< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 18 >
1 ೧ ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.
१यहोशापात बड़ा धनवान और ऐश्वर्यवान हो गया; और उसने अहाब के घराने के साथ विवाह-सम्बंध स्थापित किया।
2 ೨ ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.
२कुछ वर्ष के बाद वह सामरिया में अहाब के पास गया, तब अहाब ने उसके और उसके संगियों के लिये बहुत सी भेड़-बकरियाँ और गाय-बैल काटकर, उसे गिलाद के रामोत पर चढ़ाई करने को उकसाया।
3 ೩ ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.
३इस्राएल के राजा अहाब ने यहूदा के राजा यहोशापात से कहा, “क्या तू मेरे साथ गिलाद के रामोत पर चढ़ाई करेगा?” उसने उसे उत्तर दिया, “जैसा तू वैसा मैं भी हूँ, और जैसी तेरी प्रजा, वैसी मेरी भी प्रजा है। हम लोग युद्ध में तेरा साथ देंगे।”
4 ೪ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಇಂದು ಯೆಹೋವನ ಆಲೋಚನೆಯನ್ನು ಕೇಳು” ಎಂದು ಕೇಳಿಕೊಂಡನು.
४फिर यहोशापात ने इस्राएल के राजा से कहा, “आओ, पहले यहोवा का वचन मालूम करें।”
5 ೫ ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
५तब इस्राएल के राजा ने नबियों को जो चार सौ पुरुष थे, इकट्ठा करके उनसे पूछा, “क्या हम गिलाद के रामोत पर युद्ध करने को चढ़ाई करें, अथवा मैं रुका रहूँ?” उन्होंने उत्तर दिया, “चढ़ाई कर, क्योंकि परमेश्वर उसको राजा के हाथ कर देगा।”
6 ೬ ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?” ಎಂದು ಕೇಳಿದನು.
६परन्तु यहोशापात ने पूछा, “क्या यहाँ यहोवा का और भी कोई नबी नहीं है जिससे हम पूछ लें?”
7 ೭ ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.
७इस्राएल के राजा ने यहोशापात से कहा, “हाँ, एक पुरुष और है, जिसके द्वारा हम यहोवा से पूछ सकते हैं; परन्तु मैं उससे घृणा करता हूँ; क्योंकि वह मेरे विषय कभी कल्याण की नहीं, सदा हानि ही की नबूवत करता है। वह यिम्ला का पुत्र मीकायाह है।” यहोशापात ने कहा, “राजा ऐसा न कहे।”
8 ೮ ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.
८तब इस्राएल के राजा ने एक हाकिम को बुलवाकर कहा, “यिम्ला के पुत्र मीकायाह को फुर्ती से ले आ।”
9 ೯ ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.
९इस्राएल का राजा और यहूदा का राजा यहोशापात अपने-अपने राजवस्त्र पहने हुए, अपने-अपने सिंहासन पर बैठे हुए थे; वे सामरिया के फाटक में एक खुले स्थान में बैठे थे और सब नबी उनके सामने नबूवत कर रहे थे।
10 ೧೦ ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.
१०तब कनाना के पुत्र सिदकिय्याह ने लोहे के सींग बनवाकर कहा, “यहोवा यह कहता है, कि इनसे तू अरामियों को मारते-मारते नाश कर डालेगा।”
11 ೧೧ ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
११सब नबियों ने इसी आशय की नबूवत करके कहा, “गिलाद के रामोत पर चढ़ाई कर और तू कृतार्थ होवे; क्योंकि यहोवा उसे राजा के हाथ कर देगा।”
12 ೧೨ ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು.
१२जो दूत मीकायाह को बुलाने गया था, उसने उससे कहा, “सुन, नबी लोग एक ही मुँह से राजा के विषय शुभ वचन कहते हैं; इसलिए तेरी बात उनकी सी हो, तू भी शुभ वचन कहना।”
13 ೧೩ ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
१३मीकायाह ने कहा, “यहोवा के जीवन की शपथ, जो कुछ मेरा परमेश्वर कहे वही मैं भी कहूँगा।”
14 ೧೪ ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.
१४जब वह राजा के पास आया, तब राजा ने उससे पूछा, “हे मीकायाह, क्या हम गिलाद के रामोत पर युद्ध करने को चढ़ाई करें अथवा मैं रुका रहूँ?” उसने कहा, “हाँ, तुम लोग चढ़ाई करो, और कृतार्थ हो; और वे तुम्हारे हाथ में कर दिए जाएँगे।”
15 ೧೫ ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು
१५राजा ने उससे कहा, “मुझे कितनी बार तुझे शपथ धराकर चिताना होगा, कि तू यहोवा का स्मरण करके मुझसे सच ही कह।”
16 ೧೬ ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.
