< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 11 >
1 ೧ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೂ, ರಾಜ್ಯವನ್ನು ತಿರುಗಿ ತನ್ನ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
Zodra Roboam nu te Jerusalem was aangekomen, verzamelde hij uit de stammen Juda en Benjamin wel honderd tachtigduizend strijdbare mannen, om tegen Israël oorlog te voeren en het koningschap voor Roboam terug te winnen.
2 ೨ ಆಗ ದೇವರ ಮನುಷ್ಯನಾದ ಶೆಮಾಯನಿಗೆ, ಯೆಹೋವನ ವಾಕ್ಯವು ಉಂಟಾಗಿ ಹೇಳಿದ್ದೇನಂದರೆ,
Maar het woord van Jahweh werd tot den godsman Sjemajáhoe gericht:
3 ೩ “ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ,
Zeg aan Roboam, den zoon van Salomon, den koning van Juda:
4 ೪ ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು’” ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು.
Zo spreekt Jahweh! Trekt niet op, en voert geen oorlog tegen uw broeders! Iedereen kere terug naar zijn huis; want door Mij is dit alles beschikt. Zij luisterden naar Jahweh, en zagen er van af, tegen Jeroboam op te trekken.
5 ೫ ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.
Roboam bleef dus in Jerusalem wonen en verbouwde verschillende steden in Juda tot vesting.
6 ೬ ಆ ಪಟ್ಟಣಗಳು ಯಾವುವೆಂದರೆ: ಬೇತ್ಲೆಹೇಮ್, ಏತಾಮ್, ತೆಕೋವ,
Zo bracht hij Betlehem, Etam, Tekóa,
7 ೭ ಬೇತ್ಚೂರ್, ಸೋಕೋ, ಅದುಲ್ಲಾಮ್,
Bet-Soer, Soko, Adoellam,
9 ೯ ಅದೋರೈಮ್, ಲಾಕೀಷ್, ಅಜೇಕ,
Adoráim, Lakisj, Azeka,
10 ೧೦ ಚೊರ್ಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು.
Sora, Ajjalon en Hebron, die in Juda en Benjamin lagen, in staat van verdediging,
11 ೧೧ ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.
maakte er sterke vestingen van, stelde er bevelhebbers aan en sloeg er voorraden op van proviand, olie en wijn;
12 ೧೨ ಪ್ರತಿಯೊಂದು ಪಟ್ಟಣದಲ್ಲಿ ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿ, ಅವುಗಳನ್ನು ಮತ್ತಷ್ಟು ಭದ್ರಪಡಿಸಿದನು. ಯೆಹೂದ ಬೆನ್ಯಾಮೀನ್ ಕುಲಗಳು ಅವನ ಸ್ವಾಧೀನದಲ್ಲಿದ್ದವು.
en daar in die verschillende steden schilden en lansen aanwezig waren, maakte hij ze buitengewoon sterk. Zo bleven Juda en Benjamin voor hem behouden.
13 ೧೩ ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.
De priesters en levieten die in Israël woonden verhuisden uit hun woonplaatsen, en vestigden zich bij hem.
14 ೧೪ ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
De levieten moesten namelijk hun landerijen en bezittingen verlaten en naar Juda en Jerusalem uitwijken, omdat Jeroboam met zijn zonen hen had afgezet als priesters van Jahweh,
15 ೧೫ ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.
en zelf priesters aanstelde op de offerhoogten, bij de bokken- en kalverbeelden, die hij gemaakt had.
16 ೧೬ ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.
Zij werden gevolgd door velen uit alle stammen van Israël, die vastbesloten waren, Jahweh te blijven vereren, den God van Israël, en die naar Jerusalem kwamen, om Jahweh te offeren, den God van hun vaderen.
17 ೧೭ ಇವರೆಲ್ಲರೂ ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗು ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಅಂತೆಯೇ ಯೆಹೂದ ರಾಜ್ಯವು ಆ ವರ್ಷಗಳಲ್ಲಿ ಅಭಿವೃದ್ಧಿಯಾಗಿ, ಸೊಲೊಮೋನನ ಮಗನಾದ ರೆಹಬ್ಬಾಮನು ಬಲಗೊಂಡನು.
Zij versterkten het koninkrijk Juda, en waren drie jaar lang een steun voor Roboam, den zoon van Salomon; want drie jaar lang bewandelde hij de weg van David en Salomon.
18 ೧೮ ರೆಹಬ್ಬಾಮನು ದಾವೀದನ ಮಗನಾದ ಯೆರೀಮೋತನ ಮಗಳಾದ ಮಹ್ಲತ್ತಳನ್ನು, ಇಷಯನ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳನ್ನೂ ಹೆಂಡತಿಯನ್ನಾಗಿ ಮಾಡಿಕೊಂಡನು.
Roboam nam Abicháil tot vrouw, de dochter van Eliab, den zoon van Jerimot, zoon van David, zoon van Jesse.
19 ೧೯ ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.
Zij schonk hem de zonen Jeöesj, Sjemarja en Záham.
20 ೨೦ ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.
Na haar nam hij Maäka tot vrouw, de dochter van Absalom; zij schonk hem Abias, Attai, Ziza en Sjelomit.
21 ೨೧ ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ, ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ, ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.
Roboam hield van Maäka, de dochter van Absalom, veel meer dan van al zijn andere vrouwen en bijvrouwen; hij had namelijk achttien vrouwen en zestig bijvrouwen, en was de vader van acht en twintig zonen en zestig dochters.
22 ೨೨ ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣ ತಮ್ಮಂದಿರಲ್ಲಿ ಪ್ರಧಾನನ್ನಾಗಿಯೂ ಪ್ರಭುವನ್ನಾಗಿಯೂ ನೇಮಿಸಿದನು.
Roboam stelde Abias, den zoon van Maäka, als kroonprins aan het hoofd van zijn broers; want hem wilde hij koning maken.
23 ೨೩ ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.
Hij was echter zo verstandig, enkelen van zijn andere zonen in alle streken van Juda en Benjamin over de verschillende vestingen te verdelen, waar hij hun een rijk bestaan verleende en veel vrouwen verschafte.