< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 32 >

1 ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
אַחֲרֵי הַדְּבָרִים וְהָאֱמֶת הָאֵלֶּה בָּא סַנְחֵרִיב מֶֽלֶךְ־אַשּׁוּר וַיָּבֹא בִֽיהוּדָה וַיִּחַן עַל־הֶעָרִים הַבְּצֻרוֹת וַיֹּאמֶר לְבִקְעָם אֵלָֽיו׃
2 ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.
וַיַּרְא יְחִזְקִיָּהוּ כִּי־בָא סַנְחֵרִיב וּפָנָיו לַמִּלְחָמָה עַל־יְרוּשָׁלָֽ͏ִם׃
3 ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
וַיִּוָּעַץ עִם־שָׂרָיו וְגִבֹּרָיו לִסְתּוֹם אֶת־מֵימֵי הָעֲיָנוֹת אֲשֶׁר מִחוּץ לָעִיר וַֽיַּעְזְרֽוּהוּ׃
4 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.
וַיִּקָּבְצוּ עַם־רָב וַֽיִּסְתְּמוּ אֶת־כָּל־הַמַּעְיָנוֹת וְאֶת־הַנַּחַל הַשּׁוֹטֵף בְּתוֹךְ־הָאָרֶץ לֵאמֹר לָמָּה יָבוֹאוּ מַלְכֵי אַשּׁוּר וּמָצְאוּ מַיִם רַבִּֽים׃
5 ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
וַיִּתְחַזַּק וַיִּבֶן אֶת־כָּל־הַחוֹמָה הַפְּרוּצָה וַיַּעַל עַל־הַמִּגְדָּלוֹת וְלַחוּצָה הַחוֹמָה אַחֶרֶת וַיְחַזֵּק אֶת־הַמִּלּוֹא עִיר דָּוִיד וַיַּעַשׂ שֶׁלַח לָרֹב וּמָגִנִּֽים׃
6 ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,
וַיִּתֵּן שָׂרֵי מִלְחָמוֹת עַל־הָעָם וַיִּקְבְּצֵם אֵלָיו אֶל־רְחוֹב שַׁעַר הָעִיר וַיְדַבֵּר עַל־לְבָבָם לֵאמֹֽר׃
7 “ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
חִזְקוּ וְאִמְצוּ אַל־תִּֽירְאוּ וְאַל־תֵּחַתּוּ מִפְּנֵי מֶלֶךְ אַשּׁוּר וּמִלִּפְנֵי כָּל־הֶהָמוֹן אֲשֶׁר־עִמּוֹ כִּֽי־עִמָּנוּ רַב מֵעִמּֽוֹ׃
8 ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
עִמּוֹ זְרוֹעַ בָּשָׂר וְעִמָּנוּ יְהוָה אֱלֹהֵינוּ לְעָזְרֵנוּ וּלְהִלָּחֵם מִלְחֲמֹתֵנוּ וַיִּסָּמְכוּ הָעָם עַל־דִּבְרֵי יְחִזְקִיָּהוּ מֶֽלֶךְ־יְהוּדָֽה׃
9 ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,
אַחַר זֶה שָׁלַח סַנְחֵרִיב מֶֽלֶךְ־אַשּׁוּר עֲבָדָיו יְרוּשָׁלַיְמָה וְהוּא עַל־לָכִישׁ וְכָל־מֶמְשַׁלְתּוֹ עִמּוֹ עַל־יְחִזְקִיָּהוּ מֶלֶךְ יְהוּדָה וְעַל־כָּל־יְהוּדָה אֲשֶׁר בִּירוּשָׁלַ͏ִם לֵאמֹֽר׃
10 ೧೦ “ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?
כֹּה אָמַר סַנְחֵרִיב מֶלֶךְ אַשּׁוּר עַל־מָה אַתֶּם בֹּטְחִים וְיֹשְׁבִים בְּמָצוֹר בִּירוּשָׁלָֽ͏ִם׃
11 ೧೧ ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.
