< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 13 >
1 ೧ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,
В восемнадцатый год царствования Иеровоама воцарился Авия над Иудою.
2 ೨ ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.
Три года он царствовал в Иерусалиме; имя матери его Михаия, дочь Уриилова, из Гивы. И была война у Авии с Иеровоамом.
3 ೩ ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.
И вывел Авия на войну войско, состоявшее из людей храбрых, из четырехсот тысяч человек отборных; а Иеровоам выступил против него на войну с восемью стами тысяч человек, также отборных, храбрых.
4 ೪ ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮ್ ಎಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ.
И стал Авия на вершине горы Цемараимской, одной из гор Ефремовых, и говорил: послушайте меня, Иеровоам и все Израильтяне!
5 ೫ ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?
Не знаете ли вы, что Господь Бог Израилев дал царство Давиду над Израилем навек, ему и сыновьям его, по завету соли вечному?
6 ೬ ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರುದ್ಧವಾಗಿ ತಿರುಗಿ ಬಿದ್ದನು.
Но восстал Иеровоам, сын Наватов, раб Соломона, сына Давидова, и возмутился против господина своего.
7 ೭ ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡರು. ಆ ಸಮಯದಲ್ಲಿ ಎಳೇಪ್ರಾಯದವನೂ, ಮೃದುಸ್ವಭಾವವುಳ್ಳವನೂ, ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.
И собрались вокруг него люди пустые, люди развращенные, и укрепились против Ровоама, сына Соломонова; Ровоам же был молод и слаб сердцем и не устоял против них.
8 ೮ ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?
И ныне вы думаете устоять против царства Господня в руке сынов Давидовых, потому что вас великое множество, и у вас золотые тельцы, которых Иеровоам сделал вам богами.
9 ೯ ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.
Не вы ли изгнали священников Господних, сынов Аарона, и левитов, и поставили у себя священников, какие у народов других земель? Всякий, кто приходит для посвящения своего с тельцом и с семью овнами, делается у вас священником лжебогов.
10 ೧೦ ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರೂ, ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿದ್ದಾರೆ.
А у нас - Господь Бог наш; мы не оставляли Его, и Господу служат священники, сыны Аароновы, и левиты при своем деле.
11 ೧೧ ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
И сожигают они Господу всесожжения каждое утро и каждый вечер, и благовонное курение, и полагают рядами хлебы на столе чистом, и зажигают золотой светильник и лампады его, чтобы горели каждый вечер, потому что мы соблюдаем установление Господа Бога нашего, а вы оставили Его.
12 ೧೨ ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.
И вот, у нас во главе Бог, и священники Его, и трубы громогласные, чтобы греметь против вас. Сыны Израилевы! не воюйте с Господом Богом отцов ваших, ибо не получите успеха.
13 ೧೩ ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚು ಹಾಕುವುದಕ್ಕೋಸ್ಕರ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಸೈನ್ಯವು ಯೆಹೂದ್ಯರ ಎದುರಿನಲ್ಲಿಯೂ ಹೊಂಚುಹಾಕುವರು ಅವರ ಹಿಂದೆಯೂ ಇದ್ದರು.
Между тем Иеровоам послал отряд в засаду с тыла им, так что сам он был впереди Иудеев, а засада позади их.
14 ೧೪ ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.
И оглянулись Иудеи, и вот, им битва спереди и сзади; и возопили они к Господу, а священники затрубили трубами.
15 ೧೫ ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ಯೆಹೋವನಾದ ದೇವರು ಯಾರೊಬ್ಬಾಮನನ್ನೂ, ಎಲ್ಲಾ ಇಸ್ರಾಯೇಲರನ್ನೂ ಅಬೀಯನಿಂದಲೂ ಹಾಗೂ ಯೆಹೂದ್ಯರಿಂದಲೂ ಅಪಜಯಗೊಳಿಸಿದನು.
И воскликнули Иудеи. И когда воскликнули Иудеи, Бог поразил Иеровоама и всех Израильтян пред лицем Авии и Иуды.
16 ೧೬ ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.
И побежали сыны Израилевы от Иудеев, и предал их Бог в руки им.
17 ೧೭ ಅಬೀಯನೂ ಅವನ ಜನರೂ ಅವರಲ್ಲಿ ಅನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲಿನ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.
И произвели у них Авия и народ его поражение сильное; и пало убитых у Израиля пятьсот тысяч человек отборных.
18 ೧೮ ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.
И смирились тогда сыны Израилевы, и были сильны сыны Иудины, потому что уповали на Господа Бога отцов своих.
19 ೧೯ ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.
И преследовал Авия Иеровоама и взял у него города: Вефиль и зависящие от него города, и Иешану и зависящие от нее города, и Ефрон и зависящие от него города.
20 ೨೦ ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು.
И не входил уже в силу Иеровоам во дни Авии. И поразил его Господь, и он умер.
21 ೨೧ ಅಬೀಯನು ಬಲಗೊಂಡನು; ಅವನು ಹದಿನಾಲ್ಕು ಮಂದಿ ಹೆಂಡತಿಯರಿಂದ ಇಪ್ಪತ್ತೆರಡು ಮಂದಿ ಗಂಡುಮಕ್ಕಳನ್ನೂ ಹದಿನಾರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
Авия же усилился; и взял себе четырнадцать жен и родил двадцать два сына и шестнадцать дочерей.
22 ೨೨ ಅಬೀಯನ ಉಳಿದ ಚರಿತ್ರೆಯೂ ಅವನ ನಡೆನುಡಿಗಳೂ ಪ್ರವಾದಿಯಾದ ಇದ್ದೋವಿನ ಚರಿತ್ರೆ ಪುಸ್ತಕದಲ್ಲಿ ಬರೆದಿರುತ್ತವೆ.
Прочие деяния Авии и его поступки и слова описаны в сказании пророка Адды.