< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 6 >

1 ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.
All who are under the yoke of slavery should regard their masters as fully worthy of honor, so that God’s name and our teaching will not be discredited.
2 ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.
Those who have believing masters should not show disrespect because they are brothers, but should serve them all the more, since those receiving their good service are beloved believers. Teach and encourage these principles.
3 ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,
If anyone teaches another doctrine and disagrees with the sound words of our Lord Jesus Christ and with godly teaching,
4 ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.
he is conceited and understands nothing. Instead, he has an unhealthy interest in controversies and semantics, out of which come envy, strife, abusive talk, evil suspicions,
5 ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.
and constant friction between men of depraved mind who are devoid of the truth. These men regard godliness as a means of gain.
6 ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
Of course, godliness with contentment is great gain.
7 ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.
For we brought nothing into the world, so we cannot carry anything out of it.
8 ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.
But if we have food and clothing, we will be content with these.
9 ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.
Those who want to be rich, however, fall into temptation and become ensnared by many foolish and harmful desires that plunge them into ruin and destruction.
10 ೧೦ ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
For the love of money is the root of all kinds of evil. By craving it, some have wandered away from the faith and pierced themselves with many sorrows.
11 ೧೧ ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
But you, O man of God, flee from these things and pursue righteousness, godliness, faith, love, perseverance, and gentleness.
12 ೧೨ ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ. (aiōnios g166)
Fight the good fight of the faith. Take hold of the eternal life to which you were called when you made the good confession before many witnesses. (aiōnios g166)
13 ೧೩ ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ,
I charge you in the presence of God, who gives life to all things, and of Christ Jesus, who made the good confession in His testimony before Pontius Pilate:
14 ೧೪ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ತನಕ ನೀನು ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ಕಾಪಾಡಿಕೊಂಡಿರಬೇಕು.
Keep this commandment without stain or reproach until the appearance of our Lord Jesus Christ,
15 ೧೫ ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,
which the blessed and only Sovereign One—the King of kings and Lord of lords—will bring about in His own time.
16 ೧೬ ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ. ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು. ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಎಂದೆಂದಿಗೂ ಇರಲಿ. ಆಮೆನ್. (aiōnios g166)
He alone is immortal and dwells in unapproachable light. No one has ever seen Him, nor can anyone see Him. To Him be honor and eternal dominion! Amen. (aiōnios g166)
17 ೧೭ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು. (aiōn g165)
Instruct those who are rich in the present age not to be conceited and not to put their hope in the uncertainty of wealth, but in God, who richly provides all things for us to enjoy. (aiōn g165)
18 ೧೮ ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.
Instruct them to do good, to be rich in good works, and to be generous and ready to share,
19 ೧೯
treasuring up for themselves a firm foundation for the future, so that they may take hold of that which is truly life.
20 ೨೦ ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.
O Timothy, guard what has been entrusted to you. Avoid irreverent, empty chatter and the opposing arguments of so-called “knowledge,”
21 ೨೧ ಕೆಲವರು ಆ ಸುಳ್ಳಾದ ಜ್ಞಾನವನ್ನು ಒಪ್ಪಿಕೊಂಡು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗಿ ಹೋದರು. ಕೃಪೆಯು ನಿಮ್ಮೊಂದಿಗಿರಲಿ.
which some have professed and thus swerved away from the faith. Grace be with you all.

< ತಿಮೊಥೆಯನಿಗೆ ಬರೆದ ಮೊದಲನೆಯ ಪತ್ರಿಕೆ 6 >