< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 25 >
1 ೧ ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳ್ವಿಕೆ ಮಾಡಿದನು. ಯೆರೂಸಲೇಮಿನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ.
ଅମତ୍ସୀୟ ରାଜ୍ୟ କରିବାକୁ ଆରମ୍ଭ କରିବା ସମୟରେ ପଚିଶ ବର୍ଷ ବୟସ୍କ ହୋଇଥିଲେ; ସେ ଯିରୂଶାଲମରେ ଅଣତିରିଶ ବର୍ଷ ରାଜ୍ୟ କଲେ; ତାଙ୍କର ମାତାଙ୍କ ନାମ ଯିହୋୟଦ୍ଦନ୍, ସେ ଯିରୂଶାଲମ ନିବାସିନୀ ଥିଲେ।
2 ೨ ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.
ସେ ସଦାପ୍ରଭୁଙ୍କ ଦୃଷ୍ଟିରେ ଯଥାର୍ଥ କର୍ମ କଲେ, ମାତ୍ର ସିଦ୍ଧ ଅନ୍ତଃକରଣରେ କଲେ ନାହିଁ।
3 ೩ ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.
ତାଙ୍କର ରାଜ୍ୟ ସୁସ୍ଥିର ହୁଅନ୍ତେ, ସେ ତାଙ୍କର ପିତା ରାଜାଙ୍କର ହତ୍ୟାକାରୀ ଆପଣା ଦାସମାନଙ୍କୁ ବଧ କଲେ।
4 ೪ ಆದರೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪು ಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
ତଥାପି ସେ ସେମାନଙ୍କ ସନ୍ତାନଗଣକୁ ବଧ କଲେ ନାହିଁ; “ମାତ୍ର ସନ୍ତାନଗଣ ପାଇଁ ପିତୃଗଣର ପ୍ରାଣଦଣ୍ଡ ହେବ ନାହିଁ, କିଅବା ପିତୃଗଣ ପାଇଁ ସନ୍ତାନଗଣର ପ୍ରାଣଦଣ୍ଡ ହେବ ନାହିଁ,” କିନ୍ତୁ ପ୍ରତ୍ୟେକ ଲୋକ ନିଜ ପାପ ଲାଗି ମୃତ୍ୟୁୁଭୋଗ କରିବ; ମୋଶାଙ୍କର ବ୍ୟବସ୍ଥା-ପୁସ୍ତକରେ ଲିଖିତ ସଦାପ୍ରଭୁଙ୍କର ଏହି ଆଜ୍ଞା ପ୍ରମାଣେ କର୍ମ କଲେ।
5 ೫ ಆಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾಧಿಪತಿ, ಶತಾಧಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟವರನ್ನು ಲೆಕ್ಕ ಮಾಡಿಸಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.
ଆହୁରି, ଅମତ୍ସୀୟ ଯିହୁଦା-ବଂଶକୁ ଏକତ୍ର କଲେ, ପୁଣି ସମସ୍ତ ଯିହୁଦା ଓ ବିନ୍ୟାମୀନ୍ର ପିତୃବଂଶାନୁସାରେ ସହସ୍ରପତି ଓ ଶତପତିମାନଙ୍କ ଅଧୀନରେ ସେମାନଙ୍କୁ ଶ୍ରେଣୀବଦ୍ଧ କଲେ; ପୁଣି, ସେ କୋଡ଼ିଏ ବର୍ଷ ଓ ତତୋଧିକ ବୟସ୍କ ଲୋକମାନଙ୍କୁ ଗଣନା କରନ୍ତେ, ବର୍ଚ୍ଛା ଓ ଢାଲ ଧରି ଯୁଦ୍ଧକୁ ଯିବାକୁ ସମର୍ଥ ତିନି ଲକ୍ଷ ବଛା ଲୋକ ପାଇଲେ।
6 ೬ ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು, ಇಸ್ರಾಯೇಲರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು.
ମଧ୍ୟ ସେ ଏକ ଶହ ତାଳନ୍ତ ରୂପା ବେତନ ଦେଇ ଇସ୍ରାଏଲ ମଧ୍ୟରୁ ଏକ ଲକ୍ଷ ମହାବିକ୍ରମଶାଳୀ ଲୋକଙ୍କୁ ନିଯୁକ୍ତ କଲେ।
7 ೭ ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.
