< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 4 >

1 ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.
וַיַּ֙עַשׂ֙ מִזְבַּ֣ח נְחֹ֔שֶׁת עֶשְׂרִ֤ים אַמָּה֙ אָרְכּ֔וֹ וְעֶשְׂרִ֥ים אַמָּ֖ה רָחְבּ֑וֹ וְעֶ֥שֶׂר אַמּ֖וֹת קוֹמָתֽוֹ׃ ס
2 ಸೊಲೊಮೋನನು ಒಂದು ಕಂಚಿನ ಕಡಲು ಎಂಬ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರವು ಐದು ಮೊಳವಾಗಿಯೂ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.
וַיַּ֥עַשׂ אֶת־הַיָּ֖ם מוּצָ֑ק עֶ֣שֶׂר בָּֽ֠אַמָּה מִשְּׂפָת֨וֹ אֶל־שְׂפָת֜וֹ עָג֣וֹל ׀ סָבִ֗יב וְחָמֵ֤שׁ בָּֽאַמָּה֙ קֽוֹמָת֔וֹ וְקָו֙ שְׁלֹשִׁ֣ים בָּֽאַמָּ֔ה יָסֹ֥ב אֹת֖וֹ סָבִֽיב׃
3 ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯಲ್ಪಟ್ಟಿದ್ದವು.
וּדְמ֣וּת בְּקָרִים֩ תַּ֨חַת ל֜וֹ סָבִ֤יב ׀ סָבִיב֙ סוֹבְבִ֣ים אֹת֔וֹ עֶ֚שֶׂר בָּֽאַמָּ֔ה מַקִּיפִ֥ים אֶת־הַיָּ֖ם סָבִ֑יב שְׁנַ֤יִם טוּרִים֙ הַבָּקָ֔ר יְצוּקִ֖ים בְּמֻֽצַקְתּֽוֹ׃
4 ಅದು ಹನ್ನೆರಡು ಎರಕದ ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ, ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಆ ಕಂಚಿನ ಕಡಲು ಪಾತ್ರೆ ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಭಾಗದಲ್ಲಿತ್ತು.
עוֹמֵ֞ד עַל־שְׁנֵ֧ים עָשָׂ֣ר בָּקָ֗ר שְׁלֹשָׁ֣ה פֹנִ֣ים ׀ צָפ֡וֹנָה וּשְׁלוֹשָׁה֩ פֹנִ֨ים ׀ יָ֜מָּה וּשְׁלֹשָׁ֣ה ׀ פֹּנִ֣ים נֶ֗גְבָּה וּשְׁלֹשָׁה֙ פֹּנִ֣ים מִזְרָ֔חָה וְהַיָּ֥ם עֲלֵיהֶ֖ם מִלְמָ֑עְלָה וְכָל־אֲחֹרֵיהֶ֖ם בָּֽיְתָה׃
5 ಕಡಲಿನ ಪಾತ್ರೆಯು ನಾಲ್ಕು ಬೆರಳಿನಷ್ಟು ದಪ್ಪವಾಗಿತ್ತು. ಅದರ ಅಂಚುಪಾತ್ರೆಯ ಅಂಚಿನ ಹಾಗೆಯೂ ಅರಳಿದ ಕಮಲಪುಷ್ಪದ ಹಾಗೆ ಇತ್ತು. ಅದರೊಳಗೆ ಮೂರು ಸಾವಿರ ಕೊಳಗ ನೀರು ಹಿಡಿಯುತ್ತಿತ್ತು.
וְעָבְי֣וֹ טֶ֔פַח וּשְׂפָתוֹ֙ כְּמַעֲשֵׂ֣ה שְׂפַת־כּ֔וֹס פֶּ֖רַח שֽׁוֹשַׁנָּ֑ה מַחֲזִ֣יק בַּתִּ֔ים שְׁלֹ֥שֶׁת אֲלָפִ֖ים יָכִֽיל׃ ס
6 ಇದಲ್ಲದೆ ಅವನು ಹತ್ತು ಬೋಗುಣಿಗಳನ್ನು ಮಾಡಿಸಿ, ಅವುಗಳಲ್ಲಿ ಸರ್ವಾಂಗಹೋಮ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧ ಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ, ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಆದರೆ ಆ ಕಡಲಿನೊಳಗಿನ ನೀರು ಯಾಜಕರ ಸ್ನಾನಮಾಡಿ ತಮ್ಮನ್ನು ಶುದ್ಧಮಾಡಿಕೊಳ್ಳುವುದಕ್ಕಾಗಿ ಇತ್ತು.
