< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 20 >
1 ೧ ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.
১পরে মোয়াবী ও অম্মোনীয়েরা এবং তাদের সঙ্গে কতগুলি মায়োনীয়দের লোক যিহোশাফটের বিরুদ্ধে যুদ্ধ করতে আসল।
2 ೨ ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು.
২তখন কয়েকজন লোক এসে যিহোশাফটকে বলল, “সাগরের ওপারের অরাম দেশ থেকে এক বিরাট সৈন্যদল আপনার বিরুদ্ধে আসছে; দেখুন, তারা হৎসসোন-তামরে, অর্থাৎ ঐন্-গদীতে আছে।”
3 ೩ ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.
৩তাতে যিহোশাফট ভয় পেয়ে সদাপ্রভুর খোঁজ করতে চাইলেন এবং যিহূদার সব জায়গায় উপবাস ঘোষণা করলেন।
4 ೪ ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.
৪আর যিহূদার লোকেরা সদাপ্রভুর কাছে সাহায্য চাইবার জন্য জড়ো হল; যিহূদার সমস্ত নগর থেকেও লোকেরা সদাপ্রভুর খোঁজ করতে আসল।
5 ೫ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,
৫পরে যিহোশাফট সদাপ্রভুর গৃহে নতুন উঠানের সামনে যিহূদা ও যিরূশালেমের সমস্ত লোকদের সামনে দাঁড়িয়ে বললেন,
6 ೬ “ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?
৬“হে আমাদের পূর্বপুরুষদের ঈশ্বর সদাপ্রভু, তুমি কি স্বর্গের ঈশ্বর নও? তুমি কি জাতির সমস্ত রাজ্যের কর্তা নও? আর শক্তি ও ক্ষমতা তোমারই হাতে, তোমার বিরুদ্ধে দাঁড়াতে কারও সাধ্য নেই।
7 ೭ ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?
৭হে আমাদের ঈশ্বর, তুমিই কি তোমার প্রজা ইস্রায়েলের সামনে থেকে এই দেশের বাসিন্দাদের তাড়িয়ে দাও নি? এবং তোমার বন্ধু অব্রাহামের বংশকে চিরকালের জন্য এই দেশ দাও নি?
8 ೮ ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು.
৮আর তারা এই দেশে বাস করেছে এবং এই দেশে তোমার নামের জন্য একটি ধর্মধাম তৈরী করে বলেছে,
9 ೯ ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಆಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ತು ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ.
৯‘তরোয়াল, বিচার, মহামারী, দূর্ভিক্ষ যখন আমাদের সঙ্গে ঘটবে, তখন আমরা এই ঘরের সামনে, তোমার সামনে দাঁড়াব, কারণ এই ঘরে তোমার নাম আছে এবং আমাদের কষ্টের দিন আমরা তোমার কাছে কাঁদব, তাতে তুমি তা শুনে আমাদের উদ্ধার করবে।’
10 ೧೦ ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.
১০আর এখন দেখ, অম্মোনের ও মোয়াবের সন্তানরা এবং সেয়ীর পর্বতের অধিবাসীরা, যাদের দেশে তুমি ইস্রায়েলকে মিশর দেশে আসবার দিনের ঢুকতে দাও নি, কিন্তু এরা তাদের কাছ থেকে অন্য পথে চলে গিয়েছিল, তাদের ধ্বংস করে নি;
11 ೧೧ ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.
১১দেখ, তারা আমাদের কিভাবে ক্ষতি করছে; তুমি অধিকার হিসাবে যে সম্পত্তি আমাদের দিয়েছ, তোমার সেই অধিকার থেকে আমাদের তাড়িয়ে দিতে আসছে।
12 ೧೨ ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.
১২হে আমাদের ঈশ্বর, তুমি কি তাদের বিচার করবে না? আমাদের বিরুদ্ধে ঐ যে বিরাট সৈন্যদল আসছে, তাদের বিরুদ্ধে আমাদের তো নিজের কোনো শক্তি নেই; কি করতে হবে, তাও আমরা জানি না; আমরা কেবল তোমার দিকে চেয়ে আছি।”
13 ೧೩ ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.
১৩এই ভাবে শিশু, স্ত্রী ও ছেলে মেয়েদের সঙ্গে সমস্ত যিহূদা সদাপ্রভুর সামনে দাঁড়িয়ে থাকলো।
14 ೧೪ ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.
১৪আর সমাজের মধ্যে যহসীয়েল নামে একজন লেবীয়ের উপর সদাপ্রভুর আত্মা আসলেন। তিনি আসফের বংশের মত্তনিয়ের সন্তান যিয়েলের সন্তান বনায়ের সন্তান সখরিয়ের ছেলে।
15 ೧೫ ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.
