< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 4 >
1 ೧ ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
Men Anden säger klarliga, att i yttersta tiderna skola somlige falla ifrå trone, hållande sig intill bedrägeliga andar och djeflalärdom;
2 ೨ ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,
Genom dem som med skrymteri tala lögn, och hafva brändt tecken i sin samvet;
3 ೩ ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.
Och förbjuda ägtenskap; bjuda skona maten, som Gud skapat hafver till att taga med tacksägelse, dem trognom, och dem som hafva förstått sanningena.
4 ೪ ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.
Ty allt det Gud skapat hafver är godt, och intet bortkastandes, som med tacksägelse taget varder.
5 ೫ ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.
Ty det varder helgadt genom Guds ord och bönen.
6 ೬ ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.
När du sådant gifver bröderna före, så blifver du en god Jesu Christi tjenare; såsom du uppfödder äst i trones ordom, och god lärdom, med hvilken du alltid varit hafver.
7 ೭ ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.
Men oandeliga och kärlingafabler låt fara; men öfva dig sjelf till gudaktighet.
8 ೮ ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.
Ty lekamlig öfning är föga till nytto; men gudaktighet är nyttig till all ting, och hafver löfte om detta lifvet, och det tillkommande.
9 ೯ ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ.
Det är ju ett fast ord, och i alla måtto väl värdt att man det anammar.
10 ೧೦ ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.
Ty derpå arbete vi ock, och vardom försmädde, att vi hoppas på lefvandes Gud, som är alla menniskors Frälsare, men besynnerliga deras som tro.
11 ೧೧ ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
Sådant bjud, och lär.
12 ೧೨ ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.
Ingen förakte din ungdom; utan var dem trognom en eftersyn, i ord, i umgängelse, i kärlek, i andanom, i trone, i kyskhet.
13 ೧೩ ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.
Håll på att läsa, förmana, lära, tilldess jag kommer.
14 ೧೪ ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.
Försumma icke den gåfvo som i dig är, den dig gifven är genom prophetien, med Presternas händers åläggning.
15 ೧೫ ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.
Detta akta; blif deruti; på det din förbättring må hvarjom manne uppenbar varda.
16 ೧೬ ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
Haf akt på dig sjelfvan, och på lärdomen; blif i dessa stycker; ty om du så gör, frälsar du dig sjelfvan, och dem som dig höra.