< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 35 >

1 ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು.
וַיַּ֨עַשׂ יֹאשִׁיָּ֧הוּ בִֽירוּשָׁלַ֛͏ִם פֶּ֖סַח לַיהוָ֑ה וַיִּשְׁחֲט֣וּ הַפֶּ֔סַח בְּאַרְבָּעָ֥ה עָשָׂ֖ר לַחֹ֥דֶשׁ הָרִאשֹֽׁון׃
2 ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಯೆಹೋವನ ಆಲಯದ ಸೇವೆಗಾಗಿ ಅವರನ್ನು ಪ್ರೋತ್ಸಾಹಿಸಿದನು.
וַיַּעֲמֵ֥ד הַכֹּהֲנִ֖ים עַל־מִשְׁמְרֹותָ֑ם וַֽיְחַזְּקֵ֔ם לַעֲבֹודַ֖ת בֵּ֥ית יְהוָֽה׃
3 ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.
וַיֹּ֣אמֶר לַ֠לְוִיִּם הַמְּבוּנִים (הַמְּבִינִ֨ים) לְכָל־יִשְׂרָאֵ֜ל הַקְּדֹושִׁ֣ים לַיהוָ֗ה תְּנ֤וּ אֶת־אֲרֹון־הַקֹּ֙דֶשׁ֙ בַּ֠בַּיִת אֲשֶׁ֨ר בָּנָ֜ה שְׁלֹמֹ֤ה בֶן־דָּוִיד֙ מֶ֣לֶךְ יִשְׂרָאֵ֔ל אֵין־לָכֶ֥ם מַשָּׂ֖א בַּכָּתֵ֑ף עַתָּ֗ה עִבְדוּ֙ אֶת־יְהוָ֣ה אֱלֹֽהֵיכֶ֔ם וְאֵ֖ת עַמֹּ֥ו יִשְׂרָאֵֽל׃
4 ಇಸ್ರಾಯೇಲರ ಅರಸನಾದ ದಾವೀದನೂ, ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,
וְהִכֹּונוּ (וְהָכִ֥ינוּ) לְבֵית־אֲבֹותֵיכֶ֖ם כְּמַחְלְקֹותֵיכֶ֑ם בִּכְתָ֗ב דָּוִיד֙ מֶ֣לֶךְ יִשְׂרָאֵ֔ל וּבְמִכְתַּ֖ב שְׁלֹמֹ֥ה בְנֹֽו׃
5 ನಿಮ್ಮ ಸಹೋದರರಾದ ಇಸ್ರಾಯೇಲರ ಒಂದೊಂದು ಗೋತ್ರಶಾಖೆಗಳಿಗಾಗಿ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ
וְעִמְד֣וּ בַקֹּ֗דֶשׁ לִפְלֻגֹּות֙ בֵּ֣ית הָֽאָבֹ֔ות לַאֲחֵיכֶ֖ם בְּנֵ֣י הָעָ֑ם וַחֲלֻקַּ֥ת בֵּֽית־אָ֖ב לַלְוִיִּֽם׃
6 ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ” ಎಂದು ಆಜ್ಞಾಪಿಸಿದನು.
וְשַׁחֲט֖וּ הַפָּ֑סַח וְהִתְקַדְּשׁוּ֙ וְהָכִ֣ינוּ לַאֲחֵיכֶ֔ם לַעֲשֹׂ֥ות כִּדְבַר־יְהוָ֖ה בְּיַד־מֹשֶֽׁה׃ פ
7 ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.
וַיָּ֣רֶם יֹאשִׁיָּ֣הוּ לִבְנֵ֪י הָעָ֟ם צֹ֞אן כְּבָשִׂ֣ים וּבְנֵֽי־עִזִּים֮ הַכֹּ֣ל לַפְּסָחִים֒ לְכָל־הַנִּמְצָ֗א לְמִסְפַּר֙ שְׁלֹשִׁ֣ים אֶ֔לֶף וּבָקָ֖ר שְׁלֹ֣שֶׁת אֲלָפִ֑ים אֵ֖לֶּה מֵרְכ֥וּשׁ הַמֶּֽלֶךְ׃ ס
8 ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು.