הֲלֹא יְחִזְקִיָּהוּ מַסִּית אֶתְכֶם לָתֵת אֶתְכֶם לָמוּת בְּרָעָב וּבְצָמָא לֵאמֹר יְהוָה אֱלֹהֵינוּ יַצִּילֵנוּ מִכַּף מֶלֶךְ אַשּֽׁוּר׃
12 ೧೨ ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
הֲלֹא־הוּא יְחִזְקִיָּהוּ הֵסִיר אֶת־בָּמֹתָיו וְאֶת־מִזְבְּחֹתָיו וַיֹּאמֶר לִֽיהוּדָה וְלִֽירוּשָׁלִַם לֵאמֹר לִפְנֵי מִזְבֵּחַ אֶחָד תִּֽשְׁתַּחֲווּ וְעָלָיו תַּקְטִֽירוּ׃
13 ೧೩ ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
הֲלֹא תֵדְעוּ מֶה עָשִׂיתִי אֲנִי וַאֲבוֹתַי לְכֹל עַמֵּי הָאֲרָצוֹת הֲיָכוֹל יָֽכְלוּ אֱלֹהֵי גּוֹיֵ הָאֲרָצוֹת לְהַצִּיל אֶת־אַרְצָם מִיָּדִֽי׃
14 ೧೪ ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ
מִי בְּֽכָל־אֱלֹהֵי הַגּוֹיִם הָאֵלֶּה אֲשֶׁר הֶחֱרִימוּ אֲבוֹתַי אֲשֶׁר יָכוֹל לְהַצִּיל אֶת־עַמּוֹ מִיָּדִי כִּי יוּכַל אֱלֹהֵיכֶם לְהַצִּיל אֶתְכֶם מִיָּדִֽי׃
15 ೧೫ ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
וְעַתָּה אַל־יַשִּׁיא אֶתְכֶם חִזְקִיָּהוּ וְאַל־יַסִּית אֶתְכֶם כָּזֹאת וְאַל־תַּאֲמִינוּ לוֹ כִּי־לֹא יוּכַל כָּל־אֱלוֹהַ כָּל־גּוֹי וּמַמְלָכָה לְהַצִּיל עַמּוֹ מִיָּדִי וּמִיַּד אֲבוֹתָי אַף כִּי אֱ‍ֽלֹהֵיכֶם לֹא־יַצִּילוּ אֶתְכֶם מִיָּדִֽי׃
16 ೧೬ ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
וְעוֹד דִּבְּרוּ עֲבָדָיו עַל־יְהוָה הָאֱלֹהִים וְעַל יְחִזְקִיָּהוּ עַבְדּֽוֹ׃
17 ೧೭ ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.
וּסְפָרִים כָּתַב לְחָרֵף לַיהוָה אֱלֹהֵי יִשְׂרָאֵל וְלֵֽאמֹר עָלָיו לֵאמֹר כֵּֽאלֹהֵי גּוֹיֵ הָאֲרָצוֹת אֲשֶׁר לֹא־הִצִּילוּ עַמָּם מִיָּדִי כֵּן לֹֽא־יַצִּיל אֱלֹהֵי יְחִזְקִיָּהוּ עַמּוֹ מִיָּדִֽי׃
18 ೧೮ ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ
וַיִּקְרְאוּ בְקוֹל־גָּדוֹל יְהוּדִית עַל־עַם יְרוּשָׁלִַם אֲשֶׁר עַל־הַֽחוֹמָה לְיָֽרְאָם וּֽלְבַהֲלָם לְמַעַן יִלְכְּדוּ אֶת־הָעִֽיר׃
19 ೧೯ ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
וַֽיְדַבְּרוּ אֶל־אֱלֹהֵי יְרוּשָׁלָ͏ִם כְּעַל אֱלֹהֵי עַמֵּי הָאָרֶץ מַעֲשֵׂה יְדֵי הָאָדָֽם׃
20 ೨೦ ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
וַיִּתְפַּלֵּל יְחִזְקִיָּהוּ הַמֶּלֶךְ וִֽישַֽׁעְיָהוּ בֶן־אָמוֹץ הַנָּבִיא עַל־זֹאת וַֽיִּזְעֲקוּ הַשָּׁמָֽיִם׃
21 ೨೧ ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
וַיִּשְׁלַח יְהוָה מַלְאָךְ וַיַּכְחֵד כָּל־גִּבּוֹר חַיִל וְנָגִיד וְשָׂר בְּמַחֲנֵה מֶלֶךְ אַשּׁוּר וַיָּשָׁב בְּבֹשֶׁת פָּנִים לְאַרְצוֹ וַיָּבֹא בֵּית אֱלֹהָיו ומיציאו וּמִֽיצִיאֵי מֵעָיו שָׁם הִפִּילֻהוּ בֶחָֽרֶב׃
22 ೨೨ ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.
