< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 30 >

1 ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
फिर हिजकिय्याह ने सारे इस्राएल और यहूदा में कहला भेजा, और एप्रैम और मनश्शे के पास इस आशय के पत्र लिख भेजे, कि तुम यरूशलेम को यहोवा के भवन में इस्राएल के परमेश्वर यहोवा के लिये फसह मनाने को आओ।
2 ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.
राजा और उसके हाकिमों और यरूशलेम की मण्डली ने सम्मति की थी कि फसह को दूसरे महीने में मनाएँ।
3 ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.
वे उसे उस समय इस कारण न मना सकते थे, क्योंकि थोड़े ही याजकों ने अपने-अपने को पवित्र किया था, और प्रजा के लोग यरूशलेम में इकट्ठे न हुए थे।
4 ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ
यह बात राजा और सारी मण्डली को अच्छी लगी।
5 ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.
तब उन्होंने यह ठहरा दिया, कि बेर्शेबा से लेकर दान के सारे इस्राएलियों में यह प्रचार किया जाये, कि यरूशलेम में इस्राएल के परमेश्वर यहोवा के लिये फसह मनाने को चले आओ; क्योंकि उन्होंने इतनी बड़ी संख्या में उसको इस प्रकार न मनाया था जैसा कि लिखा है।
6 ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
इसलिए हरकारे राजा और उसके हाकिमों से चिट्ठियाँ लेकर, राजा की आज्ञा के अनुसार सारे इस्राएल और यहूदा में घूमे, और यह कहते गए, “हे इस्राएलियों! अब्राहम, इसहाक, और इस्राएल के परमेश्वर यहोवा की ओर फिरो, कि वह अश्शूर के राजाओं के हाथ से बचे हुए तुम लोगों की ओर फिरे।
7 ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
और अपने पुरखाओं और भाइयों के समान मत बनो, जिन्होंने अपने पूर्वजों के परमेश्वर यहोवा से विश्वासघात किया था, और उसने उन्हें चकित होने का कारण कर दिया, जैसा कि तुम स्वयं देख रहे हो।
8 ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.
अब अपने पुरखाओं के समान हठ न करो, वरन् यहोवा के अधीन होकर उसके उस पवित्रस्थान में आओ जिसे उसने सदा के लिये पवित्र किया है, और अपने परमेश्वर यहोवा की उपासना करो, कि उसका भड़का हुआ क्रोध तुम पर से दूर हो जाए।
9 ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”
यदि तुम यहोवा की ओर फिरोगे तो जो तुम्हारे भाइयों और बाल-बच्चों को बन्दी बनाकर ले गए हैं, वे उन पर दया करेंगे, और वे इस देश में लौट सकेंगे क्योंकि तुम्हारा परमेश्वर यहोवा अनुग्रहकारी और दयालु है, और यदि तुम उसकी ओर फिरोगे तो वह अपना मुँह तुम से न मोड़ेगा।”
10 ೧೦ ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.
१०इस प्रकार हरकारे एप्रैम और मनश्शे के देशों में नगर-नगर होते हुए जबूलून तक गए; परन्तु उन्होंने उनकी हँसी की, और उन्हें उपहास में उड़ाया।
11 ೧೧ ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
११तो भी आशेर, मनश्शे और जबूलून में से कुछ लोग दीन होकर यरूशलेम को आए।
12 ೧೨ ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
१२यहूदा में भी परमेश्वर की ऐसी शक्ति हुई, कि वे एक मन होकर, जो आज्ञा राजा और हाकिमों ने यहोवा के वचन के अनुसार दी थी, उसे मानने को तैयार हुए।
13 ೧೩ ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.
१३इस प्रकार अधिक लोग यरूशलेम में इसलिए इकट्ठे हुए, कि दूसरे महीने में अख़मीरी रोटी का पर्व मानें। और बहुत बड़ी सभा इकट्ठी हो गई।
14 ೧೪ ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.
१४उन्होंने उठकर, यरूशलेम में की वेदियों और धूप जलाने के सब स्थानों को उठाकर किद्रोन नाले में फेंक दिया।
15 ೧೫ ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು. ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.
