< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 24 >
1 ೧ ಯೆಹೋವಾಷನು ಅರಸನಾದಾಗ ಏಳು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ನಲ್ವತ್ತು ವರ್ಷ ರಾಜ್ಯಭಾರ ಮಾಡಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
GIOAS [era] d'età di sette anni, quando cominciò a regnare; e regnò quarant'anni in Gerusalemme. E il nome di sua madre [era] Sibia, da Beerseba.
2 ೨ ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.
E Gioas fece quello che piace al Signore tutto il tempo del sacerdote Gioiada.
3 ೩ ಯೆಹೋಯಾದನು, ಯೆಹೋವಾಷನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.
E Gioiada gli prese due mogli; ed egli generò figliuoli e figliuole.
4 ೪ ಕ್ರಮೇಣ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡುವುದಕ್ಕೆ ಮನಸ್ಸು ಮಾಡಿದನು.
Dopo questo venne in cuore a Gioas di ristorare la Casa del Signore.
5 ೫ ಯಾಜಕರನ್ನೂ ಲೇವಿಯರನ್ನೂ ಒಟ್ಟಿಗೆ ಸೇರಿಸಿ ಅವರಿಗೆ, “ನೀವು ಯೆಹೂದದ ಪಟ್ಟಣಗಳಿಗೆ ಹೋಗಿ, ನಿಮ್ಮ ದೇವರಾದ ಯೆಹೋವನ ಆಲಯದ ವಾರ್ಷಿಕ ಜೀರ್ಣೋದ್ಧಾರ ಮಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರಿಂದ ಹಣ ಸಂಗ್ರಹಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ” ಎಂದು ಆಜ್ಞಾಪಿಸಿದನು. ಆದರೂ ಲೇವಿಯರು ಅವಸರ ಮಾಡಲಿಲ್ಲ.
Perciò adunò i sacerdoti e i Leviti, e disse loro: Andate per le città di Giuda, e raccogliete, anno per anno, da tutto Israele, danari per ristorar la Casa dell'Iddio vostro; e voi sollecitate questo affare. Ma i Leviti non [lo] sollecitarono.
6 ೬ ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
E il re chiamò Gioiada, sommo [sacerdote], e gli disse: Perchè non hai tu usata diligenza, che i Leviti portassero da Giuda, e da Gerusalemme, la colta di Mosè, servitor del Signore, e della raunanza d'Israele, per lo Tabernacolo della Testimonianza?
7 ೭ ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು.
(Conciossiachè la scellerata Atalia, [ed] i suoi figliuoli avessero fatte delle rotture nella Casa di Dio; ed anche avessero adoperate per i Baali tutte le cose consacrate della Casa del Signore.)
8 ೮ ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು.
Il re adunque comandò che si facesse una cassetta, e che quella si mettesse alla porta della Casa del Signore, di fuori.
9 ೯ ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.
Poi fu fatta una grida per Giuda ed in Gerusalemme, che si portasse al Signore la colta che Mosè, servitor di Dio, [avea fatta] sopra Israele nel deserto.
10 ೧೦ ಎಲ್ಲಾ ಪ್ರಭುಗಳೂ, ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ಪೆಟ್ಟಿಗೆಯಲ್ಲಿ ತಂದು ಹಾಕಿದರು.
E tutti i capi, e tutto il popolo, [la] portavano allegramente, e la gittavano nella cassetta, finchè fu finita [l'opera].
11 ೧೧ ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡು ಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು, ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಲೇಖಕನೂ, ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದನ್ನು ಅದರ ಸ್ಥಳದಲ್ಲಿಡುತ್ತಿದ್ದರು.
Ora, quando la cassetta si portava, per le mani de' Leviti, a quelli ch'erano deputati del re ([il che si faceva], quando vedevano che [vi erano dentro] danari assai), il segretario del re, ed un commessario del sommo sacerdote venivano, e vuotavano la cassetta; poi la riportavano, e la rimettevano nel suo luogo. Così facevano ogni giorno; e raccolsero gran quantità di danari.
12 ೧೨ ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಅವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗಳನ್ನೂ, ಬಡಗಿಯರನ್ನೂ, ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ, ಕಂಚುಗಾರರನ್ನೂ ಕೆಲಸಕ್ಕೆ ನೇಮಿಸಿದರು.
E il re, e Gioiada, davano que' [danari] a quelli che aveano la cura dell'opera [che si faceva] per lo servigio della Casa del Signore; ed essi [ne] prezzolavano scarpellini, e legnaiuoli, per rinnovar la Casa del Signore; ed anche fabbri di ferro e di rame, per ristorarla.
13 ೧೩ ಕೆಲಸ ಮಾಡುವವರು ಆಸಕ್ತಿಯಿಂದ ಜೀರ್ಣೋದ್ಧಾರದ ಕೆಲಸವನ್ನು ಮಾಡಿ ಮುಗಿಸಿದರು. ಹೀಗೆ ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.