ମାତ୍ର ପରମେଶ୍ୱରଙ୍କର ଏକ ଲୋକ ତାଙ୍କ ନିକଟକୁ ଆସି କହିଲେ, “ହେ ରାଜନ୍, ଇସ୍ରାଏଲର ସୈନ୍ୟ ଆପଣଙ୍କ ସଙ୍ଗରେ ନ ଯାଉନ୍ତୁ; କାରଣ ସଦାପ୍ରଭୁ ଇସ୍ରାଏଲ ସଙ୍ଗରେ, ଅର୍ଥାତ୍, ଇଫ୍ରୟିମର ସମସ୍ତ ସନ୍ତାନ ସଙ୍ଗରେ ନାହାନ୍ତି।
8 ೮ ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.
ମାତ୍ର ଯେବେ ଆପଣ ଯିବେ, ତେବେ ସାହସରେ କାର୍ଯ୍ୟ କରନ୍ତୁ, ଯୁଦ୍ଧ କରିବାକୁ ବଳବାନ ହେଉନ୍ତୁ; ପରମେଶ୍ୱର ଶତ୍ରୁ ସମ୍ମୁଖରେ ଆପଣଙ୍କୁ ନିପାତ କରିବେ, କାରଣ ସାହାଯ୍ୟ କରିବାକୁ ଓ ନିପାତ କରିବାକୁ ପରମେଶ୍ୱରଙ୍କ ଶକ୍ତି ଅଛି।”
9 ೯ ಅಮಚ್ಯನು ದೇವರ ಮನುಷ್ಯನನ್ನು, “ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?” ಎಂದು ಕೇಳಲು ಅವನು, “ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು” ಎಂದನು.
ତହିଁରେ ଅମତ୍ସୀୟ ପରମେଶ୍ୱରଙ୍କ ଲୋକଙ୍କୁ କହିଲେ, “ଭଲ, ମାତ୍ର ମୁଁ ଇସ୍ରାଏଲ-ସୈନ୍ୟକୁ ଯେଉଁ ଏକ ଶହ ତାଳନ୍ତ ରୂପା ଦେଇଅଛି, ତହିଁ ପାଇଁ ଆମ୍ଭେମାନେ କʼଣ କରିବା?” ଏଥିରେ ପରମେଶ୍ୱରଙ୍କ ଲୋକ ଉତ୍ତର କଲେ; “ସଦାପ୍ରଭୁ ତୁମ୍ଭକୁ ତହିଁରୁ ଅତି ଅଧିକ ଦେବାକୁ ସମର୍ଥ ଅଟନ୍ତି।”
10 ೧೦ ಆಗ ಅಮಚ್ಯನು ಎಫ್ರಾಯೀಮ್ಯ ರಿಂದ ಬಂದ ಸೈನಿಕರನ್ನು ಬೇರೆ ಮಾಡಿ, ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹಳ ಕೋಪಗೊಂಡು ತಮ್ಮ ದೇಶಕ್ಕೆ ಹೊರಟು ಹೋದರು.
ତହୁଁ ଅମତ୍ସୀୟ ଇଫ୍ରୟିମରୁ ଆପଣା ନିକଟକୁ ଆଗତ ସୈନ୍ୟଦଳକୁ ସେମାନଙ୍କ ଗୃହକୁ ପୁନର୍ବାର ଯିବା ପାଇଁ ପୃଥକ କଲେ; ଏଣୁ ଯିହୁଦା ପ୍ରତିକୂଳରେ ସେମାନଙ୍କର କ୍ରୋଧ ଅତି ପ୍ରଜ୍ୱଳିତ ହେଲା ଓ ସେମାନେ ପ୍ରଚଣ୍ଡ କ୍ରୋଧରେ ଗୃହକୁ ଫେରିଗଲେ।
11 ೧೧ ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.
ଏଉତ୍ତାରେ ଅମତ୍ସୀୟ ସାହସିକ ହୋଇ ଆପଣା ଲୋକଙ୍କୁ କଢ଼ାଇ ନେଇ ଲବଣ ଉପତ୍ୟକାକୁ ଗଲେ ଓ ସେୟୀର-ସନ୍ତାନଗଣର ଦଶ ସହସ୍ର ଲୋକଙ୍କୁ ବଧ କଲେ।
12 ೧೨ ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.
