< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 3 >

1 ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
Wiarygodne to słowa: Jeśli ktoś pragnie biskupstwa, pragnie dobrej pracy.
2 ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.
Biskup więc ma być nienaganny, mąż jednej żony, czujny, trzeźwy, przyzwoity, gościnny, zdolny do nauczania;
3 ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.
Nieoddający się piciu wina, nieskłonny do bicia, niełakomy na brudny zysk, ale opanowany, niekłótliwy, niechciwy;
4 ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.
Dobrze rządzący własnym domem, trzymający dzieci w posłuszeństwie i wszelkim szacunku;
5 ಸ್ವಂತ ಮನೆಯವರನ್ನು ನಡೆಸುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?
Jeśli bowiem ktoś nie umie rządzić własnym domem, jakże będzie mógł troszczyć się o kościół Boży?
6 ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.
Nie nowicjusz, żeby nie wbił się w pychę i nie wpadł w potępienie diabelskie.
7 ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.
Musi też mieć dobre świadectwo od tych, którzy są na zewnątrz, żeby nie [ściągał na siebie] hańby i nie wpadł w sidła diabła.
8 ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ, ಮದ್ಯಾಸಕ್ತರೂ, ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ,
Diakoni także [mają być] poważni, niedwulicowi, nienadużywający wina, niełakomi na brudny zysk;
9 ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.
Zachowujący tajemnicę wiary w czystym sumieniu.
10 ೧೦ ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.
I niech będą najpierw wypróbowani, a potem niech służą, jeśli są nienaganni.
11 ೧೧ ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
[Ich] żony także [niech będą] poważne, nierzucające oszczerstw, trzeźwe, wierne we wszystkim.
12 ೧೨ ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.
Diakoni niech będą mężami jednej żony, rządzący dobrze dziećmi i własnymi domami.
13 ೧೩ ಸಭಾಸೇವಕರಾಗಿ ಚೆನ್ನಾಗಿ ಕೆಲಸ ಮಾಡಿರುವವರು ತಮಗೆ ಒಳ್ಳೆಯ ಪದವಿಯನ್ನೂ, ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹುಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
Ci bowiem, którzy dobrze pełnią służbę, zyskują sobie zaszczytny stopień i wielką śmiałość w wierze, która jest w Chrystusie Jezusie.
14 ೧೪ ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
Piszę ci to, mając nadzieję, że wkrótce przybędę do ciebie.
15 ೧೫ ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
A gdybym się opóźniał, [piszę, abyś] wiedział, jak należy postępować w domu Bożym, który jest kościołem Boga żywego, filarem i podporą prawdy.
16 ೧೬ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
A bez wątpienia wielka jest tajemnica pobożności: Bóg objawiony został w ciele, usprawiedliwiony w Duchu, widziany był przez anioły, głoszony był poganom, uwierzono mu na świecie, wzięty został w górę do chwały.

< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 3 >