וַיַּ֣עַשׂ כִּיּוֹרִים֮ עֲשָׂרָה֒ וַ֠יִּתֵּן חֲמִשָּׁ֨ה מִיָּמִ֜ין וַחֲמִשָּׁ֤ה מִשְּׂמֹאול֙ לְרָחְצָ֣ה בָהֶ֔ם אֶת־מַעֲשֵׂ֥ה הָעוֹלָ֖ה יָדִ֣יחוּ בָ֑ם וְהַיָּ֕ם לְרָחְצָ֥ה לַכֹּהֲנִ֖ים בּֽוֹ׃ ס
7 ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು, ಎಡಗಡೆಯಲ್ಲಿಯೂ ಇರಿಸಿದನು.
וַ֠יַּעַשׂ אֶת־מְנֹר֧וֹת הַזָּהָ֛ב עֶ֖שֶׂר כְּמִשְׁפָּטָ֑ם וַיִּתֵּן֙ בַּֽהֵיכָ֔ל חָמֵ֥שׁ מִיָּמִ֖ין וְחָמֵ֥שׁ מִשְּׂמֹֽאול׃ ס
8 ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
וַיַּ֣עַשׂ שֻׁלְחָנוֹת֮ עֲשָׂרָה֒ וַיַּנַּח֙ בַּֽהֵיכָ֔ל חֲמִשָּׁ֥ה מִיָּמִ֖ין וַחֲמִשָּׁ֣ה מִשְּׂמֹ֑אול וַיַּ֛עַשׂ מִזְרְקֵ֥י זָהָ֖ב מֵאָֽה׃
9 ಇದಲ್ಲದೆ ಯಾಜಕರ ಪ್ರಾಕಾರವನ್ನೂ, ಮಹಾಪ್ರಾಕಾರವನ್ನೂ, ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಮಾಡಿಸಿದನು; ಅವುಗಳ ಬಾಗಿಲುಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.
וַיַּ֙עַשׂ֙ חֲצַ֣ר הַכֹּהֲנִ֔ים וְהָעֲזָרָ֖ה הַגְּדוֹלָ֑ה וּדְלָת֧וֹת לָעֲזָרָ֛ה וְדַלְתוֹתֵיהֶ֖ם צִפָּ֥ה נְחֹֽשֶׁת׃
10 ೧೦ ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪೂರ್ವಭಾಗದ ಬಲಗಡೆಯಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.
וְאֶת־הַיָּ֗ם נָתַ֞ן מִכֶּ֧תֶף הַיְמָנִ֛ית קֵ֖דְמָה מִמּ֥וּל נֶֽגְבָּה׃
11 ೧೧ ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.
וַיַּ֣עַשׂ חוּרָ֔ם אֶת־הַ֨סִּיר֔וֹת וְאֶת־הַיָּעִ֖ים וְאֶת־הַמִּזְרָק֑וֹת ס וַיְכַ֣ל חוּרָ֗ם לַעֲשׂוֹת֙ אֶת־הַמְּלָאכָ֔ה אֲשֶׁ֥ר עָשָׂ֛ה לַמֶּ֥לֶךְ שְׁלֹמֹ֖ה בְּבֵ֥ית הָאֱלֹהִֽים׃
12 ೧೨ ಎರಡು ಸ್ತಂಭಗಳು ಅವುಗಳ ಮೇಲಿರುವ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು,
עַמּוּדִ֣ים שְׁנַ֔יִם וְהַגֻּלּ֧וֹת וְהַכֹּתָר֛וֹת עַל־רֹ֥אשׁ הָעַמּוּדִ֖ים שְׁתָּ֑יִם וְהַשְּׂבָכ֣וֹת שְׁתַּ֔יִם לְכַסּ֗וֹת אֶת־שְׁתֵּי֙ גֻּלּ֣וֹת הַכֹּֽתָר֔וֹת אֲשֶׁ֖ר עַל־רֹ֥אשׁ הָֽעַמּוּדִֽים׃
13 ೧೩ ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡನ್ನು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,
וְאֶת־הָֽרִמּוֹנִ֛ים אַרְבַּ֥ע מֵא֖וֹת לִשְׁתֵּ֣י הַשְּׂבָכ֑וֹת שְׁנַ֨יִם טוּרִ֤ים רִמּוֹנִים֙ לַשְּׂבָכָ֣ה הָאֶחָ֔ת לְכַסּ֗וֹת אֶת־שְׁתֵּי֙ גֻּלּ֣וֹת הַכֹּֽתָר֔וֹת אֲשֶׁ֖ר עַל־פְּנֵ֥י הָעַמּוּדִֽים׃
14 ೧೪ ಅವುಗಳ ಮೇಲಣ ಬೋಗುಣಿಗಳು, ಕಡಲು ಎನಿಸಿಕೊಳ್ಳುವ ಎರಕದ ಪಾತ್ರೆ,
וְאֶת־הַמְּכֹנ֖וֹת עָשָׂ֑ה וְאֶת־הַכִּיֹּר֥וֹת עָשָׂ֖ה עַל־הַמְּכֹנֽוֹת׃
15 ೧೫ ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,
אֶת־הַיָּ֖ם אֶחָ֑ד וְאֶת־הַבָּקָ֥ר שְׁנֵים־עָשָׂ֖ר תַּחְתָּֽיו׃
16 ೧೬ ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು.
