< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 34 >
1 ೧ ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.
Josias avait huit ans lorsqu’il devint roi, et il régna trente et un ans à Jérusalem.
2 ೨ ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.
Il fit ce qui est droit aux yeux de l’Éternel, et il marcha dans les voies de David, son père; il ne s’en détourna ni à droite ni à gauche.
3 ೩ ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.
La huitième année de son règne, comme il était encore jeune, il commença à rechercher le Dieu de David, son père; et la douzième année, il commença à purifier Juda et Jérusalem des hauts lieux, des idoles, des images taillées et des images en fonte.
4 ೪ ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
On renversa devant lui les autels des Baals, et il abattit les statues consacrées au soleil qui étaient dessus; il brisa les idoles, les images taillées et les images en fonte, et les réduisit en poussière, et il répandit la poussière sur les sépulcres de ceux qui leur avaient sacrifié;
5 ೫ ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.
et il brûla les ossements des prêtres sur leurs autels. C’est ainsi qu’il purifia Juda et Jérusalem.
6 ೬ ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ,
Dans les villes de Manassé, d’Éphraïm, de Siméon, et même de Nephthali, partout au milieu de leurs ruines,
7 ೭ ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.
il renversa les autels, il mit en pièces les idoles et les images taillées et les réduisit en poussière, et il abattit toutes les statues consacrées au soleil dans tout le pays d’Israël. Puis il retourna à Jérusalem.
8 ೮ ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
La dix-huitième année de son règne, après qu’il eut purifié le pays et la maison, il envoya Schaphan, fils d’Atsalia, Maaséja, chef de la ville, et Joach, fils de Joachaz, l’archiviste, pour réparer la maison de l’Éternel, son Dieu.
9 ೯ ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು
Ils se rendirent auprès du souverain sacrificateur Hilkija, et on livra l’argent qui avait été apporté dans la maison de Dieu, et que les Lévites gardiens du seuil avaient recueilli de Manassé et d’Éphraïm et de tout le reste d’Israël, et de tout Juda et Benjamin et des habitants de Jérusalem.
10 ೧೦ ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು
On le remit entre les mains de ceux qui étaient chargés de faire exécuter l’ouvrage dans la maison de l’Éternel. Et ils l’employèrent pour ceux qui travaillaient aux réparations de la maison de l’Éternel,
11 ೧೧ ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.
pour les charpentiers et les maçons, pour les achats de pierres de taille et de bois destiné aux poutres et à la charpente des bâtiments qu’avaient détruits les rois de Juda.
12 ೧೨ ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.
Ces hommes agirent avec probité dans leur travail. Ils étaient placés sous l’inspection de Jachath et Abdias, Lévites d’entre les fils de Merari, et de Zacharie et Meschullam, d’entre les fils des Kehathites; tous ceux des Lévites qui étaient habiles musiciens surveillaient les manœuvres
13 ೧೩ ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.
et dirigeaient tous les ouvriers occupés aux divers travaux; il y avait encore d’autres Lévites secrétaires, commissaires et portiers.
14 ೧೪ ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.
Au moment où l’on sortit l’argent qui avait été apporté dans la maison de l’Éternel, le sacrificateur Hilkija trouva le livre de la loi de l’Éternel donnée par Moïse.
15 ೧೫ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.
Alors Hilkija prit la parole et dit à Schaphan, le secrétaire: J’ai trouvé le livre de la loi dans la maison de l’Éternel. Et Hilkija donna le livre à Schaphan.
16 ೧೬ ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.
Schaphan apporta le livre au roi, et lui rendit aussi compte, en disant: Tes serviteurs ont fait tout ce qui leur a été commandé;
17 ೧೭ ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು” ಎಂದು ತಿಳಿಸಿದನು.
ils ont amassé l’argent qui se trouvait dans la maison de l’Éternel, et l’ont remis entre les mains des inspecteurs et des ouvriers.
18 ೧೮ ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.
Schaphan, le secrétaire, dit encore au roi: Le sacrificateur Hilkija m’a donné un livre. Et Schaphan le lut devant le roi.