१५तब दूसरे महीने के चौदहवें दिन को उन्होंने फसह के पशुबलि किए तब याजक और लेवीय लज्जित हुए और अपने को पवित्र करके होमबलियों को यहोवा के भवन में ले आए।
16 ೧೬ ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
१६वे अपने नियम के अनुसार, अर्थात् परमेश्वर के जन मूसा की व्यवस्था के अनुसार, अपने-अपने स्थान पर खड़े हुए, और याजकों ने रक्त को लेवियों के हाथ से लेकर छिड़क दिया।
17 ೧೭ ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.
१७क्योंकि सभा में बहुत ऐसे थे जिन्होंने अपने को पवित्र न किया था; इसलिए सब अशुद्ध लोगों के फसह के पशुओं को बलि करने का अधिकार लेवियों को दिया गया, कि उनको यहोवा के लिये पवित्र करें।
18 ೧೮ ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.
१८बहुत से लोगों ने अर्थात् एप्रैम, मनश्शे, इस्साकार और जबूलून में से बहुतों ने अपने को शुद्ध नहीं किया था, तो भी वे फसह के पशु का माँस लिखी हुई विधि के विरुद्ध खाते थे। क्योंकि हिजकिय्याह ने उनके लिये यह प्रार्थना की थी, “यहोवा जो भला है, वह उन सभी के पाप ढाँप दे;
19 ೧೯ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.
१९जो परमेश्वर की अर्थात् अपने पूर्वजों के परमेश्वर यहोवा की खोज में मन लगाए हुए हैं, चाहे वे पवित्रस्थान की विधि के अनुसार शुद्ध न भी हों।”
20 ೨೦ ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.
२०और यहोवा ने हिजकिय्याह की यह प्रार्थना सुनकर लोगों को चंगा किया।
21 ೨೧ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
२१जो इस्राएली यरूशलेम में उपस्थित थे, वे सात दिन तक अख़मीरी रोटी का पर्व बड़े आनन्द से मनाते रहे; और प्रतिदिन लेवीय और याजक ऊँचे शब्द के बाजे यहोवा के लिये बजाकर यहोवा की स्तुति करते रहे।
22 ೨೨ ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.
२२जितने लेवीय यहोवा का भजन बुद्धिमानी के साथ करते थे, उनको हिजकिय्याह ने शान्ति के वचन कहे। इस प्रकार वे मेलबलि चढ़ाकर और अपने पूर्वजों के परमेश्वर यहोवा के सम्मुख अंगीकार करते रहे और उस नियत पर्व के सातों दिन तक खाते रहे।
23 ೨೩ ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು
२३तब सारी सभा ने सम्मति की कि हम और सात दिन पर्व मानेंगे; अतः उन्होंने और सात दिन आनन्द से पर्व मनाया।
24 ೨೪ ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.
२४क्योंकि यहूदा के राजा हिजकिय्याह ने सभा को एक हजार बछड़े और सात हजार भेड़-बकरियाँ दे दीं, और हाकिमों ने सभा को एक हजार बछड़े और दस हजार भेड़-बकरियाँ दीं, और बहुत से याजकों ने अपने को पवित्र किया।
25 ೨೫ ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.
२५तब याजकों और लेवियों समेत यहूदा की सारी सभा, और इस्राएल से आए हुओं की सभा, और इस्राएल के देश से आए हुए, और यहूदा में रहनेवाले परदेशी, इन सभी ने आनन्द किया।
26 ೨೬ ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.
२६इस प्रकार यरूशलेम में बड़ा आनन्द हुआ, क्योंकि दाऊद के पुत्र इस्राएल के राजा सुलैमान के दिनों से ऐसी बात यरूशलेम में न हुई थी।
27 ೨೭ ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.
२७अन्त में लेवीय याजकों ने खड़े होकर प्रजा को आशीर्वाद दिया, और उनकी सुनी गई, और उनकी प्रार्थना उसके पवित्र धाम तक अर्थात् स्वर्ग तक पहुँची।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 30 >