< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 33 >

1 ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.
בֶּן־שְׁתֵּ֥ים עֶשְׂרֵ֛ה שָׁנָ֖ה מְנַשֶּׁ֣ה בְמָלְכ֑וֹ וַחֲמִשִּׁ֤ים וְחָמֵשׁ֙ שָׁנָ֔ה מָלַ֖ךְ בִּירוּשָׁלִָֽם׃
2 ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
וַיַּ֥עַשׂ הָרַ֖ע בְּעֵינֵ֣י יְהוָ֑ה כְּתֽוֹעֲבוֹת֙ הַגּוֹיִ֔ם אֲשֶׁר֙ הוֹרִ֣ישׁ יְהוָ֔ה מִפְּנֵ֖י בְּנֵ֥י יִשְׂרָאֵֽל׃
3 ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
וַיָּ֗שָׁב וַיִּ֙בֶן֙ אֶת־הַבָּמ֔וֹת אֲשֶׁ֥ר נִתַּ֖ץ יְחִזְקִיָּ֣הוּ אָבִ֑יו וַיָּ֨קֶם מִזְבְּח֤וֹת לַבְּעָלִים֙ וַיַּ֣עַשׂ אֲשֵׁר֔וֹת וַיִּשְׁתַּ֙חוּ֙ לְכָל־צְבָ֣א הַשָּׁמַ֔יִם וַֽיַּעֲבֹ֖ד אֹתָֽם׃
4 ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,
וּבָנָ֥ה מִזְבְּח֖וֹת בְּבֵ֣ית יְהוָ֑ה אֲשֶׁר֙ אָמַ֣ר יְהוָ֔ה בִּירוּשָׁלִַ֥ם יִֽהְיֶה־שְּׁמִ֖י לְעוֹלָֽם׃
5 ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.
וַיִּ֥בֶן מִזְבְּח֖וֹת לְכָל־צְבָ֣א הַשָּׁמָ֑יִם בִּשְׁתֵּ֖י חַצְר֥וֹת בֵּית־יְהוָֽה׃
6 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
וְהוּא֩ הֶעֱבִ֨יר אֶת־בָּנָ֤יו בָּאֵשׁ֙ בְּגֵ֣י בֶן־הִנֹּ֔ם וְעוֹנֵ֤ן וְנִחֵשׁ֙ וְֽכִשֵּׁ֔ף וְעָ֥שָׂה א֖וֹב וְיִדְּעוֹנִ֑י הִרְבָּ֗ה לַעֲשׂ֥וֹת הָרַ֛ע בְּעֵינֵ֥י יְהוָ֖ה לְהַכְעִיסֽוֹ׃
7 ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.
וַיָּ֕שֶׂם אֶת־פֶּ֥סֶל הַסֶּ֖מֶל אֲשֶׁ֣ר עָשָׂ֑ה בְּבֵ֣ית הָאֱלֹהִ֗ים אֲשֶׁ֨ר אָמַ֤ר אֱלֹהִים֙ אֶל־דָּוִיד֙ וְאֶל־שְׁלֹמֹ֣ה בְנ֔וֹ בַּבַּ֨יִת הַזֶּ֜ה וּבִֽירוּשָׁלִַ֗ם אֲשֶׁ֤ר בָּחַ֙רְתִּי֙ מִכֹּל֙ שִׁבְטֵ֣י יִשְׂרָאֵ֔ל אָשִׂ֥ים אֶת־שְׁמִ֖י לְעֵילֽוֹם׃
8 ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.
