< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 3 >
1 ೧ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.
솔로몬이 예루살렘 모리아 산에 여호와의 전 건축하기를 시작하니 그곳은 전에 여호와께서 그 아비 다윗에게 나타나신 곳이요 여부스 사람 오르난의 타작마당에 다윗이 정한 곳이라
2 ೨ ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಅದನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು.
솔로몬이 왕위에 나아간지 사년 이월 초이일에 건축하기를 시작하였더라
3 ೩ ಸೊಲೊಮೋನನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದವು ಮೊದಲಿದ್ದ ಮೊಳದ ಪ್ರಕಾರ ಅರುವತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವು ಆಗಿತ್ತು.
솔로몬이 하나님의 전을 위하여 놓은 지대는 이러하니 옛적 재는 법대로 장이 육십 규빗이요 광이 이십규빗이며
4 ೪ ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.
그 전 앞 낭실의 장이 전의 광과 같이 이십 규빗이요 고가 일백 이십 규빗이니 안에는 정금으로 입혔으며
5 ೫ ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು.
그 대전 천장은 잣나무로 만들고 또 정금으로 입히고 그 위에 종려나무와 사슬 형상을 새겼고
6 ೬ ಅಮೂಲ್ಯವಾದ ರತ್ನದ ಕಲ್ಲುಗಳಿಂದ ಅಲಯವನ್ನು ಅಲಂಕರಿಸಿದನು. ಆದರ ಬಂಗಾರವು ಪರ್ವಯಿಮ್ ದೇಶದ ಬಂಗಾರವಾಗಿತ್ತು.
또 보석으로 전을 꾸며 화려하게 하였으니 그 금은 바르와임 금이며
7 ೭ ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನು, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.
또 금으로 전과 그 들보와 문지방과 벽과 문짝에 입히고 벽에 그룹들을 아로새겼더라
8 ೮ ಇದಲ್ಲದೆ ಅವನು ಮಹಾಪರಿಶುದ್ಧ ಸ್ಥಳವನ್ನು ಕಟ್ಟಿಸಿದನು. ಅದರ ಉದ್ದವು, ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ; ಅದರ ಅಗಲವೂ ಇಪ್ಪತ್ತು ಮೊಳವಾಗಿತ್ತು. ಅದನ್ನು ಆರುನೂರು ತಲಾಂತು ಚೊಕ್ಕ ಬಂಗಾರದಿಂದ ಹೊದಿಸಿದನು.
또 지성소를 지었으니 전 넓이대로 장이 이십 규빗이요 광도 이십 규빗이라 정금 육백 달란트로 입혔으니
9 ೯ ಬಂಗಾರದ ಮೊಳೆಗಳ ತೂಕ ಐವತ್ತು ತೊಲವಾಗಿತ್ತು. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.
못 중수가 오십 금 세겔이요 다락들도 금으로 입혔더라
10 ೧೦ ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿದನು; ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.
지성소 안에 두 그룹의 형상을 새겨 만들어 금으로 입혔으니
11 ೧೧ ಕೆರೂಬಿಗಳ ರೆಕ್ಕೆಗಳು ಒಟ್ಟು ಇಪ್ಪತ್ತು ಮೊಳ ಉದ್ದವಾಗಿದ್ದವು. ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು; ಐದು ಮೊಳ ಉದ್ದವಾದ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.
두 그룹의 날개 길이가 모두 이십 규빗이라 좌편 그룹의 한 날개는 다섯 규빗이니 전 벽에 닿았고 그 한 날개도 다섯 규빗이니 우편 그룹의 날개에 닿았으며
12 ೧೨ ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು.; ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.
우편 그룹의 한 날개도 다섯 규빗이니 전 벽에 닿았고 그 한 날개도 다섯 규빗이니 좌편 그룹의 날개에 닿았으며
13 ೧೩ ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದಕ್ಕೆ ಚಾಚಿಕೊಂಡಿದ್ದವು. ಕೆರೂಬಿಗಳು ತಮ್ಮ ಕಾಲುಗಳ ಮೇಲೆ ನಿಂತುಕೊಂಡು, ಪರಿಶುದ್ಧ ಸ್ಥಳದ ಕಡೆಗೆ ಮುಖಮಾಡಿದ್ದವು.
이 두 그룹의 편 날개가 모두 이십 규빗이라 그 얼굴을 외소로 향하고 서 있으며
14 ೧೪ ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.
청색, 자색, 홍색실과, 고운 베로 문장을 짓고 그 위에 그룹의 형상을 수놓았더라
15 ೧೫ ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು.
전 앞에 기둥 둘을 만들었으니 고가 삼십 오 규빗이요, 각 기둥 꼭대기의 머리가 다섯 규빗이라
16 ೧೬ ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು.
성소 같이 사슬을 만들어 그 기둥 머리에 두르고 석류 일백개를 만들어 사슬에 달았으며
17 ೧೭ ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ “ಯಾಕೀನ್” ಎಂದೂ ಎಡಗಡೆಯಿದ್ದ ಕಂಬಕ್ಕೆ “ಬೋವಜ್” ಎಂದೂ ಹೆಸರಿಟ್ಟನು.
그 두 기둥을 외소 앞에 세웠으니 좌편에 하나요, 우편에 하나라 우편 것은 야긴이라 칭하고 좌편 것은 보아스라 칭하였더라