ପୁଣି, ଯିହୁଦା-ସନ୍ତାନମାନେ ଅନ୍ୟ ଦଶ ସହସ୍ର ଲୋକଙ୍କୁ ଜୀବିତ ବନ୍ଦୀ କରି ନେଇଗଲେ ଓ ସେମାନଙ୍କୁ ଶୈଳଶିଖରକୁ ନେଇ ସେଠାରୁ ସେମାନଙ୍କୁ ତଳେ ପକାଇଦେଲେ, ତହିଁରେ ସେମାନେ ସମସ୍ତେ ଚୂର୍ଣ୍ଣ ହୋଇଗଲେ।
13 ೧೩ ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದ ಪಟ್ಟಣಗಳ ಮೇಲೆ ದಾಳಿಮಾಡಿ ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು
ମାତ୍ର ଅମତ୍ସୀୟ ଯେଉଁ ସେନାମାନଙ୍କୁ ଆପଣା ସଙ୍ଗେ ଯୁଦ୍ଧକୁ ଯିବା ପାଇଁ ଉପଯୁକ୍ତ ମନେ ନ କରି ଫେରାଇ ଦେଇଥିଲେ, ସେମାନେ ଶମରୀୟାଠାରୁ ବେଥ୍-ହୋରଣ ପର୍ଯ୍ୟନ୍ତ ପଡ଼ି ଯିହୁଦାର ନଗରସବୁ ଆକ୍ରମଣ କଲେ ଓ ତିନି ସହସ୍ର ଲୋକଙ୍କୁ ବଧ କରି ବହୁତ ଲୁଟଦ୍ରବ୍ୟ ନେଲେ।
14 ೧೪ ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.
ଅମତ୍ସୀୟ ଇଦୋମୀୟମାନଙ୍କୁ ସଂହାର କରି ଫେରି ଆସିଲା ଉତ୍ତାରେ ସେ ସେୟୀର-ସନ୍ତାନମାନଙ୍କ ଦେବଗଣକୁ ଆଣି ଆପଣାର ଦେବତା ହେବା ପାଇଁ ସ୍ଥାପନ କଲେ, ସେମାନଙ୍କ ସମ୍ମୁଖରେ ପ୍ରଣାମ କରି ସେମାନଙ୍କ ଉଦ୍ଦେଶ୍ୟରେ ଧୂପ ଜ୍ୱଳାଇଲେ।
15 ೧೫ ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು.
ଏହେତୁ ଅମତ୍ସୀୟଙ୍କ ପ୍ରତିକୂଳରେ ସଦାପ୍ରଭୁଙ୍କ କ୍ରୋଧ ପ୍ରଜ୍ୱଳିତ ହୁଅନ୍ତେ, ସେ ତାଙ୍କ ନିକଟକୁ ଏକ ଭବିଷ୍ୟଦ୍ବକ୍ତା ପଠାଇଲେ, ଯେ ତାଙ୍କୁ କହିଲା, “ଯେଉଁ ଦେବଗଣ ଆପଣା ଲୋକମାନଙ୍କୁ ଆପଣଙ୍କ ହସ୍ତରୁ ଉଦ୍ଧାର କଲେ ନାହିଁ, ଆପଣ କାହିଁକି ସେହି ଲୋକମାନଙ୍କ ଦେବଗଣର ଅନ୍ୱେଷଣ କରୁଅଛନ୍ତି?”
16 ೧೬ ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.
ସେ ତାଙ୍କୁ ଏହି କଥା କହିବା ବେଳେ, ରାଜା ତାହାକୁ କହିଲେ, “ଆମ୍ଭେମାନେ କʼଣ ତୁମ୍ଭକୁ ରାଜମନ୍ତ୍ରୀ କରିଅଛୁ? କ୍ଷାନ୍ତ ହୁଅ! କାହିଁକି ମାଡ଼ ଖାଇବ?” ଏଥିରେ ଭବିଷ୍ୟଦ୍ବକ୍ତା କ୍ଷାନ୍ତ ହୋଇ କହିଲା, “ମୁଁ ଜାଣେ, ପରମେଶ୍ୱର ଆପଣଙ୍କୁ ବିନାଶ କରିବା ପାଇଁ ସ୍ଥିର କରିଅଛନ୍ତି, କାରଣ ଆପଣ ଏହା କରିଅଛନ୍ତି ଓ ମୋʼ ପରାମର୍ଶରେ କର୍ଣ୍ଣପାତ କରି ନାହାନ୍ତି।”
17 ೧೭ ಅನಂತರ ಯೆಹೂದದ ಅರಸನಾದ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನೂ ಆದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ” ಎಂದು ದೂತರ ಮುಖಾಂತರವಾಗಿ ಹೇಳಿ ಕಳುಹಿಸಿದನು.
