< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 26 >
1 ೧ ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.
And all the people of Judah took 'Uzziyahu, who was then sixteen years old, and made him king instead of his father Amazyahu.
2 ೨ ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
He it was that built Eloth, and brought it back to Judah, after the king slept with his fathers.
3 ೩ ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.
Sixteen years old was 'Uzziyahu when he became king, and fifty and two years did he reign in Jerusalem. And his mother's name was Yecholyah of Jerusalem.
4 ೪ ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
And he did what is right in the eyes of the Lord, in accordance with all that his father Amazyahu had done.
5 ೫ ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
And he was [inclined] to seek God in the days of Zecharyahu, who had understanding in the visions of God; and during the time that he sought the Lord, God caused him to prosper.
6 ೬ ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
And he went forth and made war against the Philistines, and he broke down the wall of Gath, and the wall of Jabneh, and the wall of Ashdod; and he built cities in [the country of] Ashdod, and among the Philistines.
7 ೭ ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
And God helped him against the Philistines, and against the Arabians that dwelt in Gur-ba'al, and the Me'unim.
8 ೮ ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.
And the 'Ammonites gave presents to 'Uzziyahu: and his name extended even to the entrance of Egypt; for he became exceedingly strong.
9 ೯ ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.
And 'Uzziyahu built towers in Jerusalem, above the corner-gate, and above the valley-gate, and at the angle, and made them strong.
10 ೧೦ ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
He built also towers in the desert, and hewed out many wells; for he had much cattle, both in the lowlands and in the plain; [also] husbandmen, and vintners in the mountains, and in Carmel; for he loved husbandry.
11 ೧೧ ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.
Moreover 'Uzziyah had an army of fighting men, that went out to the host by bands, according to the number of those mustered of them through the hand of Je'iel the scribe and Ma'asseyahu the overseer, under the supervision of Chananyahu, one of the king's captains.
12 ೧೨ ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.
The whole number of the chiefs of the family divisions of the mighty men of valor was two thousand and six hundred.
13 ೧೩ ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.
And under their supervision was an efficient army, [of] three hundred thousand and seven thousand and five hundred, that made war with mighty power, to help the king against the enemy.
14 ೧೪ ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು.
And 'Uzziyahu prepared for them, for all the host, shields, and spears, and helmets, and coats of mail, and bows, and stones for slinging.
15 ೧೫ ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
And he made in Jerusalem artificial contrivances, contrived by a skilful man, to be [stationed] on the towers and upon the ramparts, to shoot off arrows and great stones. And his name extended ever so far abroad; for he was marvelously assisted, till he became strong.
16 ೧೬ ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
But when he was strong, his heart was lifted up to his destruction; and he became unfaithful against the Lord his God, and went into the temple of the Lord to burn incense upon the altar of incense.
17 ೧೭ ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ
And there went in after him 'Azaryahu the priest, and with him were priests of the Lord, valiant men, [to the number of] eighty;
18 ೧೮ ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.
And they stood forward against king 'Uzziyahu, and they said unto him, It is not for thee, O 'Uzziyahu, to burn incense unto the Lord, but for the priests the sons of Aaron, who are consecrated to burn incense: go out of the sanctuary; for thou hast trespassed; and it will not be for thy honor from the Lord God.
19 ೧೯ ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
But 'Uzziyahu became wroth, and in his hand was a censer to burn incense: and while he was wroth with the priests, the leprosy even broke out on his forehead before the priests in the house of the Lord, above the altar of the incense.
20 ೨೦ ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.
And when 'Azaryahu the chief priest, with all the priests, turned about toward him, behold, he was leprous on his forehead, and they hurried him away from there: yea, he also made haste to go out, because the Lord had afflicted him.
21 ೨೧ ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
And king 'Uzziyahu was a leper until the day of his death, and dwelt in the leper-house, as a leper; for he was excluded from the house of the Lord: and Jotham his son was over the king's house, [and] judged the people of the land.
22 ೨೨ ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
And the rest of the acts of 'Uzziyahu, the first and the last, did Isaiah the prophet, the son of Amos write.
23 ೨೩ ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
And 'Uzziyahu slept with his fathers, and they buried him with his fathers in the burial-field which belonged to the kings; for they said, He is a leper: and Jotham his son became king in his stead.