< ಥೆಸಲೋನಿಕದವರಿಗೆ ಮೊದಲನೆಯ ಪತ್ರಿಕೆ 1 >
1 ೧ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.
Павло, Силуан та Тимофій. Церкві із Солуня в Бозі Отці та Господі Ісусі Христі. Благодать вам і мир!
2 ೨ ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.
Ми завжди дякуємо Богові за всіх вас і постійно згадуємо про вас у своїх молитвах,
пам’ятаючи перед Богом, нашим Отцем, про ваше діло віри, про вашу працю, [яку ви виконуєте] з любові, та про ваше терпіння в надії на нашого Господа Ісуса Христа.
4 ೪ ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು.
Ми знаємо, брати, що Бог любить вас і обрав вас,
5 ೫ ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.
тому що наша Добра Звістка прийшла до вас не тільки в слові, але й у силі та Святому Дусі із повним переконанням. Бо ви знаєте, як ми жили серед вас і заради вас.
6 ೬ ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.
Ви стали нашими та Господніми послідовниками, прийнявши Слово серед тяжких страждань із радістю, [дарованою] Святим Духом,
7 ೭ ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.
і ставши прикладом для всіх віруючих у Македонії та Ахаї.
8 ೮ ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.
Адже Слово Господнє від вас пролунало не лише в Македонії та Ахаї, але й в інших місцях. Про вашу віру в Бога стало відомо всюди, так що нам не потрібно нічого говорити.
9 ೯ ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ
Вони самі звіщають про те, як ви нас прийняли і як ви навернулися від ідолів до Бога, щоб служити живому та істинному Богу
10 ೧೦ ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.
й чекати з небес Його Сина, Якого Він воскресив із мертвих, Ісуса, Який рятує нас від майбутнього гніву.