< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 27 >
1 ೧ ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.
Yotam padşah olduğu vaxt iyirmi beş yaşında idi və Yerusəlimdə on altı il padşahlıq etdi. Anası Sadoqun qızı Yeruşa idi.
2 ೨ ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.
Yotam atası Uzziyanın etdiyi kimi Rəbbin gözündə doğru olan işlər etdi, ancaq Rəbbin məbədinin böyük otağına girmədi. Xalq hələ də pozğunluq edirdi.
3 ೩ ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.
O, Rəbbin məbədinin yuxarı darvazasını düzəltdi, Ofel divarında çoxlu tikinti işi gördü.
4 ೪ ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ, ಗೋಪುರಗಳನ್ನೂ ಕಟ್ಟಿಸಿದನು.
Yəhudanın dağlıq bölgəsində şəhərlər, meşələrdə qalalar və qüllələr tikdi.
5 ೫ ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.
Yotam Ammonlular padşahına qarşı vuruşdu və onları məğlub etdi. Ammonlular ona o il yüz talant gümüş və on min kor buğda, on min kor arpa verdi. İkinci və üçüncü il də Ammonlular ona bu qədər ödədi.
6 ೬ ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.
Yotam qüvvətləndi, çünki Allahı Rəbbin önündə öz yollarını düzəltmişdi.
7 ೭ ಯೋತಾಮನ ಉಳಿದ ಚರಿತ್ರೆಯೂ, ಅವನು ನಡೆಸಿದ ಯುದ್ಧಗಳು ಹಾಗೂ ಕಾರ್ಯ ಚಟುವಟಿಕೆಗಳು ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥಗಳಲ್ಲಿ ಬರೆಯಲ್ಪಟ್ಟಿದೆ.
Yotamın qalan işləri, bütün döyüşləri və əməlləri barədə İsrail və Yəhuda padşahlarının kitabında yazılmışdır.
8 ೮ ಅವನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳ್ವಿಕೆ ನಡೆಸಿದನು.
O, padşah olduğu vaxt iyirmi beş yaşında idi və Yerusəlimdə on altı il padşahlıq etdi.
9 ೯ ಯೋತಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.
Yotam ataları ilə uyudu və onu Davudun şəhərində basdırdılar. Onun yerinə oğlu Axaz padşah oldu.