< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 31 >

1 ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
וּכְכַלּ֣וֹת כָּל־זֹ֗את יָצְא֨וּ כָּל־יִשְׂרָאֵ֥ל הַֽנִּמְצְאִים֮ לְעָרֵ֣י יְהוּדָה֒ וַיְשַׁבְּר֣וּ הַמַּצֵּב֣וֹת וַיְגַדְּע֣וּ הָאֲשֵׁרִ֡ים וַיְנַתְּצ֣וּ אֶת־הַ֠בָּמוֹת וְאֶת־הַֽמִּזְבְּחֹ֞ת מִכָּל־יְהוּדָ֧ה וּבִנְיָמִ֛ן וּבְאֶפְרַ֥יִם וּמְנַשֶּׁ֖ה עַד־לְכַלֵּ֑ה וַיָּשׁ֜וּבוּ כָּל־בְּנֵ֧י יִשְׂרָאֵ֛ל אִ֥ישׁ לַאֲחֻזָּת֖וֹ לְעָרֵיהֶֽם׃ ס
2 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.
וַיַּעֲמֵ֣ד יְחִזְקִיָּ֡הוּ אֶת־מַחְלְק֣וֹת הַכֹּהֲנִ֣ים וְ֠הַלְוִיִּם עַֽל־מַחְלְקוֹתָ֞ם אִ֣ישׁ ׀ כְּפִ֣י עֲבֹדָת֗וֹ לַכֹּהֲנִים֙ וְלַלְוִיִּ֔ם לְעֹלָ֖ה וְלִשְׁלָמִ֑ים לְשָׁרֵת֙ וּלְהֹד֣וֹת וּלְהַלֵּ֔ל בְּשַׁעֲרֵ֖י מַחֲנ֥וֹת יְהוָֽה׃ ס
3 ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಅಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನು ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು.
וּמְנָת֩ הַמֶּ֨לֶךְ מִן־רְכוּשׁ֜וֹ לָעֹל֗וֹת לְעֹלוֹת֙ הַבֹּ֣קֶר וְהָעֶ֔רֶב וְהָ֣עֹל֔וֹת לַשַּׁבָּת֖וֹת וְלֶחֳדָשִׁ֣ים וְלַמֹּעֲדִ֑ים כַּכָּת֖וּב בְּתוֹרַ֥ת יְהוָֽה׃
4 ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.
וַיֹּ֤אמֶר לָעָם֙ לְיוֹשְׁבֵ֣י יְרוּשָׁלִַ֔ם לָתֵ֕ת מְנָ֥ת הַכֹּהֲנִ֖ים וְהַלְוִיִּ֑ם לְמַ֥עַן יֶחֶזְק֖וּ בְּתוֹרַ֥ת יְהוָֽה׃
5 ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
וְכִפְרֹ֣ץ הַדָּבָ֗ר הִרְבּ֤וּ בְנֵֽי־יִשְׂרָאֵל֙ רֵאשִׁ֣ית דָּגָ֗ן תִּיר֤וֹשׁ וְיִצְהָר֙ וּדְבַ֔שׁ וְכֹ֖ל תְּבוּאַ֣ת שָׂדֶ֑ה וּמַעְשַׂ֥ר הַכֹּ֛ל לָרֹ֖ב הֵבִֽיאוּ׃
6 ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿರುವ ಇಸ್ರಾಯೇಲರೂ ಯೆಹೂದ್ಯರೂ ಕುರಿದನ ಹಿಂಡುಗಳಲ್ಲಿ ದಶಮಾಂಶವನ್ನು ಕೊಟ್ಟದ್ದಲ್ಲದೆ, ದೇವರಾದ ಯೆಹೋವನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಮಾಡಿದರು.
וּבְנֵ֧י יִשְׂרָאֵ֣ל וִֽיהוּדָ֗ה הַיּֽוֹשְׁבִים֮ בְּעָרֵ֣י יְהוּדָה֒ גַּם־הֵ֗ם מַעְשַׂ֤ר בָּקָר֙ וָצֹ֔אן וּמַעְשַׂ֣ר קָֽדָשִׁ֔ים הַמְקֻדָּשִׁ֖ים לַיהוָ֣ה אֱלֹהֵיהֶ֑ם הֵבִ֕יאוּ וַֽיִּתְּנ֖וּ עֲרֵמ֥וֹת עֲרֵמֽוֹת׃ ס
7 ಹೀಗೆ ರಾಶಿಮಾಡುವುದು ಮೂರನೆಯ ತಿಂಗಳಿಂದ ಪ್ರಾರಂಭವಾಯಿತು. ಏಳನೆಯ ತಿಂಗಳಲ್ಲಿ ಅದು ಮುಕ್ತಾಯಗೊಂಡಿತು ಅರಸನಾದ
בַּחֹ֙דֶשׁ֙ הַשְּׁלִשִׁ֔י הֵחֵ֥לּוּ הָעֲרֵמ֖וֹת לְיִסּ֑וֹד וּבַחֹ֥דֶשׁ הַשְּׁבִיעִ֖י כִּלּֽוּ׃ ס
8 ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.
