< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 36 >

1 ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.
וַיִּקְחוּ֙ עַם־הָאָ֔רֶץ אֶת־יְהוֹאָחָ֖ז בֶּן־יֹאשִׁיָּ֑הוּ וַיַּמְלִיכֻ֥הוּ תַֽחַת־אָבִ֖יו בִּירוּשָׁלִָֽם׃
2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
בֶּן־שָׁל֧וֹשׁ וְעֶשְׂרִ֛ים שָׁנָ֖ה יוֹאָחָ֣ז בְּמָלְכ֑וֹ וּשְׁלֹשָׁ֣ה חֳדָשִׁ֔ים מָלַ֖ךְ בִּירוּשָׁלִָֽם׃
3 ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
וַיְסִירֵ֥הוּ מֶֽלֶךְ־מִצְרַ֖יִם בִּֽירוּשָׁלִָ֑ם וַֽיַּעֲנֹשׁ֙ אֶת־הָאָ֔רֶץ מֵאָ֥ה כִכַּר־כֶּ֖סֶף וְכִכַּ֥ר זָהָֽב׃
4 ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.
וַיַּמְלֵ֨ךְ מֶֽלֶךְ־מִצְרַ֜יִם אֶת־אֶלְיָקִ֣ים אָחִ֗יו עַל־יְהוּדָה֙ וִיר֣וּשָׁלִַ֔ם וַיַּסֵּ֥ב אֶת־שְׁמ֖וֹ יְהוֹיָקִ֑ים וְאֶת־יוֹאָחָ֤ז אָחִיו֙ לָקַ֣ח נְכ֔וֹ וַיְבִיאֵ֖הוּ מִצְרָֽיְמָה׃ פ
5 ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
בֶּן־עֶשְׂרִ֨ים וְחָמֵ֤שׁ שָׁנָה֙ יְהוֹיָקִ֣ים בְּמָלְכ֔וֹ וְאַחַ֤ת עֶשְׂרֵה֙ שָׁנָ֔ה מָלַ֖ךְ בִּירוּשָׁלִָ֑ם וַיַּ֣עַשׂ הָרַ֔ע בְּעֵינֵ֖י יְהוָ֥ה אֱלֹהָֽיו׃
6 ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,
עָלָ֣יו עָלָ֔ה נְבוּכַדְנֶאצַּ֖ר מֶ֣לֶךְ בָּבֶ֑ל וַיַּֽאַסְרֵ֙הוּ֙ בַּֽנְחֻשְׁתַּ֔יִם לְהֹלִיכ֖וֹ בָּבֶֽלָה׃
7 ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
וּמִכְּלֵי֙ בֵּ֣ית יְהוָ֔ה הֵבִ֥יא נְבוּכַדְנֶאצַּ֖ר לְבָבֶ֑ל וַיִּתְּנֵ֥ם בְּהֵיכָל֖וֹ בְּבָבֶֽל׃
8 ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.
וְיֶתֶר֩ דִּבְרֵ֨י יְהֽוֹיָקִ֜ים וְתֹֽעֲבֹתָ֤יו אֲשֶׁר־עָשָׂה֙ וְהַנִּמְצָ֣א עָלָ֔יו הִנָּ֣ם כְּתוּבִ֗ים עַל־סֵ֛פֶר מַלְכֵ֥י יִשְׂרָאֵ֖ל וִֽיהוּדָ֑ה וַיִּמְלֹ֛ךְ יְהוֹיָכִ֥ין בְּנ֖וֹ תַּחְתָּֽיו׃ פ
9 ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
בֶּן־שְׁמוֹנֶ֤ה שָׁנִים֙ יְהוֹיָכִ֣ין בְּמָלְכ֔וֹ וּשְׁלֹשָׁ֤ה חֳדָשִׁים֙ וַעֲשֶׂ֣רֶת יָמִ֔ים מָלַ֖ךְ בִּירוּשָׁלִָ֑ם וַיַּ֥עַשׂ הָרַ֖ע בְּעֵינֵ֥י יְהוָֽה׃
10 ೧೦ ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.
