15 ೧೫ ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
Ser till, att ingen vedergäller någrom ondt för ondt; utan alltid farer efter det goda inbördes, och med hvar man.
16 ೧೬ ಯಾವಾಗಲೂ ಸಂತೋಷಿಸಿರಿ,
Varer alltid glade.
17 ೧೭ ಎಡೆಬಿಡದೆ ಪ್ರಾರ್ಥನೆಮಾಡಿರಿ,
Bedjer utan återvändo.
18 ೧೮ ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
Varer tacksamme i all ting; ty det är Guds vilje om eder, genom Jesum Christum.
19 ೧೯ ಪವಿತ್ರಾತ್ಮನನ್ನು ನಂದಿಸಬೇಡಿ,
Utsläcker icke Andan.
20 ೨೦ ಪ್ರವಾದನೆಗಳನ್ನು ಹಿನೈಸಬೇಡಿರಿ.
Förakter icke Prophetier.
21 ೨೧ ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
Men pröfver all ting, och behåller det godt är.
22 ೨೨ ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
Flyr allt det som ondt synes.
23 ೨೩ ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
Men sjelfver fridsens Gud helge eder öfver allt, att edar hele ande, och själ, och kropp, måtte vara behållen utan straff, i vårs Herras Jesu Christi tillkommelse.
24 ೨೪ ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.
Han är trofast, som eder kallat hafver; den det ock väl fullbordar.
25 ೨೫ ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
Käre bröder, beder för oss.
26 ೨೬ ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.
Helser alla bröderna uti en helig kyss.
27 ೨೭ ಈ ಪತ್ರಿಕೆಯನ್ನು ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಲ್ಲಿ ಆಜ್ಞಾಪಿಸುತ್ತೇನೆ.
Jag besvär eder vid Herran, att I denna Epistelen läsa låten för alla heliga bröderna.
28 ೨೮ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
Vårs Herras Jesu Christi nåd vare med eder. Amen.