וַיָּבֹ֙אוּ֙ יְחִזְקִיָּ֣הוּ וְהַשָּׂרִ֔ים וַיִּרְא֖וּ אֶת־הָעֲרֵמ֑וֹת וַֽיְבָרֲכוּ֙ אֶת־יְהוָ֔ה וְאֵ֖ת עַמּ֥וֹ יִשְׂרָאֵֽל׃ פ
9 ಹಿಜ್ಕೀಯನೂ ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಿದಾಗ,
וַיִּדְרֹ֣שׁ יְחִזְקִיָּ֗הוּ עַל־הַכֹּֽהֲנִ֛ים וְהַלְוִיִּ֖ם עַל־הָעֲרֵמֽוֹת ׃
10 ೧೦ ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.
וַיֹּ֣אמֶר אֵלָ֗יו עֲזַרְיָ֧הוּ הַכֹּהֵ֛ן הָרֹ֖אשׁ לְבֵ֣ית צָד֑וֹק וַ֠יֹּאמֶר מֵהָחֵ֨ל הַתְּרוּמָ֜ה לָבִ֣יא בֵית־יְהוָ֗ה אָכ֨וֹל וְשָׂב֤וֹעַ וְהוֹתֵר֙ עַד־לָר֔וֹב כִּ֤י יְהוָה֙ בֵּרַ֣ךְ אֶת־עַמּ֔וֹ וְהַנּוֹתָ֖ר אֶת־הֶהָמ֥וֹן הַזֶּֽה׃ ס
11 ೧೧ ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.
וַיֹּ֣אמֶר יְחִזְקִיָּ֗הוּ לְהָכִ֧ין לְשָׁכ֛וֹת בְּבֵ֥ית יְהוָ֖ה וַיָּכִֽינוּ׃
12 ೧೨ ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನೂ, ತಮ್ಮ ಆದಾಯದ ದಶಮಾಂಶವನ್ನೂ ಹಾಗು ದೇವರ ನೈವೇದ್ಯಕ್ಕಾಗಿ ಮುಡುಪಾಗಿ ಇಟ್ಟಿದ್ದನ್ನು ನಂಬಿಕೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಗೆ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮನಾದ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.
וַיָּבִ֨יאוּ אֶת־הַתְּרוּמָ֧ה וְהַֽמַּעֲשֵׂ֛ר וְהַקֳּדָשִׁ֖ים בֶּאֱמוּנָ֑ה וַעֲלֵיהֶ֤ם נָגִיד֙ כונניהו הַלֵּוִ֔י וְשִׁמְעִ֥י אָחִ֖יהוּ מִשְׁנֶֽה׃
13 ೧೩ ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮೀಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.
וִֽיחִיאֵ֡ל וַ֠עֲזַזְיָהוּ וְנַ֨חַת וַעֲשָׂהאֵ֜ל וִֽירִימ֤וֹת וְיוֹזָבָד֙ וֶאֱלִיאֵ֣ל וְיִסְמַכְיָ֔הוּ וּמַ֖חַת וּבְנָיָ֑הוּ פְּקִידִ֗ים מִיַּ֤ד כונניהו וְשִׁמְעִ֣י אָחִ֔יו בְּמִפְקַד֙ יְחִזְקִיָּ֣הוּ הַמֶּ֔לֶךְ וַעֲזַרְיָ֖הוּ נְגִ֥יד בֵּית־הָאֱלֹהִֽים׃
14 ೧೪ ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.
וְקוֹרֵ֨א בֶן־יִמְנָ֤ה הַלֵּוִי֙ הַשּׁוֹעֵ֣ר לַמִּזְרָ֔חָה עַ֖ל נִדְב֣וֹת הָאֱלֹהִ֑ים לָתֵת֙ תְּרוּמַ֣ת יְהוָ֔ה וְקָדְשֵׁ֖י הַקֳּדָשִֽׁים׃
15 ೧೫ ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬುವವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ನಂಬಿಕೆಯಿಂದ ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ಭೇದಮಾಡದೆ ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.
