< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 1 >
1 ೧ ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು
Павло, апостол Христа Ісуса, за наказом Бога, нашого Спасителя, та Христа Ісуса, нашої надії.
2 ೨ ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.
Тимофієві, [моєму] справжньому синові у вірі. Благодать, милосердя [і] мир від Бога Отця та Христа Ісуса, нашого Господа.
3 ೩ ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,
Ідучи до Македонії, я заохотив тебе залишитися в Ефесі, щоб ти наказав декому не поширювати іншого вчення
4 ೪ ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.
й не звертати уваги на міфи та нескінченні родоводи, що заохочують більше до пустих суперечок, аніж до Божої місії, яка через віру.
5 ೫ ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.
Мета ж цієї настанови – любов, що [походить] із чистого серця, доброї совісті та нелицемірної віри.
6 ೬ ಕೆಲವರು ಈ ಗುರಿಯನ್ನು ಬಿಟ್ಟು ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ.
Деякі віддалилися від цього [та] повернулися до пустих балачок,
7 ೭ ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.
бажаючи стати вчителями Закону. Вони не розуміють ні того, що кажуть, ні того, на чому так твердо наполягають.
8 ೮ ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು.
Ми знаємо, що Закон добрий, якщо застосовувати його належно.
9 ೯ ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,
Знаємо й те, що Закон існує не для праведника, а для беззаконних і непокірних, нечестивих і грішних, безбожних і світських, вбивць батька та вбивць матері, вбивць людей,
10 ೧೦ ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.
для розпусників, гомосексуалістів, работорговців, брехунів, лжесвідків та будь-кого іншого, що противиться здоровому вченню
11 ೧೧ ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.
згідно з Доброю Звісткою слави блаженного Бога, що була мені довірена.
12 ೧೨ ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;
Я дякую Христу Ісусу, нашому Господу, Який зміцнив мене, бо визнав мене вірним [і] призначив [Собі] на служіння,
[хоча] раніше я був богохульником, переслідувачем і жорстокою людиною. Але мені було виявлено милість, адже я діяв [так] через нерозуміння, у невірі.
14 ೧೪ ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.
А благодать нашого Господа надмірно пролилась [на мене] разом із вірою та любов’ю, які є в Христі Ісусі.
15 ೧೫ ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.
Правдиве це твердження та гідне всякого прийняття: Христос Ісус прийшов у світ спасти грішників, з яких я – найперший.
16 ೧೬ ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. (aiōnios )
Але саме через це мені було виявлено милість, щоб на мені, найпершому [з грішників], Христос Ісус показав усе [Своє] довготерпіння, як приклад для тих, хто має повірити в Нього для вічного життя. (aiōnios )
17 ೧೭ ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiōn )
Тож вічному Царю – нетлінному, невидимому та єдиному Богу – нехай буде честь і слава навіки-віків! Амінь. (aiōn )
18 ೧೮ ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.
Тимофію, сину, передаю тобі цю настанову згідно з пророцтвами, сказаними про тебе раніше, щоб ти через них вів добру боротьбу,
19 ೧೯ ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.
маючи віру та добре сумління, яке деякі відкинули, через що їхня віра зазнала руйнування.
20 ೨೦ ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
Серед них Гіменей та Олександр, котрих я передав сатані, щоб вони навчилися не хулити Бога.