< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 3 >
1 ೧ ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
Mi khat in bishop nasep a seam nuam le, nasep pha seam nuam a hihi, ci sia thuman a hihi.
2 ೨ ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.
Bishop sia paubang ngawl, zi khat nei, a kidawm, pilvang, nuntakzia pha, leangna do thiam, ngual hil thei hi tu a;
3 ೩ ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.
Sapittui dawn nuam mama, ngual vua thei, a thiangtho ngawl sum duhop mi hi ngawl tu hi; thuak zo tu, ngual taw thu ki nial in buai ngawl tu, duhop ngawl tu ahizong;
4 ೪ ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.
A innkuan phatak in a ukzo, a tate in a thu ni tu a, a zatak huai hi tu hi;
5 ೫ ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?
Banghangziam cile ama innkuan zong bangbang in uk tu ci a he bua le, Pathian i pawlpi sia bangbang in keam thei tu ziam?
6 ೬ ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.
Thu um thak hi ngawl tu hi, tabang hi bale ki phatsakna taw ki suangtak tu a, doaimangpa sia ki phatsakna taw a pu bang in puk tu hi.
7 ೭ ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.
Tua bek domngawl in a puasang mihing te mai ah minpha a nga mi hi hamtang tahen; tabang hi bale zawnsakna le doaimangpa i thang sung ah awk tu hi.
8 ೮ ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,
Tasia bangma in upa te zong a zatak huai, leii ka ngawl, sapittui tampi dawn ngawl, a thiangtho ngawl sum a duhop ngawl te;
9 ೯ ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.
Upna thuthuk sia a thiangtho khentel theina taw a len hi tahen.
10 ೧೦ ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.
Hi te sia ki ze-et masa tu a; paubang ngawl ci a ki heak thiang zawkciang in, upa nasep seam tahen.
11 ೧೧ ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
Tasia bangma in amate i zite zong a zatak huai, a man ngawl ngual a mawsiat thei te hi ngawl in, pilvang le na theampo ah a muanhuai te a hi hamtang kul hi.
12 ೧೨ ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.
Upa te sia zi khat nei, a tate le a innsung phatak in a uk zo te hi tahen.
13 ೧೩ ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
Banghangziam cile upa nasep phatak in a seam te sia amate atu in dinmun pha a nga hi a, Christ upna sung ah hangsanna lianpi zong nga tu hi.
14 ೧೪ ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
Note kung ah a manlangtak in paitu lametna taw hi te at in kong thak hi:
15 ೧೫ ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
Ahihang ngei kong om tha le, Pathian innkuanpui sung ah bangbang in om tu ci na heak thei natu uh in kong at hi, tua Pathian innkuanpui sia a nungta Pathian i pawlpi hi a, thuman khuam le zungpi a hihi.
16 ೧೬ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
Taciang Pathianmi hina thuthuk sia thu ki nial na om ngawl in thupi hi: Pathian sia cilesa in kilang zo a, Thaa sung ah thutang suaksak zo hi, vantungmi te in mu zo uh a, Gentile te kung ah ki pualak zo hi, leitung ah zong um zo uh a, minthanna sung ah tumsak zo hi.