१६मीकायाह ने कहा, “मुझे सारा इस्राएल बिना चरवाहे की भेड़-बकरियों के समान पहाड़ों पर तितर-बितर दिखाई पड़ा, और यहोवा का वचन आया कि वे तो अनाथ हैं, इसलिए हर एक अपने-अपने घर कुशल क्षेम से लौट जाएँ।”
17 ೧೭ ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
१७तब इस्राएल के राजा ने यहोशापात से कहा, “क्या मैंने तुझ से न कहा था, कि वह मेरे विषय कल्याण की नहीं, हानि ही की नबूवत करेगा?”
18 ೧೮ ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.
१८मीकायाह ने कहा, “इस कारण तुम लोग यहोवा का यह वचन सुनो मुझे सिंहासन पर विराजमान यहोवा और उसके दाएँ-बाएँ खड़ी हुई स्वर्ग की सारी सेना दिखाई पड़ी।
19 ೧೯ ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
१९तब यहोवा ने पूछा, ‘इस्राएल के राजा अहाब को कौन ऐसा बहकाएगा, कि वह गिलाद के रामोत पर चढ़ाई करे।’ तब किसी ने कुछ और किसी ने कुछ कहा।
20 ೨೦ ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು,
२०अन्त में एक आत्मा पास आकर यहोवा के सम्मुख खड़ी हुई, और कहने लगी, ‘मैं उसको बहकाऊँगी।’
21 ೨೧ ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.
२१यहोवा ने पूछा, ‘किस उपाय से?’ उसने कहा, ‘मैं जाकर उसके सब नबियों में पैठ के उनसे झूठ बुलवाऊँगी।’ यहोवा ने कहा, ‘तेरा उसको बहकाना सफल होगा, जाकर ऐसा ही कर।’
22 ೨೨ ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
२२इसलिए सुन, अब यहोवा ने तेरे इन नबियों के मुँह में एक झूठ बोलनेवाली आत्मा बैठाई है, और यहोवा ने तेरे विषय हानि की बात कही है।”
23 ೨೩ ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು.
२३तब कनाना के पुत्र सिदकिय्याह ने निकट जा, मीकायाह के गाल पर थप्पड़ मारकर पूछा, “यहोवा का आत्मा मुझे छोड़कर तुझ से बातें करने को किधर गया।”
24 ೨೪ ಅದಕ್ಕೆ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು.
२४उसने कहा, “जिस दिन तू छिपने के लिये कोठरी से कोठरी में भागेगा, तब जान लेगा।”
25 ೨೫ ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.
२५इस पर इस्राएल के राजा ने कहा, “मीकायाह को नगर के हाकिम आमोन और राजकुमार योआश के पास लौटाकर,
26 ೨೬ ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
२६उनसे कहो, ‘राजा यह कहता है, कि इसको बन्दीगृह में डालो, और जब तक मैं कुशल से न आऊँ, तब तक इसे दुःख की रोटी और पानी दिया करो।’”
27 ೨೭ ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು.
२७तब मीकायाह ने कहा, “यदि तू कभी कुशल से लौटे, तो जान कि यहोवा ने मेरे द्वारा नहीं कहा।” फिर उसने कहा, “हे लोगों, तुम सब के सब सुन लो।”
28 ೨೮ ಇಸ್ರಾಯೇಲರ ಅರಸನೂ ಹಾಗೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು.
२८तब इस्राएल के राजा और यहूदा के राजा यहोशापात दोनों ने गिलाद के रामोत पर चढ़ाई की।
29 ೨೯ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.
२९इस्राएल के राजा ने यहोशापात से कहा, “मैं तो भेष बदलकर युद्ध में जाऊँगा, परन्तु तू अपने ही वस्त्र पहने रह।” इस्राएल के राजा ने भेष बदला और वे दोनों युद्ध में गए।
30 ೩೦ ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.
३०अराम के राजा ने तो अपने रथों के प्रधानों को आज्ञा दी थी, “न तो छोटे से लड़ो और न बड़े से, केवल इस्राएल के राजा से लड़ो।”
31 ೩೧ ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.
३१इसलिए जब रथों के प्रधानों ने यहोशापात को देखा, तब कहा, “इस्राएल का राजा वही है,” और वे उसी से लड़ने को मुड़े। इस पर यहोशापात चिल्ला उठा, तब यहोवा ने उसकी सहायता की। परमेश्वर ने उनको उसके पास से फिर जाने को प्रेरित किया।
32 ೩೨ ಅವನು ಇಸ್ರಾಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂತಿರುಗಿದರು.
३२यह देखकर कि वह इस्राएल का राजा नहीं है, रथों के प्रधान उसका पीछा छोड़कर लौट गए।
33 ೩೩ ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
३३तब किसी ने यूँ ही एक तीर चलाया, और वह इस्राएल के राजा के झिलम और निचले वस्त्र के बीच छेदकर लगा; तब उसने अपने सारथी से कहा, “मैं घायल हो गया हूँ, इसलिए लगाम फेरकर मुझे सेना में से बाहर ले चल।”
34 ೩೪ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.
३४और उस दिन युद्ध बढ़ता गया और इस्राएल का राजा अपने रथ में अरामियों के सम्मुख साँझ तक खड़ा रहा, परन्तु सूर्य अस्त होते-होते वह मर गया।