< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 15 >
1 ೧ ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.
Tedy na Azaryjasza, syna Obedowego, przypadł Duch Boży.
2 ೨ ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
Który wyszedłszy przeciw Azie rzekł mu: Słuchajcie mię, Aza i wszystko pokolenie Judowe i Benjaminowe! Pan był z wami, pókiście byli z nim, a jeźli go szukać będziecie, znajdziecie go: ale jeźli go opuścicie, opuści was.
3 ೩ ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.
Przez wiele dni był Izrael bez Boga prawdziwego, i bez kapłana, nauczyciela, i bez zakonu:
4 ೪ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.
Wszakże gdyby się byli nawrócili w utrapieniu swem do Pana, Boga Izraelskiego, a szukali go, dałby się im był znaleść.
5 ೫ ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.
Ale teraźniejszych czasów niebezpieczno wychodzić i wchodzić; bo zamięszanie wielkie między wszystkimi obywatelami ziemi.
6 ೬ ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.
I depcze naród po narodzie, a miasto po mieście, przeto, że ich Bóg strwożył wszelakiem uciśnieniem.
7 ೭ ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.
Przetoż wy zmacniajcie się, a niech nie słabieją ręce wasze; bo czeka zapłata pracy waszej.
8 ೮ ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.
A gdy usłyszał Aza te słowa, i proroctwo Obeda proroka, zmocnił się, i zniósł obrzydliwości ze wszystkiej ziemi Judzkiej i Benjamińskiej, i z miast, które był pobrał na górze Efraim, i odnowił ołtarz Pański, który był przed przysionkiem Pańskim.
9 ೯ ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.
Potem zebrał wszystek lud z Judy i z Benjamina, i przychodniów, którzy u nich byli z Efraima, i z Manasesa i z Symeona; bo ich było bardzo wiele zbiegło z Izraela do niego, widząc, iż Pan, Bóg jego, z nim był.
10 ೧೦ ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.
I zgromadzili się do Jeruzalemu miesiąca trzeciego, roku piętnastego królestwa Azy.
11 ೧೧ ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.
I sprawowali ofiary Panu dnia onego z łupów, które byli przygnali, wołów siedm set, a owiec siedm tysięcy.
12 ೧೨ ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.
I uczynili umowę, aby szukali Pana, Boga ojców swoich, ze wszystkiego serca swego, i ze wszystkiej duszy swojej.
13 ೧೩ ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು
A ktobykolwiek nie szukał Pana, Boga Izraelskiego, aby był zabity, od najmniejszego aż do największego, od męża aż do niewiast.
14 ೧೪ ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.
I przysięgli Panu głosem wielkim, i z krzykiem, i z trąbami, i z kornetami.
15 ೧೫ ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.
A weselił się wszystek lud Judzki z onej przysięgi: albowiem ze wszystkiego serca swego przysięgali, i ze wszystkiej ochoty szukali go, i dał się im znaleść, i dał im Pan odpocznienie zewsząd.
16 ೧೬ ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.
Nadto i Maachę, matkę swą, król Aza z państwa złożył, przeto, że była uczyniła w gaju bałwana brzydkiego; i podciął Aza bałwana jej, i pokruszył go, a spalił u potoku Cedron.
17 ೧೭ ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.
A choć wyżyny nie były zniesione z Izraela, przecież serce Azy było doskonałe po wszystkie dni jego.
18 ೧೮ ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.
Wniósł też, co był poświęcił ojciec jego, i co sam poświęcił, do domu Bożego, srebro i złoto i naczynia.
19 ೧೯ ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.
A nie było wojny aż do roku trzydziestego i piątego królowania Azy.