< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 22 >
1 ೧ ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
Potem mieszkańcy Jerozolimy ustanowili Achazjasza, jego najmłodszego syna, królem na jego miejscu, gdyż wszystkich starszych [jego braci] wymordowała zgraja, która razem z Arabami wtargnęła do obozu. Tak więc [zaczął] królować Achazjasz, syn Jorama, króla Judy.
2 ೨ ಅಹಜ್ಯನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.
Achazjasz [miał] czterdzieści dwa lata, kiedy [zaczął] królować, i królował jeden rok w Jerozolimie. Jego matka [miała] na imię Atalia [i była] córką Omriego.
3 ೩ ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.
On również kroczył drogami domu Achaba, bo jego matka radziła mu, aby postępował niegodziwie.
4 ೪ ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.
Czynił więc to, co złe w oczach PANA, tak jak dom Achaba. Oni bowiem na jego zgubę byli jego doradcami po śmierci ojca.
5 ೫ ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ, ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.
Chodził za ich radą i wyruszył z Joramem, synem Achaba, królem Izraela, na wojnę przeciw Chazaelowi, królowi Syrii, do Ramot-Gilead. Tam Syryjczycy zranili Jorama.
6 ೬ ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
Wrócił więc, aby się leczyć w Jizreel z ran, które zadano mu w Rama, gdy walczył z Chazaelem, królem Syrii. Wtedy Azariasz, syn Jorama, króla Judy, przybył do Jizreel, aby odwiedzić Jorama, syna Achaba, bo był chory.
7 ೭ ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.
A to, że przybył do Jorama, było od Boga na zgubę Achazjasza. Kiedy bowiem przybył, wyjechał z Joramem przeciw Jehu, synowi Nimsziego, którego PAN namaścił, aby wytracić dom Achaba.
8 ೮ ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.
I kiedy Jehu dokonywał sądu nad domem Achaba, znalazł [niektórych] książąt Judy i synów braci Achazjasza, którzy służyli Achazjaszowi, i zabił ich.
9 ೯ ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
Potem szukał Achazjasza i pojmano go, gdy ukrywał się w Samarii. Przyprowadzili go do Jehu i zabili. Potem pogrzebali go, bo mówili: To jest syn Jehoszafata, który szukał PANA całym swoim sercem. I tak już nie było [nikogo] w domu Achazjasza, kto by mógł przejąć królestwo.
10 ೧೦ ಅಹಜ್ಯನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.
Kiedy Atalia, matka Achazjasza, zobaczyła, że jej syn umarł, wstała i zgładziła całe potomstwo królewskie z domu Judy.
11 ೧೧ ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.
Ale Jehoszaba, córka króla, wzięła Joasza, syna Achazjasza, wykradła go spośród synów króla, których [potem] zabito, i ukryła go wraz z jego mamką w pokoju sypialnym. Tak to ukryła go Jehoszaba, córka króla Jorama, żona kapłana Jehojady i siostra Achazjasza, przed Atalią, aby ta go nie zabiła.
12 ೧೨ ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.
I przebywał z nimi ukryty w domu Bożym przez sześć lat, podczas gdy Atalia królowała nad ziemią.