וְאֶת־הַ֠סִּירוֹת וְאֶת־הַיָּעִ֤ים וְאֶת־הַמִּזְלָגוֹת֙ וְאֶת־כָּל־כְּלֵיהֶ֔ם עָשָׂ֞ה חוּרָ֥ם אָבִ֛יו לַמֶּ֥לֶךְ שְׁלֹמֹ֖ה לְבֵ֣ית יְהוָ֑ה נְחֹ֖שֶׁת מָרֽוּק׃
17 ೧೭ ಅರಸನು ಯೊರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯ ಜೇಡಿಮಣ್ಣಿನ ಸ್ಥಳದಲ್ಲಿ ಎರಕ ಹೊಯ್ಯಿಸಿದನು.
בְּכִכַּ֤ר הַיַּרְדֵּן֙ יְצָקָ֣ם הַמֶּ֔לֶךְ בַּעֲבִ֖י הָאֲדָמָ֑ה בֵּ֥ין סֻכּ֖וֹת וּבֵ֥ין צְרֵדָֽתָה׃
18 ೧೮ ಹೀಗೆ ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.
וַיַּ֧עַשׂ שְׁלֹמֹ֛ה כָּל־הַכֵּלִ֥ים הָאֵ֖לֶּה לָרֹ֣ב מְאֹ֑ד כִּ֛י לֹ֥א נֶחְקַ֖ר מִשְׁקַ֥ל הַנְּחֹֽשֶׁת׃ פ
19 ೧೯ ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,
וַיַּ֣עַשׂ שְׁלֹמֹ֔ה אֵ֚ת כָּל־הַכֵּלִ֔ים אֲשֶׁ֖ר בֵּ֣ית הָאֱלֹהִ֑ים וְאֵת֙ מִזְבַּ֣ח הַזָּהָ֔ב וְאֶת־הַשֻּׁלְחָנ֔וֹת וַעֲלֵיהֶ֖ם לֶ֥חֶם הַפָּנִֽים׃
20 ೨೦ ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಟಾಲಂಕಾರವುಳ್ಳ ಬಂಗಾರದ ದೀಪ ಸ್ತಂಭಗಳು,
וְאֶת־הַמְּנֹר֞וֹת וְנֵרֹתֵיהֶ֗ם לְבַעֲרָ֧ם כַּמִּשְׁפָּ֛ט לִפְנֵ֥י הַדְּבִ֖יר זָהָ֥ב סָגֽוּר׃
21 ೨೧ ಅವುಗಳ ದೀಪಗಳು, ಹೂವುಗಳು, ಹಣತೆಗಳು, ಇಕ್ಕಳಗಳು ಇವು ಸ್ವಚ್ಛ ಬಂಗಾರದಿಂದ ಮಾಡಿದವುಗಳಾಗಿದ್ದವು.
וְהַפֶּ֧רַח וְהַנֵּר֛וֹת וְהַמֶּלְקַחַ֖יִם זָהָ֑ב ה֖וּא מִכְל֥וֹת זָהָֽב׃
22 ೨೨ ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.
וְהַֽמְזַמְּר֧וֹת וְהַמִּזְרָק֛וֹת וְהַכַּפּ֥וֹת וְהַמַּחְתּ֖וֹת זָהָ֣ב סָג֑וּר וּפֶ֣תַח הַ֠בַּיִת דַּלְתוֹתָ֨יו הַפְּנִימִיּ֜וֹת לְקֹ֣דֶשׁ הַקֳּדָשִׁ֗ים וְדַלְתֵ֥י הַבַּ֛יִת לַהֵיכָ֖ל זָהָֽב׃

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 4 >