< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 6 >
1 ೧ ತರುವಾಯ ಸೊಲೊಮೋನನು, ಯೆಹೋವನೇ “ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;
Lè sa a, Salomon di konsa: -Seyè, ou di ou pito viv kote ki fè nwa.
2 ೨ ಆದರೆ ನಾನು ನಿನಗೋಸ್ಕರ ಒಂದು ಆಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ” ಎಂದನು.
Koulye a, mwen bati yon tanp pou ou ka rete, yon kay kote ou pral viv pou tout tan.
3 ೩ ಇದಾದ ಮೇಲೆ, ಅರಸನು ಎದ್ದು ನಿಂತು ಇಸ್ರಾಯೇಲಿನ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.
Lèfini, wa a vire, li bay pèp Izrayèl la fas. Tout pèp la te kanpe. Li mande benediksyon Bondye pou pèp la,
4 ೪ ಅವನು ಹೇಳಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ವಾಗ್ದಾನ ಮಾಡಿದಂತೆ ಈಗ ತನ್ನಿಂದ ನೆರವೇರಿಸುವಂತೆ ಮಾಡಿದ್ದಾನೆ.
li di: -Lwanj pou Seyè a, Bondye pèp Izrayèl la! Avèk fòs kouraj li, li kenbe pwomès li te fè David, papa m' lan, lè li te di l' konsa:
5 ೫ ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.
Depi jou mwen te fè pèp mwen an soti kite peyi Lejip, mwen pa janm chwazi yon lavil nan tout peyi pèp Izrayèl la pou yo bati yon tanp ladan l' pou mwen rete, ni mwen pa t' chwazi pesonn pou gouvènen pèp mwen an, pèp Izrayèl la.
6 ೬ ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.
Men koulye a, mwen chwazi lavil Jerizalèm pou se la yo fè sèvis pou mwen, lèfini mwen chwazi David pou li gouvènen pèp mwen an.
7 ೭ ಆದಕಾರಣ ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
David, papa m', te fè lide bati yon tanp pou Seyè a, Bondye pèp Izrayèl la,
8 ೮ ಆಗ ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನೀನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.
Men, Seyè a te di l': Ou byen fèt gen lide bati yon kay pou mwen.
9 ೯ ಆದರೆ ನೀನು ಆಲಯವನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸುವನು’ ಎಂದು ಹೇಳಿದನು.
Men, se pa ou ki va bati l'. Se pwòp pitit gason w'ap fè a ki va bati tanp lan pou mwen.
10 ೧೦ ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದ್ದಾನೆ. ಆತನು ವಾಗ್ದಾನ ಮಾಡಿದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲಿನ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಿದ್ದೇನೆ.
Koulye a, Seyè a kenbe pwomès li. Jan li te di l' la, se mwen menm ki nan plas David, papa m'. Mwen chita sou fotèy wa Izrayèl la. Mwen bati yon tanp pou Seyè a, Bondye pèp Izrayèl la.
11 ೧೧ ಯೆಹೋವನಿಂದ ಇಸ್ರಾಯೇಲರಿಗೆ ದೊರಕಿದ ಒಡಂಬಡಿಕೆಯ ನಿಬಂಧನಾಶಾಸನಗಳಿರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ” ಎಂದು ಹೇಳಿದನು.
Lèfini, mwen fè yon plas ladan l' pou Bwat Kontra Seyè a, kontra li te pase ak moun pèp Izrayèl yo.
12 ೧೨ ಸೊಲೊಮೋನನು ಎಲ್ಲಾ ಇಸ್ರಾಯೇಲರ ಸಮ್ಮುಖದಲ್ಲಿ ಯೆಹೋವನ ಯಜ್ಞವೇದಿಯ ಎದುರು ತನ್ನ ಕೈಗಳನ್ನೆತ್ತಿ ಪ್ರಾರ್ಥನಾ ಭಂಗಿಯಲ್ಲಿ ನಿಂತನು.
Apre sa, Salomon al kanpe devan lotèl Seyè a, devan tout pèp Izrayèl la, li leve de men l' anlè pou l' lapriyè.
