< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 30 >
1 ೧ ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
Sidan sende Hizkia bod til heile Israel og Juda og skreiv ogso brev til Efraim og Manasse um at dei skulde koma til Herrens hus i Jerusalem og halda påskehelg for Herren, Israels Gud.
2 ೨ ಎರಡನೆಯ ತಿಂಗಳಿನಲ್ಲಿ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಆಚರಿಸಬೇಕೆಂದು ಅರಸನು, ಪದಾಧಿಕಾರಿಗಳು ಅಭಿಪ್ರಾಯಪಟ್ಟರು.
Kongen og hovdingarne hans og heile lyden i Jerusalem hadde halde råd um å høgtida påskehelgi i den andre månaden.
3 ೩ ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು.
For dei kunde ikkje halda høgtidi den gongen, av di det ikkje var nok av prestarne som hadde helga seg, og folket ikkje var samla i Jerusalem.
4 ೪ ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ
Det tykte kongen og heile lyden var rett.
5 ೫ ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.
Difor gjorde dei det vedtaket at dei sende eit upprop ikring i heile Israel ifrå Be’erseba til Dan um at dei skulde koma og halda påskehelgi for Herren, Israels Gud, i Jerusalem; for dei hadde ikkje høgtida henne so mangment som det var fyreskrive.
6 ೬ ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.
Det gjekk då snøggbod ut i heile Israel og Juda med brev frå kongen og hovdingarne hans, etter som kongen hadde bode, og sagde: «De Israels-søner, vend um att til Herren, Abrahams og Isaks og Israels Gud, so han må venda seg til den leivningen av dykk som hev kome seg undan or henderne åt assyrarkongarne!
7 ೭ ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
Ver ikkje de som federne og brørne dykkar, som var utrogne mot Herren, deira fedregud, so han gjorde deim til ei rædsla, som det no ser.
8 ೮ ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.
Ver no ikkje slike hardnakkar som federne dykkar! Gjev Herren handi og kom til heilagdomen hans, som han hev helga for alle tider, og ten Herren dykkar Gud, so hans brennande harm må venda seg burt ifrå dykk.
9 ೯ ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”
For når de vender um til Herren, vil brørne og sønerne dykkar finna miskunn hjå deim som held deim fangar, og koma heim att til dette landet. For Herren, dykkar Gud, er nådig og miskunnsam og vil ikkje venda åsyni si burt ifrå dykk når de vender um til honom.»
10 ೧೦ ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.
Snøggbodi drog ikring frå by til by i Efraims- og Manasselandet og like til Sebulon, men dei log åt deim og hædde deim.
11 ೧೧ ಕೆಲವು ಮಂದಿ ಆಶೇರ್ಯರೂ, ಮನಸ್ಸೆಯವರೂ, ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
Like vel var det nokre i Asser og Manasse og Sebulon som audmykte seg og drog til Jerusalem.
12 ೧೨ ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
I Juda og verka Guds hand til å gjeva deim ein samheldig hug, so dei gjorde det som kongen og hovdingarne hadde bode etter Herrens ord.
13 ೧೩ ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.
Soleis samla det seg mykje folk i Jerusalem og høgtida søtebrødhelgi i den andre månaden; ein ovleg ålmuge.
14 ೧೪ ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.
Dei tok seg fyre å få burt dei altari som fanst i Jerusalem, og tok burt offerstadarne og kasta deim i Kidronsdalen.
15 ೧೫ ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು. ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.
So slagta dei påskelambet på den fjortande dagen i den andre månaden. Prestarne og levitarne skjemdest og helga seg og førde brennoffer til Herrens hus.
16 ೧೬ ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
Og dei stelte seg på plassarne sine, so som det var deim fyreskrive, etter lovi åt gudsmannen Moses, og prestarne skvette blodet, som dei fekk av levitarne.
17 ೧೭ ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.
For det var mange i lyden som ikkje hadde vigt seg, og difor greidde levitarne med å slagta påskelambi for alle deim som ikkje var reine, so dei kunde vigja deim til Herren.
18 ೧೮ ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.
For dei fleste av folket, mange ifrå Efraim, Manasse, Issakar og Sebulon, dei hadde ikkje vigt seg, men åt påske på onnor vis enn det var fyreskrive. Men Hizkia gjekk i forbøn for deim og sagde: «Herren, den gode, han tilgjeve
19 ೧೯ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.
kvar den som hev lagt hugen sin på å søkja Gud Herren, sin fedregud, jamvel um han ikkje er rein, so som heilagdomen krev det.»
20 ೨೦ ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.
Og Herren bønhøyrde Hizkia og sparde folket.
21 ೨೧ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.
Soleis høgtida dei Israels-borni som var til stades i Jerusalem søtebrødhelgi med stor fagnad i sju dagar; og kvar dag song levitarne og prestarne lovsonger med kraftige spelgogner for Herren.
22 ೨೨ ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.
Og Hizkia tala venleg til alle dei levitarne som hadde vore sers dugande i Herrens tenesta; og dei åt høgtidsofferi dei sju dagarne, og dei ofra takkoffer og lovprisa Herren, sin fedregud.
23 ೨೩ ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು
Men sidan samdest heile lyden um å høgtida endå sju dagar, og dei høgtida dei sju dagarne med fagnad.
24 ೨೪ ಹೂದದ ಅರಸನಾದ ಹಿಜ್ಕೀಯನು ಹಿಂಡುಗಳಿಂದ ಸಾವಿರ ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ, ಪದಾಧಿಕಾರಿಗಳು ಸಾವಿರ ಹೋರಿಗಳನ್ನೂ, ಹತ್ತು ಸಾವಿರ ಕುರಿಗಳನ್ನೂ ಯಜ್ಞಕ್ಕಾಗಿ ದಾನಮಾಡಿದರು. ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡರು.
For Hizkia, kongen i Juda, gav lyden tusund uksar og sju stykke småfe, og hovdingarne gav lyden tusund uksar og ti tusund stykke småfe. Og prestarne helga seg i stor mengd.
25 ೨೫ ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.
Og heile Juda-lyden gledde seg, og prestarne og levitarne og heile den lyden som var komen ifrå Israel og dei framande som var komne ifrå Israelslandet eller budde i Juda.
26 ೨೬ ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.
Og det var stor gleda i Jerusalem; for sidan dagarne åt Israels-kongen Salomo Davidsson hadde det ikkje hendt noko slikt i Jerusalem.
27 ೨೭ ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಪ್ರಾರ್ಥನೆಯ ಸ್ವರವು ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ತಲುಪಿತು.
Og levitprestarne stod upp og velsigna folket, og røysti deira vart høyrd; for bøni deira nådde fram til den heilage bustaden hans, til himmelen.