< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 23 >
1 ೧ ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು.
And in the seventh year Jehoiada strengthened himself, and took the captains of hundreds, Azariah the son of Jeroham, and Ishmael the son of Jehohanan, and Azariah the son of Obed, and Maaseiah the son of Adaiah, and Elishaphat the son of Zichri, into covenant with him.
2 ೨ ಇವರು ಯೆಹೂದದಲ್ಲೆಲ್ಲಾ ಸಂಚರಿಸಿ ಎಲ್ಲಾ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲರ ಗೋತ್ರ ಪ್ರಧಾನರನ್ನೂ ಒಟ್ಟುಗೂಡಿಸಲು ಅವರು ಯೆರೂಸಲೇಮಿಗೆ ಬಂದರು.
And they went about in Judah, and gathered the Levites out of all the cities of Judah, and the chief of the fathers of Israel, and they came to Jerusalem.
3 ೩ ಹೀಗೆ ಕೂಡಿ ಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಅರಸನಾಗತಕ್ಕವನು ಇವನೇ.
And all the congregation made a covenant with the king in the house of God. And he said unto them, Behold, the king’s son shall reign, as Yhwh hath said of the sons of David.
4 ೪ ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.
This is the thing that ye shall do; A third part of you entering on the sabbath, of the priests and of the Levites, shall be porters of the doors;
5 ೫ ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.
And a third part shall be at the king’s house; and a third part at the gate of the foundation: and all the people shall be in the courts of the house of Yhwh.
6 ೬ ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.
But let none come into the house of Yhwh, save the priests, and they that minister of the Levites; they shall go in, for they are holy: but all the people shall keep the watch of Yhwh.
7 ೭ ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು” ಎಂದು ಹೇಳಿದನು.
And the Levites shall compass the king round about, every man with his weapons in his hand; and whosoever else cometh into the house, he shall be put to death: but be ye with the king when he cometh in, and when he goeth out.
8 ೮ ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.
So the Levites and all Judah did according to all things that Jehoiada the priest had commanded, and took every man his men that were to come in on the sabbath, with them that were to go out on the sabbath: for Jehoiada the priest dismissed not the courses.
9 ೯ ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.
Moreover Jehoiada the priest delivered to the captains of hundreds spears, and bucklers, and shields, that had been king David’s, which were in the house of God.
10 ೧೦ ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು.
And he set all the people, every man having his weapon in his hand, from the right side of the temple to the left side of the temple, along by the altar and the temple, by the king round about.
11 ೧೧ ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.
Then they brought out the king’s son, and put upon him the crown, and gave him the testimony, and made him king. And Jehoiada and his sons anointed him, and said, God save the king.
12 ೧೨ ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಇದ್ದ ಯೆಹೋವನ ಆಲಯಕ್ಕೆ ಬಂದಳು.
Now when Athaliah heard the noise of the people running and praising the king, she came to the people into the house of Yhwh:
13 ೧೩ ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.
And she looked, and, behold, the king stood at his pillar at the entering in, and the princes and the trumpets by the king: and all the people of the land rejoiced, and sounded with trumpets, also the singers with instruments of musick, and such as taught to sing praise. Then Athaliah rent her clothes, and said, Treason, Treason.
14 ೧೪ ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
Then Jehoiada the priest brought out the captains of hundreds that were set over the army, and said unto them, Have her forth of the ranges: and whoso followeth her, let him be slain with the sword. For the priest said, Slay her not in the house of Yhwh.
15 ೧೫ ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.
So they laid hands on her; and when she was come to the entering of the horse gate by the king’s house, they slew her there.
16 ೧೬ ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.
And Jehoiada made a covenant between him, and between all the people, and between the king, that they should be Yhwh's people.
17 ೧೭ ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು.
Then all the people went to the house of Baal, and brake it down, and brake his altars and his images in pieces, and slew Mattan the priest of Baal before the altars.
18 ೧೮ ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.
Also Jehoiada appointed the offices of the house of Yhwh by the hand of the priests the Levites, whom David had distributed in the house of Yhwh, to offer the burnt offerings of Yhwh, as it is written in the law of Moses, with rejoicing and with singing, as it was ordained by David.
19 ೧೯ ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.
And he set the porters at the gates of the house of Yhwh, that none which was unclean in any thing should enter in.
20 ೨೦ ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗೂ ಸಾಧಾರಣ ಜನರು ಇವರೊಡನೆ ಅರಸನನ್ನು ಯೆಹೋವನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
And he took the captains of hundreds, and the nobles, and the governors of the people, and all the people of the land, and brought down the king from the house of Yhwh: and they came through the high gate into the king’s house, and set the king upon the throne of the kingdom.
21 ೨೧ ದೇಶದವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.
And all the people of the land rejoiced: and the city was quiet, after that they had slain Athaliah with the sword.