< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 15 >

1 ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.
וַעֲזַרְיָהוּ בֶּן־עוֹדֵד הָיְתָה עָלָיו רוּחַ אֱלֹהִֽים׃
2 ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
וַיֵּצֵא לִפְנֵי אָסָא וַיֹּאמֶר לוֹ שְׁמָעוּנִי אָסָא וְכָל־יְהוּדָה וּבִנְיָמִן יְהוָה עִמָּכֶם בִּֽהְיֽוֹתְכֶם עִמּוֹ וְאִֽם־תִּדְרְשֻׁהוּ יִמָּצֵא לָכֶם וְאִם־תַּעַזְבֻהוּ יַעֲזֹב אֶתְכֶֽם׃
3 ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.
וְיָמִים רַבִּים לְיִשְׂרָאֵל לְלֹא ׀ אֱלֹהֵי אֱמֶת וּלְלֹא כֹּהֵן מוֹרֶה וּלְלֹא תוֹרָֽה׃
4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.
וַיָּשָׁב בַּצַּר־לוֹ עַל־יְהוָה אֱלֹהֵי יִשְׂרָאֵל וַיְבַקְשֻׁהוּ וַיִּמָּצֵא לָהֶֽם׃
5 ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.
וּבָעִתִּים הָהֵם אֵין שָׁלוֹם לַיּוֹצֵא וְלַבָּא כִּי מְהוּמֹת רַבּוֹת עַל כָּל־יוֹשְׁבֵי הָאֲרָצֽוֹת׃
6 ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.
וְכֻתְּתוּ גוֹי־בְּגוֹי וְעִיר בְּעִיר כִּֽי־אֱלֹהִים הֲמָמָם בְּכָל־צָרָֽה׃
7 ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.
וְאַתֶּם חִזְקוּ וְאַל־יִרְפּוּ יְדֵיכֶם כִּי יֵשׁ שָׂכָר לִפְעֻלַּתְכֶֽם׃
8 ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.
וְכִשְׁמֹעַ אָסָא הַדְּבָרִים הָאֵלֶּה וְהַנְּבוּאָה עֹדֵד הַנָּבִיא הִתְחַזַּק וַיַּעֲבֵר הַשִּׁקּוּצִים מִכָּל־אֶרֶץ יְהוּדָה וּבִנְיָמִן וּמִן־הֶעָרִים אֲשֶׁר לָכַד מֵהַר אֶפְרָיִם וַיְחַדֵּשׁ אֶת־מִזְבַּח יְהוָה אֲשֶׁר לִפְנֵי אוּלָם יְהוָֽה׃
9 ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.
וַיִּקְבֹּץ אֶת־כָּל־יְהוּדָה וּבִנְיָמִן וְהַגָּרִים עִמָּהֶם מֵאֶפְרַיִם וּמְנַשֶּׁה וּמִשִּׁמְעוֹן כִּֽי־נָפְלוּ עָלָיו מִיִּשְׂרָאֵל לָרֹב בִּרְאֹתָם כִּֽי־יְהוָה אֱלֹהָיו עִמּֽוֹ׃
10 ೧೦ ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.
וַיִּקָּבְצוּ יְרוּשָׁלַ͏ִם בַּחֹדֶשׁ הַשְּׁלִישִׁי לִשְׁנַת חֲמֵשׁ־עֶשְׂרֵה לְמַלְכוּת אָסָֽא׃
11 ೧೧ ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.
וַיִּזְבְּחוּ לַיהוָה בַּיּוֹם הַהוּא מִן־הַשָּׁלָל הֵבִיאוּ בָּקָר שְׁבַע מֵאוֹת וְצֹאן שִׁבְעַת אֲלָפִֽים׃
12 ೧೨ ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.
וַיָּבֹאוּ בַבְּרִית לִדְרוֹשׁ אֶת־יְהוָה אֱלֹהֵי אֲבוֹתֵיהֶם בְּכָל־לְבָבָם וּבְכָל־נַפְשָֽׁם׃
13 ೧೩ ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು
וְכֹל אֲשֶׁר לֹֽא־יִדְרֹשׁ לַיהוָה אֱלֹהֵֽי־יִשְׂרָאֵל יוּמָת לְמִן־קָטֹן וְעַד־גָּדוֹל לְמֵאִישׁ וְעַד־אִשָּֽׁה׃
14 ೧೪ ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.
וַיִּשָּֽׁבְעוּ לַיהוָה בְּקוֹל גָּדוֹל וּבִתְרוּעָה וּבַחֲצֹצְרוֹת וּבְשׁוֹפָרֽוֹת׃
15 ೧೫ ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.
וַיִּשְׂמְחוּ כָל־יְהוּדָה עַל־הַשְּׁבוּעָה כִּי בְכָל־לְבָבָם נִשְׁבָּעוּ וּבְכָל־רְצוֹנָם בִּקְשֻׁהוּ וַיִּמָּצֵא לָהֶם וַיָּנַח יְהוָה לָהֶם מִסָּבִֽיב׃
16 ೧೬ ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.
וְגַֽם־מַעֲכָה אֵם ׀ אָסָא הַמֶּלֶךְ הֱסִירָהּ מִגְּבִירָה אֲשֶׁר־עָשְׂתָה לַאֲשֵׁרָה מִפְלָצֶת וַיִּכְרֹת אָסָא אֶת־מִפְלַצְתָּהּ וַיָּדֶק וַיִּשְׂרֹף בְּנַחַל קִדְרֽוֹן׃
17 ೧೭ ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.
וְהַבָּמוֹת לֹא־סָרוּ מִיִּשְׂרָאֵל רַק לְבַב־אָסָא הָיָה שָׁלֵם כָּל־יָמָֽיו׃
18 ೧೮ ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.
וַיָּבֵא אֶת־קָדְשֵׁי אָבִיו וְקָֽדָשָׁיו בֵּית הָאֱלֹהִים כֶּסֶף וְזָהָב וְכֵלִֽים׃
19 ೧೯ ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.
וּמִלְחָמָה לֹא הָיָתָה עַד שְׁנַת־שְׁלֹשִׁים וְחָמֵשׁ לְמַלְכוּת אָסָֽא׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 15 >