וַיּוֹשַׁע יְהוָה אֶת־יְחִזְקִיָּהוּ וְאֵת ׀ יֹשְׁבֵי יְרוּשָׁלִַם מִיַּד סַנְחֵרִיב מֶֽלֶךְ־אַשּׁוּר וּמִיַּד־כֹּל וַֽיְנַהֲלֵם מִסָּבִֽיב׃
23 ೨೩ ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
וְרַבִּים מְבִיאִים מִנְחָה לַיהוָה לִירוּשָׁלִַם וּמִגְדָּנוֹת לִֽיחִזְקִיָּהוּ מֶלֶךְ יְהוּדָה וַיִּנַּשֵּׂא לְעֵינֵי כָל־הַגּוֹיִם מֵאַֽחֲרֵי־כֵֽן׃
24 ೨೪ ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
בַּיָּמִים הָהֵם חָלָה יְחִזְקִיָּהוּ עַד־לָמוּת וַיִּתְפַּלֵּל אֶל־יְהוָה וַיֹּאמֶר לוֹ וּמוֹפֵת נָתַן לֽוֹ׃
25 ೨೫ ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
וְלֹא־כִגְמֻל עָלָיו הֵשִׁיב יְחִזְקִיָּהוּ כִּי גָבַהּ לִבּוֹ וַיְהִי עָלָיו קֶצֶף וְעַל־יְהוּדָה וִירוּשָׁלָֽ͏ִם׃
26 ೨೬ ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.
וַיִּכָּנַע יְחִזְקִיָּהוּ בְּגֹבַהּ לִבּוֹ הוּא וְיֹשְׁבֵי יְרוּשָׁלָ͏ִם וְלֹא־בָא עֲלֵיהֶם קֶצֶף יְהוָה בִּימֵי יְחִזְקִיָּֽהוּ׃
27 ೨೭ ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
וַיְהִי לִֽיחִזְקִיָּהוּ עֹשֶׁר וְכָבוֹד הַרְבֵּה מְאֹד וְאֹֽצָרוֹת עָֽשָׂה־לוֹ לְכֶסֶף וּלְזָהָב וּלְאֶבֶן יְקָרָה וְלִבְשָׂמִים וּלְמָגִנִּים וּלְכֹל כְּלֵי חֶמְדָּֽה׃
28 ೨೮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು. ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.
וּמִסְכְּנוֹת לִתְבוּאַת דָּגָן וְתִירוֹשׁ וְיִצְהָר וְאֻֽרָוֺת לְכָל־בְּהֵמָה וּבְהֵמָה וַעֲדָרִים לָאֲוֵרֽוֹת׃
29 ೨೯ ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
וְעָרִים עָשָׂה לוֹ וּמִקְנֵה־צֹאן וּבָקָר לָרֹב כִּי נָֽתַן־לוֹ אֱלֹהִים רְכוּשׁ רַב מְאֹֽד׃
30 ೩೦ ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.
וְהוּא יְחִזְקִיָּהוּ סָתַם אֶת־מוֹצָא מֵימֵי גִיחוֹן הָֽעֶלְיוֹן וַֽיַּישְּׁרֵם לְמַֽטָּה־מַּעְרָבָה לְעִיר דָּוִיד וַיַּצְלַח יְחִזְקִיָּהוּ בְּכָֽל־מַעֲשֵֽׂהוּ׃
31 ೩೧ ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
וְכֵן בִּמְלִיצֵי ׀ שָׂרֵי בָּבֶל הַֽמְשַׁלְּחִים עָלָיו לִדְרֹשׁ הַמּוֹפֵת אֲשֶׁר הָיָה בָאָרֶץ עֲזָבוֹ הֽ͏ָאֱלֹהִים לְנַסּוֹתוֹ לָדַעַת כָּל־בִּלְבָבֽוֹ׃
32 ೩೨ ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.
וְיֶתֶר דִּבְרֵי יְחִזְקִיָּהוּ וַחֲסָדָיו הִנָּם כְּתוּבִים בַּחֲזוֹן יְשַֽׁעְיָהוּ בֶן־אָמוֹץ הַנָּבִיא עַל־סֵפֶר מַלְכֵי־יְהוּדָה וְיִשְׂרָאֵֽל׃
33 ೩೩ ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
וַיִּשְׁכַּב יְחִזְקִיָּהוּ עִם־אֲבֹתָיו וַֽיִּקְבְּרֻהוּ בְּֽמַעֲלֵה קִבְרֵי בְנֵי־דָוִיד וְכָבוֹד עָֽשׂוּ־לוֹ בְמוֹתוֹ כָּל־יְהוּדָה וְיֹשְׁבֵי יְרוּשָׁלָ͏ִם וַיִּמְלֹךְ מְנַשֶּׁה בְנוֹ תַּחְתָּֽיו׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 32 >