< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 12 >
1 ೧ ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.
Bangʼe kane Rehoboam nosegurore motegno kaka ruoth, en kaachiel gi jo-Israel duto negijwangʼo chike Jehova Nyasaye.
2 ೨ ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.
Nikech negiweyo rito chike Jehova Nyasaye, Shishak ruodh Misri nomonjo Jerusalem e higa mar abich mar loch Ruoth Rehoboam.
3 ೩ ಸಾವಿರದ ಇನ್ನೂರು ರಥಗಳನ್ನೂ, ಅರುವತ್ತು ಸಾವಿರ ಮಂದಿ ರಾಹುತರನ್ನೂ, ಐಗುಪ್ತದಿಂದ ಅಸಂಖ್ಯರಾದ ಲೂಬ್ಯ, ಸುಕ್ಕೀಯ, ಕೂಷ್ಯ ಸೈನಿಕರನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟು,
Nobiro gi geche lweny alufu achiel gi mia ariyo kod jolweny moidho farese alufu piero auchiel kod jolweny mangʼeny ma ok kwanre mawuotho mag jo-Libya gi jo-Suk kod Kush bende nobiro kode koa Misri,
4 ೪ ಯೆಹೂದ ದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಯೆರೂಸಲೇಮನ್ನು ಸಮೀಪಿಸಿದನು.
mokawo miech Juda mochiel motegno mobiro nyaka Jerusalem.
5 ೫ ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.
Eka janabi Shemaya nobiro ir Rehoboam kod jotelo mag Juda mano chokore Jerusalem nimar luoro nomakogi nikech Shishak kendo nowachonegi niya, “Ma e gima Jehova Nyasaye owacho, ‘Useweya omiyo an bende koro aweyou e lwet Shishak.’”
6 ೬ ಆಗ ಅರಸನೂ ಮತ್ತು ಇಸ್ರಾಯೇಲರ ನಾಯಕರೂ ಯೆಹೋವನು ನೀತಿವಂತನೆಂದು ಒಪ್ಪಿ ತಮ್ಮನ್ನು ತಾವೇ ತಗ್ಗಿಸಿಕೊಂಡರು.
Jotend jo-Israel kod ruoth nobolore kawacho niya, “Jehova Nyasaye ni kare.”
7 ೭ ಯೆಹೋವನ ವಾಕ್ಯವು ಶೆಮಾಯನಿಗೆ, “ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ.
Kane Jehova Nyasaye oneno ni negibolore kamano, wach mar Jehova Nyasaye nobiro ne Shemaya niya, “Nikech gisebolore e nyima ok anatiekgi to abiro resogi bangʼ ndalo manok. Mirimba ok nool Jerusalem koa e lwet Shishak.
8 ೮ ಆದರೂ ಅವರು ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು” ಎಂದು ಹೇಳಿದನು.
Kata kamano ginibed e bwo lochne mondo gingʼe pogruok manie kind tiyona kod tiyone ruodhi mag pinje mamoko.”
9 ೯ ಹೀಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
Kane Shishak ruodh jo-Misri omonjo Jerusalem, noyako mwandu hekalu mar Jehova Nyasaye kaachiel gi mwandu mag od ruoth. Nokawo gimoro amora kaachiel gi kuodi mag dhahabu mane Solomon ochuogo.
10 ೧೦ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳಪತಿಗೆ ಒಪ್ಪಿಸಿದನು.
Omiyo Ruoth Rehoboam nochwogo okumbni mag nyinyo mondo oket kar mane okawgo kendo nomiyo jotelo mag jorit mane rito rangach midonjogo e dala ruoth.
11 ೧೧ ಅರಸನು ಯೆಹೋವನ ಅಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ಹಿಂತಿರುಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಗಳಲ್ಲಿಡುವರು.
E kinde moro amora mane ruoth dhi e hekalu mar Jehova Nyasaye, joritogo ne tingʼo kuodigo kendo bangʼe negidwokogi e od jorito.
12 ೧೨ ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.
Nikech Rehoboam nobolore, mirimb Jehova Nyasaye nowuok kuome kendo ne ok otieke chutho. To bende ne nitie gik moko mabeyo Juda.
13 ೧೩ ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
Ruoth Rehoboam nogurore motegno Jerusalem kendo nodhi nyime kaka ruoth. Ne en ja-higni piero angʼwen gachiel kane obedo ruoth kendo norito piny kuom higni apar gabiriyo ka en Jerusalem dala maduongʼ mane Jehova Nyasaye oseyiero kuom dhout jo-Israel duto mondo Nyinge obedie. Min mare ne nyinge Naama ma nyar jo-Amon.
14 ೧೪ ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.
Notimo richo nikech ne ok oketo chunye mondo odwar Jehova Nyasaye.
15 ೧೫ ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
Kuom weche mag loch Rehoboam aa chakruokgi nyaka gikogi, donge ondikgi e kitap Shemaya janabi kod mar Ido janen mandiko nonro mag ji? Ne nitiere lweny ma ok rum e kind Rehoboam gi Jeroboam.
16 ೧೬ ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.
Rehoboam notho kaka kwerene kendo noyike kodgi e Dala Maduongʼ mar Daudi. Abija wuode nobedo ruoth kare.