וְעַל־יָד֡וֹ עֵ֣דֶן וּ֠מִנְיָמִן וְיֵשׁ֨וּעַ וּֽשְׁמַֽעְיָ֜הוּ אֲמַרְיָ֧הוּ וּשְׁכַנְיָ֛הוּ בְּעָרֵ֥י הַכֹּהֲנִ֖ים בֶּאֱמוּנָ֑ה לָתֵ֤ת לַאֲחֵיהֶם֙ בְּמַחְלְק֔וֹת כַּגָּד֖וֹל כַּקָּטָֽן׃
16 ೧೬ ಆಯಾ ಉದ್ಯೋಗ ವರ್ಗಗಳಿಗನುಸಾರವಾಗಿ ಅನುದಿನದ ಸೇವೆಗಾಗಿ ಯೆಹೋವನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂರು ವರ್ಷ ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ.
מִלְּבַ֞ד הִתְיַחְשָׂ֣ם לִזְכָרִ֗ים מִבֶּ֨ן שָׁל֤וֹשׁ שָׁנִים֙ וּלְמַ֔עְלָה לְכָל־הַבָּ֥א לְבֵית־יְהוָ֖ה לִדְבַר־י֣וֹם בְּיוֹמ֑וֹ לַעֲב֣וֹדָתָ֔ם בְּמִשְׁמְרוֹתָ֖ם כְּמַחְלְקוֹתֵיהֶֽם׃
17 ೧೭ ಆ ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು,
וְאֵ֨ת הִתְיַחֵ֤שׂ הַכֹּהֲנִים֙ לְבֵ֣ית אֲבוֹתֵיהֶ֔ם וְהַ֨לְוִיִּ֔ם מִבֶּ֛ן עֶשְׂרִ֥ים שָׁנָ֖ה וּלְמָ֑עְלָה בְּמִשְׁמְרוֹתֵיהֶ֖ם בְּמַחְלְקוֹתֵיהֶֽם׃
18 ೧೮ ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.
וּלְהִתְיַחֵ֗שׂ בְּכָל־טַפָּ֧ם נְשֵׁיהֶ֛ם וּבְנֵיהֶ֥ם וּבְנוֹתֵיהֶ֖ם לְכָל־קָהָ֑ל כִּ֥י בֶאֱמוּנָתָ֖ם יִתְקַדְּשׁוּ־קֹֽדֶשׁ׃
19 ೧೯ ಇದಲ್ಲದೆ, ಆರೋನನ ಸಂತಾನದವರಾದ ಯಾಜಕರು ಆಯಾ ಪಟ್ಟಣಗಳಿಗೆ ಸೇರಿದ ಹುಲ್ಲುಗಾವಲುಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ, ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರೆಸರಾಗಿ ನೇಮಿಸಲ್ಪಟ್ಟರೂ ಪುರುಷರಿದ್ದರು.
וְלִבְנֵי֩ אַהֲרֹ֨ן הַכֹּהֲנִ֜ים בִּשְׂדֵ֨י מִגְרַ֤שׁ עָרֵיהֶם֙ בְּכָל־עִ֣יר וָעִ֔יר אֲנָשִׁ֕ים אֲשֶׁ֥ר נִקְּב֖וּ בְּשֵׁמ֑וֹת לָתֵ֣ת מָנ֗וֹת לְכָל־זָכָר֙ בַּכֹּ֣הֲנִ֔ים וּלְכָל־הִתְיַחֵ֖שׂ בַּלְוִיִּֽם׃
20 ೨೦ ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.
וַיַּ֧עַשׂ כָּזֹ֛את יְחִזְקִיָּ֖הוּ בְּכָל־יְהוּדָ֑ה וַיַּ֨עַשׂ הַטּ֤וֹב וְהַיָּשָׁר֙ וְהָ֣אֱמֶ֔ת לִפְנֵ֖י יְהוָ֥ה אֱלֹהָֽיו׃
21 ೨೧ ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.
וּבְכָֽל־מַעֲשֶׂ֞ה אֲשֶׁר־הֵחֵ֣ל ׀ בַּעֲבוֹדַ֣ת בֵּית־הָאֱלֹהִ֗ים וּבַתּוֹרָה֙ וּבַמִּצְוָ֔ה לִדְרֹ֖שׁ לֵֽאלֹהָ֑יו בְּכָל־לְבָב֥וֹ עָשָׂ֖ה וְהִצְלִֽיחַ׃ פ

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 31 >