< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 2 >
1 ೧ ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ.
Por isso eu te exorto, antes de tudo, que se façam pedidos, orações, intercessões [e] atos de gratidão por todas as pessoas;
2 ೨ ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.
pelos reis, e por todos os que estão em posição superior, para que tenhamos uma vida quieta e sossegada, em toda devoção divina e honestidade.
3 ೩ ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ.
Isso é bom e agradável diante de Deus nosso Salvador;
4 ೪ ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.
que quer que todas as pessoas se salvem e venham ao conhecimento da verdade.
5 ೫ ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.
Pois [há] um só Deus, e um só Mediador entre Deus e os seres humanos: o humano Cristo Jesus.
6 ೬ ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.
Ele mesmo se deu como resgate por todos, [como] testemunho ao seu tempo.
7 ೭ ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.
Para isso fui constituído pregador e apóstolo, instrutor dos gentios na fé e na verdade (estou dizendo a verdade, não mentindo).
8 ೮ ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.
Portanto, quero que os homens orem em todo lugar, levantando mãos santas, sem ira nem briga.
9 ೯ ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ
De semelhante maneira, as mulheres se adornem com roupa respeitosa, com pudor e sobriedade, não com tranças, ouro, pérolas, ou roupas caras;
10 ೧೦ ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
mas sim, com boas obras, como é adequado às mulheres que declaram reverência a Deus.
11 ೧೧ ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು.
A mulher aprenda quietamente, com toda submissão.
12 ೧೨ ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು.
Porém não permito que a mulher ensine, nem use de autoridade sobre o marido, mas sim, que esteja em silêncio.
13 ೧೩ ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು.
Pois primeiro foi formado Adão, depois Eva.
14 ೧೪ ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.
E Adão não foi enganado; mas a mulher foi enganada, e caiu em transgressão.
15 ೧೫ ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.
Porém ela se salvará tendo parto, se permanecerem na fé, amor, e santificação com sobriedade.