১৫তখন তিনি বললেন, “হে সমস্ত যিহূদা, হে যিরূশালেমের লোক সকল, আর হে মহারাজ যিহোশাফট, শোনো; সদাপ্রভু তোমাদের এই কথা বলেন, ‘এই বিরাট সৈন্যদল দেখে তোমরা ভয় পেয়ো না বা নিরাশ হোয়ো না, কারণ এই যুদ্ধ তোমাদের নয়, কিন্তু ঈশ্বরের।
16 ೧೬ ನಾಳೆ ಬೆಳಗ್ಗೆ ಅವರಿಗೆ ವಿರುದ್ಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
১৬তোমরা আগামী কাল তাদের বিরুদ্ধে যাও; দেখ, তারা সীস নামে আরোহন-জায়গা দিয়ে আসছে; তোমরা যিরূয়েল মরুপ্রান্তের সামনে উপত্যকার শেষের দিকে তাদের পাবে।
17 ೧೭ ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.
১৭এবার তোমাদেরকে যুদ্ধ করতে হবে না; হে যিহূদা ও যিরূশালেম, তোমরা সারি বেঁধে দাঁড়াও, আর সদাপ্রভু তোমাদের সঙ্গে আছেন, তিনি কিভাবে উদ্ধার করেন তা দেখো; ভয় কোরো না, নিরাশ হয়ো না; কালকে গিয়ে তাদের মুখোমুখি হবে আর সদাপ্রভু তোমাদের সঙ্গে থাকবেন।’”
18 ೧೮ ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.
১৮তখন যিহোশাফট মাটিতে উপুড় হয়ে প্রণাম করলেন এবং সমস্ত যিহূদা ও যিরূশালেমের অধিবাসীরা প্রণাম করার জন্য সদাপ্রভুর সামনে মাটিতে উপুড় হল।
19 ೧೯ ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.
১৯তারপর কহাৎ ও কোরহ বংশের লেবীয়েরা উঠে দাঁড়িয়ে চিত্কার করে ইস্রায়েলের ঈশ্বর সদাপ্রভুর প্রশংসা করতে লাগল।
20 ೨೦ ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.
২০পরে তারা খুব সকালে উঠে তকোয় মরুপ্রান্তের দিকে রওনা হল; তাদের রওনা হবার দিনের যিহোশাফট দাঁড়িয়ে বললেন, “হে যিহূদা, হে যিরূশালেমের অধিবাসীরা, আমার কথা শোনো; তোমরা তোমাদের ঈশ্বর সদাপ্রভুর উপর বিশ্বাস কর, তাহলে স্থির থাকবে; তাঁর ভাববাদীদের বিশ্বাস কর, তাতে সফল হবে।”
21 ೨೧ ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.
২১আর তিনি লোকদের সঙ্গে পরামর্শ করে লোকদের নিযুক্ত করলেন, যেন তারা সৈন্যদলের আগে আগে গিয়ে সদাপ্রভুর উদ্দেশ্যে গান ও মহিমাপূর্ণ পবিত্রতার প্রশংসা করে এবং এই কথা বলে, “সদাপ্রভুর ধন্যবাদ দাও, কারণ তাঁর দয়া চিরকাল স্থায়ী”।
22 ೨೨ ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.
২২যখন তারা আনন্দের গান ও প্রশংসা করতে শুরু করল, তখন সদাপ্রভু যিহূদার বিরুদ্ধে আসা অম্মোনের ও মোয়াবের সন্তানদের এবং সেয়ীর পর্বতের লোকদের বিরুদ্ধে গুপ্ত সৈন্য নিযুক্ত করলেন; তাতে তারা পরাজিত হল।
23 ೨೩ ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.
২৩অম্মোনের ও মোয়াবের সন্তানরা সেয়ীর পর্বতের অধিবাসীদের বিরুদ্ধে উঠল তাদের সম্পূর্ণভাবে হত্যা ও ধ্বংস করার জন্য; আর সেয়ীরের অধিবাসীদের মেরে ফেলবার পর তারা একে অন্যের ধ্বংসে সাহায্য করল।
24 ೨೪ ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.
২৪তখন যিহূদার লোকেরা মরুপ্রান্তের প্রহরী দুর্গে এসে সেই বিরাট সৈন্যদলের দিকে তাকিয়ে দেখল যে, মাটিতে কেবল মৃত দেহগুলি পড়ে রয়েছে, কেউই পালিয়ে বাঁচতে পারে নি।
25 ೨೫ ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.
