< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 33 >
1 ೧ ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.
१जब मनश्शे राज्य करने लगा तब वह बारह वर्ष का था, और यरूशलेम में पचपन वर्ष तक राज्य करता रहा।
2 ೨ ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
२उसने वह किया, जो यहोवा की दृष्टि में बुरा था, अर्थात् उन जातियों के घिनौने कामों के अनुसार जिनको यहोवा ने इस्राएलियों के सामने से देश से निकाल दिया था।
3 ೩ ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
३उसने उन ऊँचे स्थानों को जिन्हें उसके पिता हिजकिय्याह ने तोड़ दिया था, फिर बनाया, और बाल नामक देवताओं के लिये वेदियाँ और अशेरा नामक मूरतें बनाईं, और आकाश के सारे गणों को दण्डवत् करता, और उनकी उपासना करता रहा।
4 ೪ ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,
४उसने यहोवा के उस भवन में वेदियाँ बनाईं जिसके विषय यहोवा ने कहा था “यरूशलेम में मेरा नाम सदा बना रहेगा।”
5 ೫ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.
५वरन् यहोवा के भवन के दोनों आँगनों में भी उसने आकाश के सारे गणों के लिये वेदियाँ बनाईं।
6 ೬ ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
६फिर उसने हिन्नोम के बेटे की तराई में अपने बेटों को होम करके चढ़ाया, और शुभ-अशुभ मुहूर्त्तों को मानता, और टोना और तंत्र-मंत्र करता, और ओझों और भूत सिद्धिवालों से सम्बंध रखता था। वरन् उसने ऐसे बहुत से काम किए, जो यहोवा की दृष्टि में बुरे हैं और जिनसे वह अप्रसन्न होता है।
7 ೭ ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.
७और उसने अपनी खुदवाई हुई मूर्ति परमेश्वर के उस भवन में स्थापित की जिसके विषय परमेश्वर ने दाऊद और उसके पुत्र सुलैमान से कहा था, “इस भवन में, और यरूशलेम में, जिसको मैंने इस्राएल के सब गोत्रों में से चुन लिया है मैं अपना नाम सर्वदा रखूँगा,
8 ೮ ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.
८और मैं ऐसा न करूँगा कि जो देश मैंने तुम्हारे पुरखाओं को दिया था, उसमें से इस्राएल फिर मारा-मारा फिरे; इतना अवश्य हो कि वे मेरी सब आज्ञाओं को अर्थात् मूसा की दी हुई सारी व्यवस्था और विधियों और नियमों को पालन करने की चौकसी करें।”
9 ೯ ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
९मनश्शे ने यहूदा और यरूशलेम के निवासियों को यहाँ तक भटका दिया कि उन्होंने उन जातियों से भी बढ़कर बुराई की, जिन्हें यहोवा ने इस्राएलियों के सामने से विनाश किया था।
10 ೧೦ ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.
१०यहोवा ने मनश्शे और उसकी प्रजा से बातें कीं, परन्तु उन्होंने कुछ ध्यान नहीं दिया।
11 ೧೧ ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
११तब यहोवा ने उन पर अश्शूर के सेनापतियों से चढ़ाई कराई, और वे मनश्शे को नकेल डालकर, और पीतल की बेड़ियों से जकड़कर, उसे बाबेल को ले गए।
12 ೧೨ ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
१२तब संकट में पड़कर वह अपने परमेश्वर यहोवा को मानने लगा, और अपने पूर्वजों के परमेश्वर के सामने बहुत दीन हुआ, और उससे प्रार्थना की।
13 ೧೩ ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.
१३तब उसने प्रसन्न होकर उसकी विनती सुनी, और उसको यरूशलेम में पहुँचाकर उसका राज्य लौटा दिया। तब मनश्शे को निश्चय हो गया कि यहोवा ही परमेश्वर है।
14 ೧೪ ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.
१४इसके बाद उसने दाऊदपुर से बाहर गीहोन के पश्चिम की ओर नाले में मछली फाटक तक एक शहरपनाह बनवाई, फिर ओपेल को घेरकर बहुत ऊँचा कर दिया; और यहूदा के सब गढ़वाले नगरों में सेनापति ठहरा दिए।
15 ೧೫ ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.
१५फिर उसने पराए देवताओं को और यहोवा के भवन में की मूर्ति को, और जितनी वेदियाँ उसने यहोवा के भवन के पर्वत पर, और यरूशलेम में बनवाई थीं, उन सब को दूर करके नगर से बाहर फेंकवा दिया।
16 ೧೬ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.
१६तब उसने यहोवा की वेदी की मरम्मत की, और उस पर मेलबलि और धन्यवाद-बलि चढ़ाने लगा, और यहूदियों को इस्राएल के परमेश्वर यहोवा की उपासना करने की आज्ञा दी।
17 ೧೭ ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.
१७तो भी प्रजा के लोग ऊँचे स्थानों पर बलिदान करते रहे, परन्तु केवल अपने परमेश्वर यहोवा के लिये।
18 ೧೮ ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ.
१८मनश्शे के और काम, और उसने जो प्रार्थना अपने परमेश्वर से की, और उन दर्शियों के वचन जो इस्राएल के परमेश्वर यहोवा के नाम से उससे बातें करते थे, यह सब इस्राएल के राजाओं के इतिहास में लिखा हुआ है।
19 ೧೯ ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
१९और उसकी प्रार्थना और वह कैसे सुनी गई, और उसका सारा पाप और विश्वासघात और उसने दीन होने से पहले कहाँ-कहाँ ऊँचे स्थान बनवाए, और अशेरा नामक और खुदी हुई मूर्तियाँ खड़ी कराईं, यह सब होशे के वचनों में लिखा है।
20 ೨೦ ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.
२०अन्त में मनश्शे मरकर अपने पुरखाओं के संग जा मिला और उसे उसी के घर में मिट्टी दी गई; और उसका पुत्र आमोन उसके स्थान पर राज्य करने लगा।
21 ೨೧ ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.
२१जब आमोन राज्य करने लगा, तब वह बाईस वर्ष का था, और यरूशलेम में दो वर्ष तक राज्य करता रहा।
22 ೨೨ ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.
२२उसने अपने पिता मनश्शे के समान वह किया जो यहोवा की दृष्टि में बुरा है। और जितनी मूर्तियाँ उसके पिता मनश्शे ने खोदकर बनवाई थीं, वह भी उन सभी के सामने बलिदान करता और उन सभी की उपासना भी करता था।
23 ೨೩ ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.
२३जैसे उसका पिता मनश्शे यहोवा के सामने दीन हुआ, वैसे वह दीन न हुआ, वरन् आमोन अधिक दोषी होता गया।
24 ೨೪ ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.
२४उसके कर्मचारियों ने द्रोह की गोष्ठी करके, उसको उसी के भवन में मार डाला।
25 ೨೫ ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.
२५तब साधारण लोगों ने उन सभी को मार डाला, जिन्होंने राजा आमोन से द्रोह की गोष्ठी की थी; और लोगों ने उसके पुत्र योशिय्याह को उसके स्थान पर राजा बनाया।