Coloro adunque che aveano la cura dell'opera, si adoperarono; e l'opera fu ristorata per le lor mani; ed essi rimisero la Casa di Dio nello stato suo, e la rinforzarono.
14 ೧೪ ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.
E quando ebber finito, portarono davanti al re, e davanti a Gioiada, il rimanente de' danari; ed egli li impiegò in arredi per la Casa del Signore, in arredi per [fare] il servigio, e [per] offerir [sacrificii], ed in coppe, ed [altri] vasellamenti d'oro e d'argento. E nel tempo di Gioiada, furono del continuo offerti olocausti nella Casa del Signore.
15 ೧೫ ಯೆಹೋಯಾದನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರ್ಷದವನಾಗಿದ್ದನು.
Or Gioiada, essendo diventato vecchio e sazio di giorni, morì. [Egli era] d'età di centotrent'anni, quando morì.
16 ೧೬ ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.
E fu seppellito nella Città di Davide coi re; perciocchè egli avea fatto bene [assai] inverso Israele, ed inverso Iddio, e la sua Casa.
17 ೧೭ ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.
E dopo che Gioiada fu morto, i capi di Giuda vennero al re, e si prostesero davanti a lui; allora egli attese a loro.
18 ೧೮ ಅಂದಿನಿಂದ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಯೆಹೋವನಿಗೆ ಕೋಪವುಂಟಾಯಿತು.
Ed essi lasciarono la Casa del Signore Iddio de' lor padri, e servirono a' boschi ed agl'idoli; laonde vi fu indegnazione contro a Giuda, e contro a Gerusalemme, per questa lor colpa.
19 ೧೯ ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
E benchè il Signore mandasse loro de' profeti, per convertirli a sè, e ch'essi protestassero loro, non però prestarono l'orecchio.
20 ೨೦ ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.
E lo Spirito di Dio investì Zaccaria, figliuolo del sacerdote Gioiada. Ed egli, stando in piè disopra al popolo, disse loro: Così ha detto Iddio: Perchè trasgredite voi i comandamenti del Signore? Voi non prospererete: perciocchè voi avete abbandonato il Signore, egli altresì vi abbandonerà.
21 ೨೧ ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
Ed essi fecero congiura contro a lui, e lo lapidarono, per comandamento del re, nel cortile della Casa del Signore.
22 ೨೨ ಯೆಹೋವಾಷನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗಾದ ಕೃಪೆಯನ್ನು ಮರೆತು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಯೆಹೋವನೇ ಇದನ್ನು ನೋಡಿ, ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದನು.
E il re Gioas non si ricordò della benignità usata da Gioiada, padre di esso, inverso lui; anzi uccise il suo figliuolo. Ora, mentre egli moriva, disse: Il Signore [lo] vegga, e [ne] ridomandi [conto].
23 ೨೩ ವರ್ಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರುದ್ಧವಾಗಿ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಯೆಹೂದ ದೇಶದೊಳಗೆ ನುಗ್ಗಿ, ಯೆರೂಸಲೇಮಿಗೆ ಬಂದು ಇಸ್ರಾಯೇಲರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿಬಿಟ್ಟರು.
Ed avvenne, in capo all'anno, che l'esercito de' Siri salì contro a Gioas; e venne in Giuda ed in Gerusalemme; ed ammazzarono d'infra il popolo tutti i capi di esso; e mandarono tutte le spoglie loro al re in Damasco.
24 ೨೪ ಅರಾಮ್ಯ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ಯರ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು.
[E] benchè l'esercito de' Siri fosse venuto con poca gente, nondimeno il Signore diede loro nelle mani un esercito grandissimo; perciocchè aveano abbandonato il Signore Iddio de' padri loro; ed [i Siri] eseguirono i giudicii sopra Gioas.
25 ೨೫ ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.
E, quando si furono partiti da lui, perciocchè l'aveano lasciato in gran languori, i suoi servitori fecero congiura contro a lui, per cagione dell'omicidio de' figliuoli del sacerdote Gioiada, e l'uccisero in sul suo letto. Così morì, e fu seppellito nella Città di Davide, ma non già nelle sepolture dei re.
26 ೨೬ ಅಮ್ಮೋನಿಯರ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರಾತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು.
Ora, questi [son] quelli che congiurarono contro a lui: Zabad, figliuolo di Simat, [donna] Ammonita; e Iozabad, figliuolo di Simrit, [donna] Moabita.
27 ೨೭ ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
Ora, quant'è a' figliuoli di esso, ed alla gran colta [di danari] che fu fatta per lui, ed alla fondazione della Casa di Dio; ecco, queste cose [sono] scritte nella storia del libro dei re. Ed Amasia, suo figliuolo, regnò in luogo suo.