< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 5 >
1 ೧ ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,
Não repreendas ao idoso asperamente, mas exorta-o como a um pai; aos jovens, como a irmãos;
2 ೨ ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.
às idosas, como a mães; e às moças, como a irmãs, em toda pureza.
3 ೩ ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
Honra as viúvas que são verdadeiramente viúvas.
Mas, se alguma viúva tiver filhos ou netos, aprendam primeiro a exercer piedade com a sua própria família, e a recompensar os seus pais; porque isso é agradável diante de Deus.
5 ೫ ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
A que é verdadeiramente viúva e desamparada espera em Deus, e persevera noite e dia em rogos e orações.
6 ೬ ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.
Mas a que se entrega aos prazeres, enquanto vive, está morta.
7 ೭ ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು.
Manda, pois, essas coisas, para que sejam irrepreensíveis.
8 ೮ ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
Porém, se alguém não cuida dos seus, e principalmente dos de sua própria família, negou a fé, e é pior que um incrédulo.
9 ೯ ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,
A viúva, para ser registrada, não deve ter menos de sessenta anos, e haver sido mulher de um marido.
10 ೧೦ ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.
Ela deve ter testemunho de boas obras: se criou filhos, se foi hospitaleira, se lavou os pés dos santos, se socorreu os aflitos, se seguiu toda boa obra.
11 ೧೧ ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.
Mas não admitas as viúvas jovens; porque, quando têm desejos sensuais contra Cristo, querem se casar;
12 ೧೨ ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು.
e têm condenação, por haverem anulado a primeira fé.
13 ೧೩ ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.
E, além disso, também aprendem a andar ociosas de casa em casa; e não somente ociosas, mas também fofoqueiras e curiosas, falando o que não se deve.
14 ೧೪ ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
Por isso, quero que as mais jovens se casem, gerem filhos, administrem a casa, [e] não deem nenhuma oportunidade ao adversário de maldizer.
15 ೧೫ ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ.
Pois algumas já se desviaram e seguiram Satanás.
16 ೧೬ ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
Se alguma crente tem viúvas, que as ajude, e não sobrecarregue a igreja, para que ela possa ajudar as que são de verdade viúvas.
17 ೧೭ ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.
Os presbíteros [ou: anciãos] que lideram bem sejam estimados como dignos de honra dobrada, principalmente os que trabalham na palavra e na doutrina.
18 ೧೮ “ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.
Pois a Escritura diz: “Ao boi que debulha não atarás a boca”; e: “o trabalhador é digno do seu salário”.
19 ೧೯ ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.
Não aceites acusação contra um presbítero, a não ser com duas ou três testemunhas.
20 ೨೦ ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.
Aos que pecarem, repreende-os na presença de todos, para que os outros também tenham temor.
21 ೨೧ ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.
Ordeno-te, diante de Deus, de Cristo Jesus, e dos anjos escolhidos, que guardes essas coisas sem preconceitos, fazendo nada por favoritismo.
22 ೨೨ ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.
A ninguém imponhas as mãos apressadamente, nem participes dos pecados alheios; conserva-te puro.
23 ೨೩ ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.
Não bebas mais [somente] água, mas usa [também] de um pouco de vinho, por causa do teu estômago, e das tuas frequentes enfermidades.
24 ೨೪ ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.
Os pecados de algumas pessoas são evidentes antes mesmo do juízo, mas os de algumas são manifestos depois.
25 ೨೫ ಹಾಗೆಯೇ ಕೆಲವು ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ಕ್ರಿಯೆಗಳು ಬೆಳಕಿಗೆ ಬಾರದ್ದಿದ್ದರೂ ಮರೆಯಾಗಿರಲಾರವು.
Semelhantemente, também, as boas obras são evidentes; e as que não são assim não se podem esconder.