וְלֹ֣א אוֹסִ֗יף לְהָסִיר֙ אֶת־רֶ֣גֶל יִשְׂרָאֵ֔ל מֵעַל֙ הָֽאֲדָמָ֔ה אֲשֶׁ֥ר הֶֽעֱמַ֖דְתִּי לַאֲבֹֽתֵיכֶ֑ם רַ֣ק ׀ אִם־יִשְׁמְר֣וּ לַעֲשׂ֗וֹת אֵ֚ת כָּל־אֲשֶׁ֣ר צִוִּיתִ֔ים לְכָל־הַתּוֹרָ֛ה וְהַֽחֻקִּ֥ים וְהַמִּשְׁפָּטִ֖ים בְּיַד־מֹשֶֽׁה׃
9 ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
וַיֶּ֣תַע מְנַשֶּׁ֔ה אֶת־יְהוּדָ֖ה וְיֹשְׁבֵ֣י יְרוּשָׁלִָ֑ם לַעֲשׂ֣וֹת רָ֔ע מִן־הַ֨גּוֹיִ֔ם אֲשֶׁר֙ הִשְׁמִ֣יד יְהוָ֔ה מִפְּנֵ֖י בְּנֵ֥י יִשְׂרָאֵֽל׃ פ
10 ೧೦ ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.
וַיְדַבֵּ֧ר יְהוָ֛ה אֶל־מְנַשֶּׁ֥ה וְאֶל־עַמּ֖וֹ וְלֹ֥א הִקְשִֽׁיבוּ׃
11 ೧೧ ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
וַיָּבֵ֨א יְהוָ֜ה עֲלֵיהֶ֗ם אֶת־שָׂרֵ֤י הַצָּבָא֙ אֲשֶׁר֙ לְמֶ֣לֶךְ אַשּׁ֔וּר וַיִּלְכְּד֥וּ אֶת־מְנַשֶּׁ֖ה בַּחֹחִ֑ים וַיַּֽאַסְרֻ֙הוּ֙ בַּֽנְחֻשְׁתַּ֔יִם וַיּוֹלִיכֻ֖הוּ בָּבֶֽלָה׃
12 ೧೨ ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
וּכְהָצֵ֣ר ל֔וֹ חִלָּ֕ה אֶת־פְּנֵ֖י יְהוָ֣ה אֱלֹהָ֑יו וַיִּכָּנַ֣ע מְאֹ֔ד מִלִּפְנֵ֖י אֱלֹהֵ֥י אֲבֹתָֽיו׃
13 ೧೩ ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.
וַיִּתְפַּלֵּ֣ל אֵלָ֗יו וַיֵּעָ֤תֶר לוֹ֙ וַיִּשְׁמַ֣ע תְּחִנָּת֔וֹ וַיְשִׁיבֵ֥הוּ יְרוּשָׁלִַ֖ם לְמַלְכוּת֑וֹ וַיֵּ֣דַע מְנַשֶּׁ֔ה כִּ֥י יְהוָ֖ה ה֥וּא הָֽאֱלֹהִֽים׃
14 ೧೪ ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.
וְאַחֲרֵי־כֵ֡ן בָּנָ֣ה חוֹמָ֣ה חִֽיצוֹנָ֣ה ׀ לְעִיר־דָּוִ֡יד מַעְרָבָה֩ לְגִיח֨וֹן בַּנַּ֜חַל וְלָב֨וֹא בְשַׁ֤עַר הַדָּגִים֙ וְסָבַ֣ב לָעֹ֔פֶל וַיַּגְבִּיהֶ֖הָ מְאֹ֑ד וַיָּ֧שֶׂם שָֽׂרֵי־חַ֛יִל בְּכָל־הֶעָרִ֥ים הַבְּצֻר֖וֹת בִּיהוּדָֽה׃
15 ೧೫ ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.
וַ֠יָּסַר אֶת־אֱלֹהֵ֨י הַנֵּכָ֤ר וְאֶת־הַסֶּ֙מֶל֙ מִבֵּ֣ית יְהוָ֔ה וְכָל־הַֽמִּזְבְּח֗וֹת אֲשֶׁ֥ר בָּנָ֛ה בְּהַ֥ר בֵּית־יְהוָ֖ה וּבִירוּשָׁלִָ֑ם וַיַּשְׁלֵ֖ךְ ח֥וּצָה לָעִֽיר׃
16 ೧೬ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.
וַיִּ֙בֶן֙ אֶת־מִזְבַּ֣ח יְהוָ֔ה וַיִּזְבַּ֣ח עָלָ֔יו זִבְחֵ֥י שְׁלָמִ֖ים וְתוֹדָ֑ה וַיֹּ֙אמֶר֙ לִֽיהוּדָ֔ה לַעֲב֕וֹד אֶת־יְהוָ֖ה אֱלֹהֵ֥י יִשְׂרָאֵֽל׃
17 ೧೭ ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.