וְלִתְשׁוּבַ֣ת הַשָּׁנָ֗ה שָׁלַח֙ הַמֶּ֣לֶךְ נְבֽוּכַדְנֶאצַּ֔ר וַיְבִאֵ֣הוּ בָבֶ֔לָה עִם־כְּלֵ֖י חֶמְדַּ֣ת בֵּית־יְהוָ֑ה וַיַּמְלֵךְ֙ אֶת־צִדְקִיָּ֣הוּ אָחִ֔יו עַל־יְהוּדָ֖ה וִֽירוּשָׁלִָֽם׃ פ
11 ೧೧ ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.
בֶּן־עֶשְׂרִ֧ים וְאַחַ֛ת שָׁנָ֖ה צִדְקִיָּ֣הוּ בְמָלְכ֑וֹ וְאַחַ֤ת עֶשְׂרֵה֙ שָׁנָ֔ה מָלַ֖ךְ בִּירוּשָׁלִָֽם׃
12 ೧೨ ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
וַיַּ֣עַשׂ הָרַ֔ע בְּעֵינֵ֖י יְהוָ֣ה אֱלֹהָ֑יו לֹ֣א נִכְנַ֗ע מִלִּפְנֵ֛י יִרְמְיָ֥הוּ הַנָּבִ֖יא מִפִּ֥י יְהוָֽה׃
13 ೧೩ ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
וְ֠גַם בַּמֶּ֤לֶךְ נְבֽוּכַדְנֶאצַּר֙ מָרָ֔ד אֲשֶׁ֥ר הִשְׁבִּיע֖וֹ בֵּֽאלֹהִ֑ים וַיֶּ֤קֶשׁ אֶת־עָרְפּוֹ֙ וַיְאַמֵּ֣ץ אֶת־לְבָב֔וֹ מִשּׁ֕וּב אֶל־יְהוָ֖ה אֱלֹהֵ֥י יִשְׂרָאֵֽל׃
14 ೧೪ ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
גַּ֠ם כָּל־שָׂרֵ֨י הַכֹּהֲנִ֤ים וְהָעָם֙ הִרְבּ֣וּ לִמְעָל מַ֔עַל כְּכֹ֖ל תֹּעֲב֣וֹת הַגּוֹיִ֑ם וַֽיְטַמְּאוּ֙ אֶת־בֵּ֣ית יְהוָ֔ה אֲשֶׁ֥ר הִקְדִּ֖ישׁ בִּירוּשָׁלִָֽם׃
15 ೧೫ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
וַיִּשְׁלַ֡ח יְהוָה֩ אֱלֹהֵ֨י אֲבוֹתֵיהֶ֧ם עֲלֵיהֶ֛ם בְּיַ֥ד מַלְאָכָ֖יו הַשְׁכֵּ֣ם וְשָׁל֑וֹחַ כִּֽי־חָמַ֥ל עַל־עַמּ֖וֹ וְעַל־מְעוֹנֽוֹ׃
16 ೧೬ ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
וַיִּֽהְי֤וּ מַלְעִבִים֙ בְּמַלְאֲכֵ֣י הָאֱלֹהִ֔ים וּבוֹזִ֣ים דְּבָרָ֔יו וּמִֽתַּעְתְּעִ֖ים בִּנְבִאָ֑יו עַ֠ד עֲל֧וֹת חֲמַת־יְהוָ֛ה בְּעַמּ֖וֹ עַד־לְאֵ֥ין מַרְפֵּֽא׃
17 ೧೭ ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