וְשָׂרָ֞יו לִנְדָבָ֥ה לָעָ֛ם לַכֹּהֲנִ֥ים וְלַלְוִיִּ֖ם הֵרִ֑ימוּ חִלְקִיָּ֨ה וּזְכַרְיָ֜הוּ וִֽיחִיאֵ֗ל נְגִידֵי֙ בֵּ֣ית הָאֱלֹהִ֔ים לַכֹּהֲנִ֞ים נָתְנ֣וּ לַפְּסָחִ֗ים אַלְפַּ֙יִם֙ וְשֵׁ֣שׁ מֵאֹ֔ות וּבָקָ֖ר שְׁלֹ֥שׁ מֵאֹֽות׃
9 ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ, ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಸ್ಕದ ಕುರಿಮರಿಗಳನ್ನೂ, ಐನೂರು ಹೋರಿಗಳನ್ನೂ ದಾನಮಾಡಿದರು.
וְכָונַנְיָהוּ (וְ֠כָֽנַנְיָהוּ) וּשְׁמַֽעְיָ֨הוּ וּנְתַנְאֵ֜ל אֶחָ֗יו וַחֲשַׁבְיָ֧הוּ וִיעִיאֵ֛ל וְיֹוזָבָ֖ד שָׂרֵ֣י הַלְוִיִּ֑ם הֵרִ֨ימוּ לַלְוִיִּ֤ם לַפְּסָחִים֙ חֲמֵ֣שֶׁת אֲלָפִ֔ים וּבָקָ֖ר חֲמֵ֥שׁ מֵאֹֽות׃
10 ೧೦ ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;
וַתִּכֹּ֖ון הָעֲבֹודָ֑ה וַיַּֽעַמְד֨וּ הַכֹּהֲנִ֧ים עַל־עָמְדָ֛ם וְהַלְוִיִּ֥ם עַל־מַחְלְקֹותָ֖ם כְּמִצְוַ֥ת הַמֶּֽלֶךְ׃
11 ೧೧ ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.
וַֽיִּשְׁחֲט֖וּ הַפָּ֑סַח וַיִּזְרְק֤וּ הַכֹּהֲנִים֙ מִיָּדָ֔ם וְהַלְוִיִּ֖ם מַפְשִׁיטִֽים׃
12 ೧೨ ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.
וַיָּסִ֨ירוּ הָעֹלָ֜ה לְ֠תִתָּם לְמִפְלַגֹּ֤ות לְבֵית־אָבֹות֙ לִבְנֵ֣י הָעָ֔ם לְהַקְרִיב֙ לַיהוָ֔ה כַּכָּת֖וּב בְּסֵ֣פֶר מֹשֶׁ֑ה וְכֵ֖ן לַבָּקָֽר׃
13 ೧೩ ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.
וַֽיְבַשְּׁל֥וּ הַפֶּ֛סַח בָּאֵ֖שׁ כַּמִּשְׁפָּ֑ט וְהַקֳּדָשִׁ֣ים בִּשְּׁל֗וּ בַּסִּירֹ֤ות וּבַדְּוָדִים֙ וּבַצֵּ֣לָחֹ֔ות וַיָּרִ֖יצוּ לְכָל־בְּנֵ֥י הָעָֽם׃
14 ೧೪ ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ, ಕೊಬ್ಬನ್ನೂ ಸರ್ಮಪಿಸುತ್ತಾ ಇದ್ದುದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರ ಭೋಜನ ಸಿದ್ಧಮಾಡಿದರು.
וְאַחַ֗ר הֵכִ֤ינוּ לָהֶם֙ וְלַכֹּ֣הֲנִ֔ים כִּ֤י הַכֹּהֲנִים֙ בְּנֵ֣י אַהֲרֹ֔ן בְּהַֽעֲלֹ֛ות הָעֹולָ֥ה וְהַחֲלָבִ֖ים עַד־לָ֑יְלָה וְהַלְוִיִּם֙ הֵכִ֣ינוּ לָהֶ֔ם וְלַכֹּהֲנִ֖ים בְּנֵ֥י אַהֲרֹֽן׃
15 ೧೫ ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.