ଏଥିଉତ୍ତାରେ ଯିହୁଦାର ରାଜା ଅମତ୍ସୀୟ ପରାମର୍ଶ ନେଇ ଯେହୂଙ୍କର ପୌତ୍ର, ଯିହୋୟାହସ୍ଙ୍କର ପୁତ୍ର, ଇସ୍ରାଏଲର ରାଜା ଯୋୟାଶ୍ଙ୍କ ନିକଟକୁ ଲୋକ ପଠାଇ କହିଲେ, “ଆସ, ଆମ୍ଭେମାନେ ପରସ୍ପର ମୁଖ ଦେଖାଦେଖି ହେବା।”
18 ೧೮ ಆಗ ಇಸ್ರಾಯೇಲರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು, ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದು ಬಿಟ್ಟಿತು.
ତହିଁରେ ଇସ୍ରାଏଲର ରାଜା ଯୋୟାଶ୍ ଯିହୁଦାର ରାଜା ଅମତ୍ସୀୟଙ୍କ ନିକଟକୁ ଲୋକ ପଠାଇ କହିଲେ, “ଲିବାନୋନର କଣ୍ଟକଲତା ଲିବାନୋନର ଏରସ ବୃକ୍ଷ ନିକଟକୁ କହି ପଠାଇଲା, ‘ତୁମ୍ଭ କନ୍ୟାକୁ ମୋʼ ପୁତ୍ର ସଙ୍ଗେ ବିବାହ ଦିଅ;’ ଏଥିମଧ୍ୟରେ ଲିବାନୋନର ଏକ ବନ୍ୟ ପଶୁ ନିକଟ ଦେଇ ଯାଉ ଯାଉ ସେହି କଣ୍ଟକଲତାକୁ ଦଳି ପକାଇଲା।
19 ೧೯ ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು.
ଦେଖ, ତୁମ୍ଭେ ଇଦୋମକୁ ପରାସ୍ତ କରିଅଛ ବୋଲି କହୁଅଛ; ତେଣୁ ଦର୍ପ କରିବା ପାଇଁ ତୁମ୍ଭ ମନ ତୁମ୍ଭକୁ ପ୍ରବୃତ୍ତି ଦେଉଅଛି; ଏବେ ଆପଣା ଘରେ ଥାଅ, ଆପଣାର ଅମଙ୍ଗଳ ପାଇଁ କାହିଁକି ବିରୋଧ କରିବ? ପୁଣି ତୁମ୍ଭେ ଓ ତୁମ୍ଭ ସଙ୍ଗେ ଯିହୁଦା, ଦୁହେଁ କାହିଁକି ପତିତ ହେବ?”
20 ೨೦ ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಅದು ದೇವರ ಸಂಕಲ್ಪದಿಂದಲೇ ಆಯಿತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಅಪಜಯ ಮಾಡಬೇಕೆಂದು ಯೆಹೋವನು ನಿರ್ಣಯಿಸಿದ್ದನು.
ମାତ୍ର ଅମତ୍ସୀୟ ଶୁଣିଲେ ନାହିଁ; କାରଣ ଲୋକମାନେ ଇଦୋମୀୟ ଦେବଗଣର ଅନ୍ୱେଷଣ କରିବା ହେତୁରୁ ପରମେଶ୍ୱର ଯେପରି ସେମାନଙ୍କ ଶତ୍ରୁଗଣ ହସ୍ତରେ ସେମାନଙ୍କୁ ସମର୍ପଣ କରିବେ, ଏଥିପାଇଁ ତାହାଙ୍କ ଆଡ଼ୁ ଏହି ଘଟଣା ହେଲା।
21 ೨೧ ಇಸ್ರಾಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
ତହୁଁ ଇସ୍ରାଏଲର ରାଜା ଯୋୟାଶ୍ ଗଲେ; ଆଉ ଯିହୁଦାର ଅଧିକାରସ୍ଥ ବେଥ୍-ଶେମଶରେ ସେ ଓ ଯିହୁଦାର ରାଜା ଅମତ୍ସୀୟ ପରସ୍ପର ମୁଖ ଦେଖାଦେଖି ହେଲେ।
22 ೨೨ ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
ଏଥିରେ ଇସ୍ରାଏଲ ସମ୍ମୁଖରେ ଯିହୁଦା ପରାସ୍ତ ହେଲା, ତହିଁରେ ସେମାନେ ପ୍ରତ୍ୟେକେ ଆପଣା ଆପଣା ତମ୍ବୁକୁ ପଳାଇଲେ।
