< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 14 >
1 ೧ ಅಬೀಯನು ಮೃತನಾಗಿ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದ ಹತ್ತು ವರ್ಷ ದೇಶದಾದ್ಯಂತ ಸಮಾಧಾನವಿತ್ತು.
А кад почину Авија код отаца својих и погребоше га у граду Давидовом, зацари се на његово место Аса, син његов. За његовог времена почину земља десет година.
2 ೨ ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.
И чињаше Аса шта је добро и право пред Господом Богом његовим.
3 ೩ ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡೆದು ಹಾಕಿ, ಅಶೇರ ವಿಗ್ರಹ ಸ್ತಂಭಗಳನ್ನು ಕೆಡವಿ ಬಿಟ್ಟನು.
Јер обори олтаре туђе и висине, и изломи ликове њихове и исече лугове њихове.
4 ೪ ಯೆಹೂದ್ಯರಿಗೆ, “ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ” ಎಂದು ಆಜ್ಞಾಪಿಸಿದನು.
И заповеди синовима Јудиним да траже Господа Бога отаца својих и да извршују закон и заповест Његову.
5 ೫ ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.
Обори по свим градовима Јудиним висине и сунчане ликове, и почину царство за његовог времена.
6 ೬ ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದುದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.
И сазида тврде градове у земљи Јудиној, јер земља беше у миру, нити беше рата с њим оних година, јер му Господ даде мир.
7 ೭ ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.
И рече Јуди: Да сазидамо ове градове и да их опашемо зидом и кулама и вратима и преворницама, док је земља наша; јер тражимо Господа Бога свог, тражисмо Га и даде нам мир одсвуда. И тако зидаше, и бише срећни.
8 ೮ ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯ ಸೈನಿಕರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ ಸೈನಿಕರೂ ಇದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.
И имаше Аса војске триста хиљада од Јуде са штитовима и копљима, и од Венијамина двеста и осамдесет хиљада са штитовима и луковима. Сви беху храбри војници.
9 ೯ ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.
И изиђе из њих Зара Етиопљанин с хиљаду хиљада војске и с триста кола, и дође до Марисе.
10 ೧೦ ಆಸನು ಅವನಿಗೆ ವಿರುದ್ಧವಾಗಿ ಹೊರಟನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬಯಲಿನಲ್ಲಿ ಇಬ್ಬರೂ ವ್ಯೂಹಕಟ್ಟಿದರು.
И Аса изиђе преда њ; и уврсташе се војске у долини Сефати код Марисе.
11 ೧೧ ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.
И завапи Аса ка Господу Богу свом говорећи: Господе Теби је ништа помоћи множини или нејаком; помози нам, Господе Боже наш, јер се у Те уздамо, и у Твоје име дођосмо на ово мноштво. Господе, Ти си Бог наш, не дај да може шта на Те човек.
12 ೧೨ ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.
И разби Господ Етиопљане пред Асом и пред Јудом, и побегоше Етиопљани.
13 ೧೩ ಕೂಷ್ಯರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು; ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಯೆಹೋವನ ಮತ್ತು ಆತನ ಸೈನ್ಯದ ಮುಂದೆ ನುಚ್ಚು ನೂರಾಗಿ ಹೋದರು. ಇಸ್ರಾಯೇಲರಿಗೆ ಅಪರಿಮಿತವಾದ ಕೊಳ್ಳೆ ಸಿಕ್ಕಿತು.
И тера их Аса и народ који беше с њим дори до Герара. и попадаше Етиопљани да их ни један не оста жив, јер се сатрше пред Господом и пред војском Његовом; и они однесоше плен велик веома.
14 ೧೪ ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅವರಿಗೆ ದೊಡ್ಡ ಕೊಳ್ಳೆ ಸಿಕ್ಕಿತು.
И побише све градове око Герара, јер дође на њих страх Господњи, и опленише све оне градове, јер беше у њима много плена.
15 ೧೫ ದನ ಕಾಯುವವರ ಗುಡಾರಗಳ ಮೇಲೂ ದಾಳಿಮಾಡಿ ಸಾಕಷ್ಟು ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು.
Побише и по становима пастирским људе, и одведоше много оваца и камила; и вратише се у Јерусалим.