< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 34 >

1 ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.
Yoşiya sekiz yaşında kral oldu ve Yeruşalim'de otuz bir yıl krallık yaptı.
2 ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.
RAB'bin gözünde doğru olanı yaptı. Sağa sola sapmadan atası Davut'un yollarını izledi.
3 ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.
Yoşiya krallığının sekizinci yılında, daha gençken, atası Davut'un Tanrısı'na yönelmeye başladı. Krallığının on ikinci yılında da Yahuda ve Yeruşalim'i puta tapılan yerlerden, Aşera putlarından, oyma ve dökme putlardan arındırmaya başladı.
4 ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.
Yoşiya'nın gözetiminde Baallar'ın sunaklarını yıktırıp üzerlerindeki buhur sunaklarını parçalattı. Aşera putlarını, oyma ve dökme putları da parçalayıp ezdikten sonra tozlarını onlara kurban sunanların mezarlarına serpti.
5 ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.
Kâhinlerin kemiklerini kendi sunaklarının üstünde yaktı. Böylece Yahuda ve Yeruşalim'i arındırdı.
6 ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ,
Naftali'ye dek Manaşşe, Efrayim ve Şimon oymaklarının kentleriyle çevredeki yıkıntılarda bulunan
7 ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.
sunakları, Aşera putlarını yıktı; toz haline gelinceye dek putları ezdi. İsrail ülkesinin her yanındaki buhur sunaklarını paramparça etti. Sonra Yeruşalim'e döndü.
8 ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
Yoşiya ülkeyi ve tapınağı arındırdıktan sonra, krallığının on sekizinci yılında Asalya oğlu Şafan'ı, kent yöneticisi Maaseya'yı ve Yoahaz oğlu devlet tarihçisi Yoah'ı Tanrısı RAB'bin Tapınağı'nı onarmaya gönderdi.
9 ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು
Bunlar Tanrı'nın Tapınağı'na getirilen paraları götürüp Başkâhin Hilkiya'ya verdiler. Kapı nöbetçileri olan Levililer bu parayı Manaşşe ve Efrayim halkından, İsrail'in geri kalanından, bütün Yahudalılar'la Benyaminliler'den, Yeruşalim'de yaşayanlardan toplamışlardı.
10 ೧೦ ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು
Paraları RAB'bin Tapınağı'ndaki işlerin başında bulunan denetçilere verdiler. Onlar da tapınağı yenileme ve onarma işinde çalışan işçilere ödediler.
11 ೧೧ ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.
Yontma taş, Yahuda krallarının yıkılmaya terk ettiği yapıların kiriş ve bağlantı yerlerinin onarımı için kereste almaları için marangozlara, yapıcılara ödeme yapıldı.
12 ೧೨ ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.
Çalışanlar işi özenle yaptılar. Başlarında yönetici olarak Levililer'den şu denetçiler vardı: Merari boyundan Yahat'la Ovadya, Kehat boyundan Zekeriya'yla Meşullam. Çalgı çalmakta usta olan Levililer yük taşıyan işçilerin sorumluluğunu aldılar ve her işi yapan işçileri denetlediler. Levililer'den bazıları da yazman, görevli, kapı nöbetçisi olarak çalıştılar.
13 ೧೩ ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.
14 ೧೪ ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.
RAB'bin Tapınağı'na getirilen parayı çıkarırlarken, Kâhin Hilkiya Musa aracılığıyla verilmiş olan RAB'bin Yasa Kitabı'nı buldu.
15 ೧೫ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.
Yazman Şafan'a, “RAB'bin Tapınağı'nda Yasa Kitabı'nı buldum” diyerek kitabı ona verdi.
16 ೧೬ ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.
Şafan kitabı krala götürerek, “Görevlilerin kendilerine verilen her işi yapıyorlar” diye haber verdi,
17 ೧೭ ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು” ಎಂದು ತಿಳಿಸಿದನು.
“RAB'bin Tapınağı'ndaki paraları alıp denetçilerle işçilere verdiler.”
18 ೧೮ ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.