אֲבָל֙ ע֣וֹד הָעָ֔ם זֹבְחִ֖ים בַּבָּמ֑וֹת רַ֖ק לַיהוָ֥ה אֱלֹהֵיהֶֽם׃
18 ೧೮ ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ.
וְיֶ֨תֶר דִּבְרֵ֣י מְנַשֶּׁה֮ וּתְפִלָּת֣וֹ אֶל־אֱלֹהָיו֒ וְדִבְרֵי֙ הַֽחֹזִ֔ים הַֽמְדַבְּרִ֣ים אֵלָ֔יו בְּשֵׁ֥ם יְהוָ֖ה אֱלֹהֵ֣י יִשְׂרָאֵ֑ל הִנָּ֕ם עַל־דִּבְרֵ֖י מַלְכֵ֥י יִשְׂרָאֵֽל׃
19 ೧೯ ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
וּתְפִלָּת֣וֹ וְהֵֽעָתֶר־לוֹ֮ וְכָל־חַטָּאת֣וֹ וּמַעְלוֹ֒ וְהַמְּקֹמ֗וֹת אֲשֶׁר֩ בָּנָ֨ה בָהֶ֤ם בָּמוֹת֙ וְהֶעֱמִיד֙ הָאֲשֵׁרִ֣ים וְהַפְּסִלִ֔ים לִפְנֵ֖י הִכָּנְע֑וֹ הִנָּ֣ם כְּתוּבִ֔ים עַ֖ל דִּבְרֵ֥י חוֹזָֽי׃
20 ೨೦ ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.
וַיִּשְׁכַּ֤ב מְנַשֶּׁה֙ עִם־אֲבֹתָ֔יו וַֽיִּקְבְּרֻ֖הוּ בֵּית֑וֹ וַיִּמְלֹ֛ךְ אָמ֥וֹן בְּנ֖וֹ תַּחְתָּֽיו׃ פ
21 ೨೧ ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.
בֶּן־עֶשְׂרִ֧ים וּשְׁתַּ֛יִם שָׁנָ֖ה אָמ֣וֹן בְּמָלְכ֑וֹ וּשְׁתַּ֣יִם שָׁנִ֔ים מָלַ֖ךְ בִּֽירוּשָׁלִָֽם׃
22 ೨೨ ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.
וַיַּ֤עַשׂ הָרַע֙ בְּעֵינֵ֣י יְהוָ֔ה כַּאֲשֶׁ֥ר עָשָׂ֖ה מְנַשֶּׁ֣ה אָבִ֑יו וּֽלְכָל־הַפְּסִילִ֗ים אֲשֶׁ֤ר עָשָׂה֙ מְנַשֶּׁ֣ה אָבִ֔יו זִבַּ֥ח אָמ֖וֹן וַיַּֽעַבְדֵֽם׃
23 ೨೩ ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.
וְלֹ֤א נִכְנַע֙ מִלִּפְנֵ֣י יְהוָ֔ה כְּהִכָּנַ֖ע מְנַשֶּׁ֣ה אָבִ֑יו כִּ֛י ה֥וּא אָמ֖וֹן הִרְבָּ֥ה אַשְׁמָֽה׃
24 ೨೪ ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.
וַיִּקְשְׁר֤וּ עָלָיו֙ עֲבָדָ֔יו וַיְמִיתֻ֖הוּ בְּבֵיתֽוֹ׃
25 ೨೫ ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.
וַיַּכּוּ֙ עַם־הָאָ֔רֶץ אֵ֥ת כָּל־הַקֹּֽשְׁרִ֖ים עַל־הַמֶּ֣לֶךְ אָמ֑וֹן וַיַּמְלִ֧יכוּ עַם־הָאָ֛רֶץ אֶת־יֹאשִׁיָּ֥הוּ בְנ֖וֹ תַּחְתָּֽיו׃ פ

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 33 >