23 ೨೩ ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,
ଆଉ, ଇସ୍ରାଏଲର ରାଜା ଯୋୟାଶ୍ ବେଥ୍-ଶେମଶରେ ଯିହୋୟାହସ୍ଙ୍କର ପୌତ୍ର, ଯୋୟାଶ୍ଙ୍କର ପୁତ୍ର, ଯିହୁଦାର ରାଜା ଅମତ୍ସୀୟଙ୍କୁ ଧରି ଯିରୂଶାଲମକୁ ଆଣିଲେ ଓ ଇଫ୍ରୟିମର ନଗର-ଦ୍ୱାରଠାରୁ କୋଣର ଦ୍ୱାର ପର୍ଯ୍ୟନ୍ତ ଯିରୂଶାଲମର ଚାରି ଶହ ହାତ ପ୍ରାଚୀର ଭାଙ୍ଗି ପକାଇଲେ।
24 ೨೪ ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನು, ಪಾತ್ರೆಗಳನ್ನು, ಅರಸನ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನು ತೆಗೆದುಕೊಂಡು, ಹೊಣೆಗಾರರಾದ ಕೆಲವರನ್ನು ಸೆರೆ ಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.
ପୁଣି, ପରମେଶ୍ୱରଙ୍କ ଗୃହରେ ଓବେଦ୍-ଇଦୋମର ଅଧୀନରେ ପ୍ରାପ୍ତ ସକଳ ସୁବର୍ଣ୍ଣ ଓ ରୌପ୍ୟ ଓ ସକଳ ପାତ୍ର ଓ ରାଜଗୃହର ଧନ, ମଧ୍ୟ ବନ୍ଧକ ଥିବା ଲୋକମାନଙ୍କୁ ନେଇ ଶମରୀୟାକୁ ଫେରିଗଲେ।
25 ೨೫ ಇಸ್ರಾಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ, ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.
ଇସ୍ରାଏଲର ରାଜା ଯିହୋୟାହସ୍ଙ୍କର ପୁତ୍ର ଯୋୟାଶ୍ଙ୍କର ମୃତ୍ୟୁୁ ଉତ୍ତାରେ ଯିହୁଦାର ରାଜା ଯୋୟାଶ୍ଙ୍କର ପୁତ୍ର ଅମତ୍ସୀୟ ପନ୍ଦର ବର୍ଷ ବଞ୍ଚିଲେ।
26 ೨೬ ಅಮಚ್ಯನ ಉಳಿದ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲರ ರಾಜರ ಗ್ರಂಥಗಳಲ್ಲಿ ಬರೆಯಲ್ಪಟ್ಟಿವೆ.
ଏହି ଅମତ୍ସୀୟଙ୍କର ଅବଶିଷ୍ଟ କ୍ରିୟାର ଆଦ୍ୟନ୍ତ ବୃତ୍ତାନ୍ତ କʼଣ ଯିହୁଦାର ଓ ଇସ୍ରାଏଲର ରାଜାମାନଙ୍କ ଇତିହାସ ପୁସ୍ତକରେ ଲେଖା ନାହିଁ?
27 ೨೭ ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
ଅମତ୍ସୀୟ ସଦାପ୍ରଭୁଙ୍କ ଅନୁଗମନରୁ ବିମୁଖ ହେବା ସମୟଠାରୁ ଲୋକମାନେ ଯିରୂଶାଲମରେ ତାଙ୍କ ବିରୁଦ୍ଧରେ ଚକ୍ରାନ୍ତ କଲେ; ତହିଁରେ ସେ ଲାଖୀଶ୍କୁ ପଳାଇଲେ; ମାତ୍ର ସେମାନେ ତାଙ୍କ ପଛେ ଲାଖୀଶ୍କୁ ଲୋକ ପଠାଇ ସେଠାରେ ତାଙ୍କୁ ବଧ କଲେ।
28 ೨೮ ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇಮ್ ಪಟ್ಟಣಕ್ಕೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು.
ପୁଣି, ସେମାନେ ଅଶ୍ୱମାନଙ୍କ ଉପରେ ତାଙ୍କୁ ଆଣି ଯିହୁଦା-ନଗରରେ ତାଙ୍କର ପିତୃଗଣ ସହିତ ତାଙ୍କୁ କବର ଦେଲେ।