Ardından, “Kâhin Hilkiya bana bir kitap verdi” diyerek kitabı krala okudu.
19 ೧೯ ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.
Kral Kutsal Yasa'daki sözleri duyunca giysilerini yırttı.
20 ೨೦ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,
Hilkiya'ya, Şafan oğlu Ahikam'a, Mika oğlu Avdon'a, Yazman Şafan'a ve kendi özel görevlisi Asaya'ya şöyle buyurdu:
21 ೨೧ “ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
“Gidin, bulunan bu kitabın sözleri hakkında benim için de, İsrail ve Yahuda halkının geri kalanı için de RAB'be danışın. RAB'bin bize karşı alevlenen öfkesi büyüktür. Çünkü atalarımız RAB'bin sözüne kulak asmadılar, bu kitapta yazılanlara uymadılar.”
22 ೨೨ ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.
Hilkiya ile kralın gönderdiği adamlar varıp tapınaktaki giysilerin nöbetçisi Hasra oğlu Tokhat oğlu Şallum'un karısı Peygamber Hulda'ya danıştılar. Hulda Yeruşalim'de, İkinci Mahalle'de oturuyordu.
23 ೨೩ ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,
Hulda onlara şöyle dedi: “İsrail'in Tanrısı RAB, ‘Sizi bana gönderen adama şunları söyleyin’ diyor:
24 ೨೪ ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;
‘Yahuda Kralı'nın önünde okunan kitapta yazılı bütün lanetleri, felaketi buraya da, burada yaşayan halkın başına da getireceğim.
25 ೨೫ ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.
Beni terk ettikleri, elleriyle yaptıkları başka ilahlara buhur yakıp beni kızdırdıkları için buraya karşı öfkem alevlenecek ve sönmeyecek.’
26 ೨೬ ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ,
“RAB'be danışmak için sizi gönderen Yahuda Kralı'na şöyle deyin: ‘İsrail'in Tanrısı RAB duyduğun sözlere ilişkin diyor ki:
27 ೨೭ “ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.
Madem burası ve burada yaşayanlarla ilgili sözlerimi duyunca yüreğin yumuşadı, kendini alçalttın, evet, önümde kendini alçalttın, giysilerini yırtıp huzurumda ağladın, ben de yalvarışını işittim. Böyle diyor RAB.
28 ೨೮ ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.
Seni atalarına kavuşturacağım, esenlik içinde mezarına gömüleceksin. Buraya ve burada yaşayanlara getireceğim büyük felaketi görmeyeceksin.’” Hilkiya ile yanındakiler bu sözleri krala ilettiler.
29 ೨೯ ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು.
Kral Yoşiya haber gönderip Yahuda ve Yeruşalim'in bütün ileri gelenlerini topladı.
30 ೩೦ ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
Sonra Yahudalılar, Yeruşalim'de yaşayanlar, kâhinler, Levililer, büyük küçük herkesle birlikte RAB'bin Tapınağı'na çıktı. RAB'bin Tapınağı'nda bulunmuş olan Antlaşma Kitabı'nı baştan sona kadar herkesin duyacağı biçimde okudu.
31 ೩೧ ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.
Özel yerinde durarak RAB'bin yolunu izleyeceğine, buyruklarını, öğütlerini, kurallarını candan ve yürekten uygulayacağına, bu kitapta yazılı antlaşmanın koşullarını yerine getireceğine ilişkin RAB'bin huzurunda antlaşma yaptı.
32 ೩೨ ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.
Sonra oradaki Yeruşalim ve Benyamin halkına bu antlaşmaya bağlı kalacaklarına ilişkin ant içirtti. Yeruşalim'de yaşayanlar Tanrı'nın, atalarının Tanrısı'nın antlaşmasına bağlı kaldılar.
33 ೩೩ ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.
Yoşiya İsrail topraklarından bütün iğrenç putları kaldırttı. İsrail'de kalan halkın Tanrıları RAB'be kulluk etmelerini sağladı. Kral yaşadığı sürece halk atalarının Tanrısı RAB'bin ardınca yürümekten vazgeçmedi.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 34 >