< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 35 >
1 ೧ ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು.
При това, Иосия направи пасха Господу в Ерусалим; и на четиринадесетия ден от първия месец заклаха пасхалните агнета.
2 ೨ ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಿಸಿದನು.
И той постави свещениците в длъжностите им, и ги насърчи да служат на Господния дом.
3 ೩ ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.
И рече на осветените Господу левити, които поучаваха целия Израил: Положете светия ковчег в дома, който построи Израилевият цар Соломон, Давидовият син; няма да го носите вече на рамена; сега слугувайте на Господа вашия Бог и на людете Му Израил.
4 ೪ ಇಸ್ರಾಯೇಲರ ಅರಸನಾದ ದಾವೀದನೂ, ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,
Пригответе се според бещините си домове, по отредите си, според предписанието на Израилевия цар Давида, и според предписанието на сина му Соломона;
5 ೫ ನಿಮ್ಮ ಸಹೋದರರಾದ ಇಸ್ರಾಯೇಲರ ಒಂದೊಂದು ಗೋತ್ರಶಾಖೆಗಳಿಗಾಗಿ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ
и стойте в светилището, според отделенията на бащините домове на братята си миряните, и за всяко нека има по един отдел от левитските бащини домове.
6 ೬ ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ” ಎಂದು ಆಜ್ಞಾಪಿಸಿದನು.
И като заколите пасхалните агнета, осветете се, и пригответе за братята си, за да направят и те според Господното слово дадено чрез Моисея.
7 ೭ ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.
И Иосия подари на людете за жертви овце, агнета и ярета, на брой тридесет хиляди, всичките за пасхалните жертви, за всички, които се намериха там, и три хиляди говеда; тия бяха от царския имот.
8 ೮ ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು.
И първенците му подариха на драго сърце на людете, на свещениците и на левитите. А управителите на Божия дом, Хелкия, Захария и Ехиил, подариха на свещениците за пасхалните жертви две хиляди и шестстотин агнета и ярета и триста говеда.
9 ೯ ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ, ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಸ್ಕದ ಕುರಿಮರಿಗಳನ್ನೂ, ಐನೂರು ಹೋರಿಗಳನ್ನೂ ದಾನಮಾಡಿದರು.
Също и Хонения и братята му Семаия, и Натанаил, и началниците на левитите, Асавия, Еиил и Иозавад, подариха на левитите за пасхалните жертви пет хиляди агнета и ярета и петстотин говеда.
10 ೧೦ ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;
Така се приготви службата. Тогава свещениците застанаха на мястото си, и левитите по отредите си, според царската заповед.
11 ೧೧ ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.
И заклаха пасхалните агнета, и свещениците поръсиха кръвта, която вземаха от ръката на левитите, които и одраха жертвите.
12 ೧೨ ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.
И отделиха частите за всеизгарянето, за да ги дадат според отделенията на бащините домове на людете, за да принесат Господу според предписанията в Моисеевата книга; така сториха и с говедата.
13 ೧೩ ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.
И опекоха пасхалните агнета с огън според наредбата; а светите жертви свариха в котли, в гърнета и в тави, и ги разделиха веднага помежду всичките люде.
14 ೧೪ ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ, ಕೊಬ್ಬನ್ನೂ ಸರ್ಮಪಿಸುತ್ತಾ ಇದ್ದುದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರ ಭೋಜನ ಸಿದ್ಧಮಾಡಿದರು.
После приготвиха за себе си и за свещениците; защото свещениците, Аароновите потомци, се занимаваха с принасяне всеизгарянията и тлъстините до нощта; затова левитите приготвиха за себе си и за свещениците, Аароновите потомци.
15 ೧೫ ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.
И певците, Асафовите потомци, бяха на мястото си, според заповедта на Давида, на Асафа, на Емана и на царския гледач Едутун; и вратарите пазеха на всяка порта; нямаше нужда да оставят работата си, защото братята им, левитите, приготвиха за тях.
16 ೧೬ ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವುದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವುದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿನವೇ ಸಿದ್ಧವಾಯಿತು.
И тъй, цялата Господна служба биде приготвена в същия ден, за да направят пасхата и да принесат всеизгарянията на Господния олтар, според заповедта на цар Иосия.
17 ೧೭ ಕೂಡಿಬಂದಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು.
И израилтяните, които се намериха там, правиха в онова време пасхата и празника на безквасните хлябове седем дни.
18 ೧೮ ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.
Такава пасха не беше ставала в Израил от дните на пророк Самуила; нито един от всичките Израилеви царе не беше направил такава пасха, каквато направиха Иосия, и свещениците, и левитите, и целият Юда и Израил, които се намериха там, и ерусалимските жители.
19 ೧೯ ಈ ಪಸ್ಕಹಬ್ಬವು ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು.
Тая пасха стана в осемнадесетата година на Иосиевото царуване.
20 ೨೦ ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬುವವನು ಯುದ್ಧಮಾಡುವುದಕ್ಕೋಸ್ಕರ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.
А след всичко това, когато Иосия беше наредил Божия дом, египетския цар Нехао възлезе за да воюва против Кархамис при реката Евфрат; и Иосия излезе против него.
21 ೨೧ ಯೋಷೀಯನು ಅವನಿಗೆ ವಿರುದ್ಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರುದ್ಧವಾಗಿ ಅಲ್ಲ. ನನ್ನ ಶತ್ರುವಂಶಕ್ಕೆ ವಿರುದ್ಧವಾಗಿ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರುದ್ಧ ಕೈಯೆತ್ತುವುದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು” ಎಂದು ಹೇಳಿಸಿದನು.
А той прати посланици до него да кажат: Какво има между мене и тебе, царю Юдов? Не ида днес против тебе, но против дома, с който имам война, и Бог ми е заповядал да побързам; остави се от Бога, който е с мене, да не би да те изтреби.
22 ೨೨ ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.
Обаче Иосия не отвърна лицето си от него, но преличи се да воюва против него, и не послуша думите на Нехао, които бяха из Божиите уста, и дойде да се бие в долината Магедон.
23 ೨೩ ಅಲ್ಲಿ ಬಿಲ್ಲುಗಾರರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, “ನನಗೆ ದೊಡ್ಡ ಗಾಯವಾಯಿತು, ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ” ಎಂದನು.
И стрелците устрелиха цар Иосия; и царят рече на слугите си: Изведете ме от тук, защото съм тежко ранен.
24 ೨೪ ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.
И тъй, слугите му го изведоха из колесницата, та го качиха на втората му колесница, и докараха го в Ерусалим; и умря, и биде погребан в гробищата на бащите си. И целият Юда и Ерусалим жалееха за Иосия.
25 ೨೫ ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.
Също и Еремия плака за Иосия; и всичките певци и певици до днес напомнюват Иосия в плачовете си, които и направиха това обичай в Израиля; и ето, те са написани в Плача.
26 ೨೬ ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರ ಅನುಸಾರವಾದ ಅವನ ಭಕ್ತಿಕಾರ್ಯಗಳೂ,
А останалите дела на Иосия, и добродетелите му сторени според предписаното в Господния закон,
27 ೨೭ ಅವನ ಪೂರ್ವೋತ್ತರ ವೃತ್ತಾಂತವೂ ಇಸ್ರಾಯೇಲರ ಮತ್ತು ಯೆಹೂದ್ಯ ರಾಜರ ಗ್ರಂಥದಲ್ಲಿ ಬರೆದಿರುತ್ತವೆ.
и делата му, първите и последните, ето, писани са в Книгата на Израилевите и Юдовите царе.