19 ೧೯ ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.
Lorsque le roi entendit les paroles de la loi, il déchira ses vêtements.
20 ೨೦ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,
Et le roi donna cet ordre à Hilkija, à Achikam, fils de Schaphan, à Abdon, fils de Michée, à Schaphan, le secrétaire, et à Asaja, serviteur du roi:
21 ೨೧ “ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
Allez, consultez l’Éternel pour moi et pour ce qui reste en Israël et en Juda, au sujet des paroles de ce livre qu’on a trouvé; car grande est la colère de l’Éternel qui s’est répandue sur nous, parce que nos pères n’ont point observé la parole de l’Éternel et n’ont point mis en pratique tout ce qui est écrit dans ce livre.
22 ೨೨ ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.
Hilkija et ceux qu’avait désignés le roi allèrent auprès de la prophétesse Hulda, femme de Schallum, fils de Thokehath, fils de Hasra, gardien des vêtements. Elle habitait à Jérusalem, dans l’autre quartier de la ville. Après qu’ils eurent exprimé ce qu’ils avaient à lui dire,
23 ೨೩ ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,
elle leur répondit: Ainsi parle l’Éternel, le Dieu d’Israël: Dites à l’homme qui vous a envoyés vers moi:
24 ೨೪ ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;
Ainsi parle l’Éternel: Voici, je vais faire venir des malheurs sur ce lieu et sur ses habitants, toutes les malédictions écrites dans le livre qu’on a lu devant le roi de Juda.
25 ೨೫ ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.
Parce qu’ils m’ont abandonné et qu’ils ont offert des parfums à d’autres dieux, afin de m’irriter par tous les ouvrages de leurs mains, ma colère s’est répandue sur ce lieu, et elle ne s’éteindra point.
26 ೨೬ ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ,
Mais vous direz au roi de Juda qui vous a envoyés pour consulter l’Éternel: Ainsi parle l’Éternel, le Dieu d’Israël, au sujet des paroles que tu as entendues:
27 ೨೭ “ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.
Parce que ton cœur a été touché, parce que tu t’es humilié devant Dieu en entendant ses paroles contre ce lieu et contre ses habitants, parce que tu t’es humilié devant moi, parce que tu as déchiré tes vêtements et que tu as pleuré devant moi, moi aussi, j’ai entendu, dit l’Éternel.
28 ೨೮ ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.
Voici, je te recueillerai auprès de tes pères, tu seras recueilli en paix dans ton sépulcre, et tes yeux ne verront pas tous les malheurs que je ferai venir sur ce lieu et sur ses habitants. Ils rapportèrent au roi cette réponse.
29 ೨೯ ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು.
Le roi fit assembler tous les anciens de Juda et de Jérusalem.
30 ೩೦ ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
Puis il monta à la maison de l’Éternel avec tous les hommes de Juda et les habitants de Jérusalem, les sacrificateurs et les Lévites, et tout le peuple, depuis le plus grand jusqu’au plus petit. Il lut devant eux toutes les paroles du livre de l’alliance, qu’on avait trouvé dans la maison de l’Éternel.
31 ೩೧ ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.
Le roi se tenait sur son estrade, et il traita alliance devant l’Éternel, s’engageant à suivre l’Éternel, et à observer ses ordonnances, ses préceptes et ses lois, de tout son cœur et de toute son âme, afin de mettre en pratique les paroles de l’alliance écrites dans ce livre.
32 ೩೨ ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.
Et il fit entrer dans l’alliance tous ceux qui se trouvaient à Jérusalem et en Benjamin; et les habitants de Jérusalem agirent selon l’alliance de Dieu, du Dieu de leurs pères.
33 ೩೩ ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.
Josias fit disparaître toutes les abominations de tous les pays appartenant aux enfants d’Israël, et il obligea tous ceux qui se trouvaient en Israël à servir l’Éternel, leur Dieu. Pendant toute sa vie, ils ne se détournèrent point de l’Éternel, le Dieu de leurs pères.