וְהַמְשֹֽׁרֲרִ֨ים בְּנֵי־אָסָ֜ף עַל־מַעֲמָדָ֗ם כְּמִצְוַ֤ת דָּוִיד֙ וְאָסָ֞ף וְהֵימָ֤ן וִֽידֻתוּן֙ חֹוזֵ֣ה הַמֶּ֔לֶךְ וְהַשֹּׁעֲרִ֖ים לְשַׁ֣עַר וָשָׁ֑עַר אֵ֣ין לָהֶ֗ם לָסוּר֙ מֵעַ֣ל עֲבֹֽדָתָ֔ם כִּֽי־אֲחֵיהֶ֥ם הַלְוִיִּ֖ם הֵכִ֥ינוּ לָהֶֽם׃
16 ೧೬ ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವುದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವುದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿನವೇ ಸಿದ್ಧವಾಯಿತು.
וַ֠תִּכֹּון כָּל־עֲבֹודַ֨ת יְהוָ֜ה בַּיֹּ֤ום הַהוּא֙ לַעֲשֹׂ֣ות הַפֶּ֔סַח וְהַעֲלֹ֣ות עֹלֹ֔ות עַ֖ל מִזְבַּ֣ח יְהוָ֑ה כְּמִצְוַ֖ת הַמֶּ֥לֶךְ יֹאשִׁיָּֽהוּ׃
17 ೧೭ ಕೂಡಿಬಂದಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು.
וַיַּעֲשׂ֨וּ בְנֵֽי־יִשְׂרָאֵ֧ל הַֽנִּמְצְאִ֛ים אֶת־הַפֶּ֖סַח בָּעֵ֣ת הַהִ֑יא וְאֶת־חַ֥ג הַמַּצֹּ֖ות שִׁבְעַ֥ת יָמִֽים׃
18 ೧೮ ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿನಗಳಿಂದ ಇಸ್ರಾಯೇಲರಲ್ಲಿ ನಡೆಯಲೇ ಇಲ್ಲ. ಯೋಷೀಯನೂ, ಯಾಜಕರೂ, ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲರು, ಯೆಹೂದ್ಯರು, ಯೆರೂಸಲೇಮಿನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.
וְלֹֽא־נַעֲשָׂ֨ה פֶ֤סַח כָּמֹ֙הוּ֙ בְּיִשְׂרָאֵ֔ל מִימֵ֖י שְׁמוּאֵ֣ל הַנָּבִ֑יא וְכָל־מַלְכֵ֣י יִשְׂרָאֵ֣ל ׀ לֹֽא־עָשׂ֡וּ כַּפֶּ֣סַח אֲשֶׁר־עָשָׂ֣ה יֹֽ֠אשִׁיָּהוּ וְהַכֹּהֲנִ֨ים וְהַלְוִיִּ֤ם וְכָל־יְהוּדָה֙ וְיִשְׂרָאֵ֣ל הַנִּמְצָ֔א וְיֹושְׁבֵ֖י יְרוּשָׁלָֽ͏ִם׃ ס
19 ೧೯ ಈ ಪಸ್ಕಹಬ್ಬವು ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು.
בִּשְׁמֹונֶ֤ה עֶשְׂרֵה֙ שָׁנָ֔ה לְמַלְכ֖וּת יֹאשִׁיָּ֑הוּ נַעֲשָׂ֖ה הַפֶּ֥סַח הַזֶּֽה׃
20 ೨೦ ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬುವವನು ಯುದ್ಧಮಾಡುವುದಕ್ಕೋಸ್ಕರ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.
אַחֲרֵ֣י כָל־זֹ֗את אֲשֶׁ֨ר הֵכִ֤ין יֹֽאשִׁיָּ֙הוּ֙ אֶת־הַבַּ֔יִת עָלָ֞ה נְכֹ֧ו מֶֽלֶךְ־מִצְרַ֛יִם לְהִלָּחֵ֥ם בְּכַרְכְּמִ֖ישׁ עַל־פְּרָ֑ת וַיֵּצֵ֥א לִקְרָאתֹ֖ו יֹאשִׁיָּֽהוּ׃
21 ೨೧ ಯೋಷೀಯನು ಅವನಿಗೆ ವಿರುದ್ಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರುದ್ಧವಾಗಿ ಅಲ್ಲ. ನನ್ನ ಶತ್ರುವಂಶಕ್ಕೆ ವಿರುದ್ಧವಾಗಿ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರುದ್ಧ ಕೈಯೆತ್ತುವುದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು” ಎಂದು ಹೇಳಿಸಿದನು.