২৫তখন যিহোশাফট ও তাঁর লোকেরা তাদের লুটের জিনিস আনতে গিয়ে সেই মৃত দেহগুলির সঙ্গে অনেক সম্পত্তি ও দামী ধন-রত্ন দেখতে পেলেন; তারা নিজেদের জন্য এত ধন-রত্ন সংগ্রহ করল যে, সেগুলি সব বয়ে নিয়ে যেতে পারল না; সেই লুটের জিনিস বেশী হওয়াতে তা নিয়ে যেতে তাদের তিন দিন লাগল।
26 ೨೬ ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.
২৬আর চতুর্থ দিনের তাঁরা বরাখা উপত্যকায় জড়ো হলেন; কারণ সেখানে তারা সদাপ্রভুর ধন্যবাদ করল, এই জন্য আজ পর্যন্ত সেই জায়গা বরাখা উপত্যকা (ধন্যবাদ) নামে পরিচিত।
27 ೨೭ ಆ ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು.
২৭তারপর যিহূদা ও যিরূশালেমের সমস্ত লোক এবং তাদের আগে আগে যিহোশাফট আনন্দ করতে করতে যিরূশালেমে ফিরে গেলেন, কারণ সদাপ্রভু তাদের শত্রুদের উপরে সদাপ্রভু তাদের আনন্দিত করেছিলেন।
28 ೨೮ ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.
২৮আর তাঁরা নেবল, বীণা ও তূরী বাজাতে বাজাতে যিরূশালেমে ফিরে এসে সদাপ্রভুর গৃহে গেলেন।
29 ೨೯ ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.
২৯আর ইস্রায়েলের শত্রুদের বিরুদ্ধে সদাপ্রভু যুদ্ধ করেছেন, সেই কথা শুনে অন্যান্য দেশের সমস্ত লোকদের উপর সদাপ্রভু সম্বন্ধে একটা ভয় নেমে আসল।
30 ೩೦ ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.
৩০এই ভাবে যিহোশাফটের রাজ্য স্থির হল, তাঁর ঈশ্বর চারিদিকে তাঁকে বিশ্রাম দিলেন।
31 ೩೧ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಡಳಿತ ನಡೆಸಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.
৩১যিহোশাফট যিহূদার উপর রাজত্বকরলেন; যিহোশাফট পঁয়ত্রিশ বছর বয়সে যিহূদার রাজা হয়েছিলেন এবং পঁচিশ বছর যিরূশালেমে রাজত্ব করেছিলেন। তাঁর মায়ের নাম ছিল অসূবা, তিনি ছিলেন শিল্হির মেয়ে।
32 ೩೨ ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.
৩২যিহোশাফট তাঁর বাবা আসার পথে চলতেন, কখনও সেই পথ ছেড়ে যান নি, সদাপ্রভুর চোখে যা ঠিক তিনি তাই করতেন।
33 ೩೩ ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.
৩৩কিন্তু উঁচু জায়গা গুলির ধ্বংস করা হয়নি এবং তখনও লোকেরা তাদের পূর্বপুরুষদের ঈশ্বরের প্রতি তাদের হৃদয় স্থির করবে না।
34 ೩೪ ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.
৩৪যিহোশাফটের বাকি কাজের কথা প্রথম থেকে শেষ পর্যন্ত দেখো “ইস্রায়েলের রাজাদের ইতিহাস” নামে হনানির ছেলে যেহূর লেখা বইতে পাওয়া যায়।
35 ೩೫ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡನು.
৩৫পরে যিহূদার রাজা যিহোশাফট ইস্রায়েলের রাজা অহসিয়ের সঙ্গে যোগ দিলেন, সে খারাপ লোক;
36 ೩೬ ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡುಗುಗಳನ್ನು ಕಟ್ಟಬೇಕೆಂದು ಒಡಬಂಡಿಕೆ ಮಾಡಿಕೊಂಡು ಅವುಗಳನ್ನು ಎಚ್ಯೋನ್ ಗೆಬೆರಿನಲ್ಲಿ ಕಟ್ಟಿಸಿದರು.
৩৬তিনি তর্শীশে যাবার জন্য জাহাজ তৈরীর কাজে তাঁর সঙ্গে যোগ দিলেন, আর তাঁরা ইৎসিয়োন-গেবরে সেই জাহাজগুলি তৈরী করলেন।
37 ೩೭ ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.
৩৭তখন মারেশার অধিবাসী দোদাবাহূর ছেলে ইলীয়েষর যিহোশাফটের বিরুদ্ধে এই ভবিষ্যদ্বাণী করলেন, “আপনি অহসিয়ের সঙ্গে যোগ দিয়েছেন, এই জন্য না আপনি যা তৈরী করেছেন তা সদাপ্রভু ভেঙে ফেললেন।” আর ঐ সকল জাহাজগুলি ভেঙে গেল, তর্শীশে যেতে পারল না।