וַיַּ֨עַל עֲלֵיהֶ֜ם אֶת־מֶ֣לֶךְ כַּשְׂדִּ֗ים וַיַּהֲרֹ֨ג בַּחוּרֵיהֶ֤ם בַּחֶ֙רֶב֙ בְּבֵ֣ית מִקְדָּשָׁ֔ם וְלֹ֥א חָמַ֛ל עַל־בָּח֥וּר וּבְתוּלָ֖ה זָקֵ֣ן וְיָשֵׁ֑שׁ הַכֹּ֖ל נָתַ֥ן בְּיָדֽוֹ׃
18 ೧೮ ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
וְ֠כֹל כְּלֵ֞י בֵּ֤ית הָאֱלֹהִים֙ הַגְּדֹלִ֣ים וְהַקְּטַנִּ֔ים וְאֹֽצְרוֹת֙ בֵּ֣ית יְהוָ֔ה וְאֹצְר֥וֹת הַמֶּ֖לֶךְ וְשָׂרָ֑יו הַכֹּ֖ל הֵבִ֥יא בָבֶֽל׃
19 ೧೯ ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
וַֽיִּשְׂרְפוּ֙ אֶת־בֵּ֣ית הָאֱלֹהִ֔ים וַֽיְנַתְּצ֔וּ אֵ֖ת חוֹמַ֣ת יְרוּשָׁלִָ֑ם וְכָל־אַרְמְנוֹתֶ֙יהָ֙ שָׂרְפ֣וּ בָאֵ֔שׁ וְכָל־כְּלֵ֥י מַחֲמַדֶּ֖יהָ לְהַשְׁחִֽית׃ ס
20 ೨೦ ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
וַיֶּ֛גֶל הַשְּׁאֵרִ֥ית מִן־הַחֶ֖רֶב אֶל־בָּבֶ֑ל וַֽיִּהְיוּ־ל֤וֹ וּלְבָנָיו֙ לַעֲבָדִ֔ים עַד־מְלֹ֖ךְ מַלְכ֥וּת פָּרָֽס׃
21 ೨೧ ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.
לְמַלֹּ֤אות דְּבַר־יְהוָה֙ בְּפִ֣י יִרְמְיָ֔הוּ עַד־רָצְתָ֥ה הָאָ֖רֶץ אֶת־שַׁבְּתוֹתֶ֑יהָ כָּל־יְמֵ֤י הָשַּׁמָּה֙ שָׁבָ֔תָה לְמַלֹּ֖אות שִׁבְעִ֥ים שָׁנָֽה׃ פ
22 ೨೨ ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
וּבִשְׁנַ֣ת אַחַ֗ת לְכ֙וֹרֶשׁ֙ מֶ֣לֶךְ פָּרַ֔ס לִכְל֥וֹת דְּבַר־יְהוָ֖ה בְּפִ֣י יִרְמְיָ֑הוּ הֵעִ֣יר יְהוָ֗ה אֶת־ר֙וּחַ֙ כּ֣וֹרֶשׁ מֶֽלֶךְ־פָּרַ֔ס וַיַּֽעֲבֶר־קוֹל֙ בְּכָל־מַלְכוּת֔וֹ וְגַם־בְּמִכְתָּ֖ב לֵאמֹֽר׃ ס
23 ೨೩ ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.
כֹּה־אָמַ֞ר כּ֣וֹרֶשׁ ׀ מֶ֣לֶךְ פָּרַ֗ס כָּל־מַמְלְכ֤וֹת הָאָ֙רֶץ֙ נָ֣תַן לִ֗י יְהוָה֙ אֱלֹהֵ֣י הַשָּׁמַ֔יִם וְהֽוּא־פָקַ֤ד עָלַי֙ לִבְנֽוֹת־ל֣וֹ בַ֔יִת בִּירוּשָׁלִַ֖ם אֲשֶׁ֣ר בִּֽיהוּדָ֑ה מִֽי־בָכֶ֣ם מִכָּל־עַמּ֗וֹ יְהוָ֧ה אֱלֹהָ֛יו עִמּ֖וֹ וְיָֽעַל׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 36 >