וַיִּשְׁלַ֣ח אֵלָ֣יו מַלְאָכִ֣ים ׀ לֵאמֹר֩ ׀ מַה־לִּ֨י וָלָ֜ךְ מֶ֣לֶךְ יְהוּדָ֗ה לֹא־עָלֶ֨יךָ אַתָּ֤ה הַיֹּום֙ כִּ֚י אֶל־בֵּ֣ית מִלְחַמְתִּ֔י וֵאלֹהִ֖ים אָמַ֣ר לְבַֽהֲלֵ֑נִי חֲדַל־לְךָ֛ מֵאֱלֹהִ֥ים אֲשֶׁר־עִמִּ֖י וְאַל־יַשְׁחִיתֶֽךָ׃
22 ೨೨ ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.
וְלֹֽא־הֵסֵב֩ יֹאשִׁיָּ֨הוּ פָנָ֜יו מִמֶּ֗נּוּ כִּ֤י לְהִלָּחֵֽם־בֹּו֙ הִתְחַפֵּ֔שׂ וְלֹ֥א שָׁמַ֛ע אֶל־דִּבְרֵ֥י נְכֹ֖ו מִפִּ֣י אֱלֹהִ֑ים וַיָּבֹ֕א לְהִלָּחֵ֖ם בְּבִקְעַ֥ת מְגִדֹּֽו׃
23 ೨೩ ಅಲ್ಲಿ ಬಿಲ್ಲುಗಾರರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, “ನನಗೆ ದೊಡ್ಡ ಗಾಯವಾಯಿತು, ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ” ಎಂದನು.
וַיֹּרוּ֙ הַיֹּרִ֔ים לַמֶּ֖לֶךְ יֹאשִׁיָּ֑הוּ וַיֹּ֨אמֶר הַמֶּ֤לֶךְ לַעֲבָדָיו֙ הַעֲבִיר֔וּנִי כִּ֥י הָחֳלֵ֖יתִי מְאֹֽד׃
24 ೨೪ ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.
וַיַּֽעֲבִירֻ֨הוּ עֲבָדָ֜יו מִן־הַמֶּרְכָּבָ֗ה וַֽיַּרְכִּיבֻהוּ֮ עַ֣ל רֶ֣כֶב הַמִּשְׁנֶה֮ אֲשֶׁר־לֹו֒ וַיֹּולִיכֻ֙הוּ֙ יְר֣וּשָׁלַ֔͏ִם וַיָּ֕מָת וַיִּקָּבֵ֖ר בְּקִבְרֹ֣ות אֲבֹתָ֑יו וְכָל־יְהוּדָה֙ וִיר֣וּשָׁלַ֔͏ִם מִֽתְאַבְּלִ֖ים עַל־יֹאשִׁיָּֽהוּ׃ פ
25 ೨೫ ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.
וַיְקֹונֵ֣ן יִרְמְיָהוּ֮ עַל־יֹאשִׁיָּהוּ֒ וַיֹּאמְר֣וּ כָֽל־הַשָּׁרִ֣ים ׀ וְ֠הַשָּׁרֹות בְּקִינֹ֨ותֵיהֶ֤ם עַל־יֹאשִׁיָּ֙הוּ֙ עַד־הַיֹּ֔ום וַיִּתְּנ֥וּם לְחֹ֖ק עַל־יִשְׂרָאֵ֑ל וְהִנָּ֥ם כְּתוּבִ֖ים עַל־הַקִּינֹֽות׃
26 ೨೬ ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರ ಅನುಸಾರವಾದ ಅವನ ಭಕ್ತಿಕಾರ್ಯಗಳೂ,
וְיֶ֛תֶר דִּבְרֵ֥י יֹאשִׁיָּ֖הוּ וַחֲסָדָ֑יו כַּכָּת֖וּב בְּתֹורַ֥ת יְהוָֽה׃
27 ೨೭ ಅವನ ಪೂರ್ವೋತ್ತರ ವೃತ್ತಾಂತವೂ ಇಸ್ರಾಯೇಲರ ಮತ್ತು ಯೆಹೂದ್ಯ ರಾಜರ ಗ್ರಂಥದಲ್ಲಿ ಬರೆದಿರುತ್ತವೆ.
וּדְבָרָ֕יו הָרִאשֹׁנִ֖ים וְהָאַחֲרֹנִ֑ים הִנָּ֣ם כְּתוּבִ֔ים עַל־סֵ֥פֶר מַלְכֵֽי־יִשְׂרָאֵ֖ל וִיהוּדָֽה׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 35 >