13 ೧೩ ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ,
Salomon te fè fè yon platfòm an kwiv. Li fè yo mete l' nan mitan lakou a. Platfòm lan te kare kare, wit pye longè, wit pye lajè ak senk pye wotè. Li moute sou li, li mete ajenou devan tout pèp Izrayèl la. Li leve de men l' anlè,
14 ೧೪ ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿ ದಯೆಯನ್ನೂ, ಕೃಪೆಯನ್ನೂ ತೋರಿಸಬಲ್ಲ ದೇವರು ಒಬ್ಬರೂ ಇಲ್ಲ.
epi li di: -Seyè, ou menm ki Bondye pèp Izrayèl la, pa gen Bondye tankou ou ni nan syèl ni sou latè. Ou kenbe kontra ou te siyen ak pèp ou a. Ou moutre jan ou renmen moun k'ap sèvi ou ak tout kè yo.
15 ೧೫ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿದ್ದೀ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಕೈ ಈಹೊತ್ತು ನೆರವೇರಿಸಿದೆ.
Ou te kenbe pwomès ou te fè David, papa m', sèvitè ou la. Tou sa ou te di w'ap fè, ou fè l' rive vre jòdi a ak fòs ponyèt ou.
16 ೧೬ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವುದಾದರೆ ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂಬುದಾಗಿ ವಾಗ್ದಾನ ಮಾಡಿರುವೆಯಲ್ಲಾ, ಅದನ್ನು ನೆರವೇರಿಸು.’
Se poutèt sa, Seyè, Bondye pèp Izrayèl la, m'ap mande ou pou ou kenbe lòt pwomès ou te fè David, papa m', sèvitè ou la, lè ou te di l' va toujou gen yonn nan pitit li yo pou gouvènen pèp Izrayèl la, depi yo veye jan y'ap mache pou yo mennen bak yo devan ou jan li menm li te fè l' la.
17 ೧೭ ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.
Se konsa, Seyè, Bondye pèp Izrayèl la, fè tout bagay rive jan ou te fè pwomès la bay David, sèvitè ou la.
18 ೧೮ ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?
Men, Bondye, èske ou ka rete tout bon sou latè ak moun? Ata syèl la pa laj ase pou l' kenbe ou! Ale wè pou ti kay mwen bati pou ou la a!
19 ೧೯ ಆದರೂ ನನ್ನ ದೇವರಾದ ಯೆಹೋವನೇ, ನಿನ್ನ ಈ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಈ ಸೇವಕನ ಮೊರೆಯನ್ನು ಲಾಲಿಸು.
Seyè, Bondye m', tanpri, se sèvitè ou mwen ye! Tanpri, tande jan m'ap lapriyè nan pye ou. Koute jan m'ap rele nan zòrèy ou jòdi a. Tande jan m'ap rele, jan m'ap lapriyè nan pye ou.
20 ೨೦ ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು.
Lajounen kou lannwit, voye je ou sou tanp lan, tanp kote ou te di w'ap toujou la a. Koute lapriyè mwen menm, sèvitè ou la, m'ap fè nan pye ou.
21 ೨೧ ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
Wi, koute lapriyè m'ap fè ak lapriyè pèp Izrayèl ou a ap fè nan pye ou isit la. Nan syèl kote ou rete a, koute lapriyè nou, padonnen nou.
22 ೨೨ ನೆರೆಯವನಿಗೆ ವಿರೋಧವಾಗಿ ಪಾಪ ಮಾಡಿ, ಶಾಪಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣ ಮಾಡುವಾಗ, ಅವನು ಈ ಆಲಯಕ್ಕೆ ಬಂದು ನಿನ್ನ ಯಜ್ಞವೇದಿಯ ಮುಂದೆ ನಿಂತು ಪ್ರಮಾಣ ಮಾಡಿದರೆ,
Lè y'a pote plent pou yon moun ki fè frè l' yon bagay mal, si yo mande l' pou l' fè sèman se pa vre, epi li vin fè sèman an devan lotèl ou a, nan tanp sa a,
23 ೨೩ ಆಗ ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಮುಯ್ಯಿತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು.
ou menm, Seyè ki nan syèl la, w'a tande, w'a fè sa ki gen pou fèt la. W'a jije sèvitè ou yo. W'a pini moun ki koupab la, w'a fè chatiman li merite a tonbe sou tèt li. W'a fè rekonèt lè yon moun inonsan pou yo ka rann li jistis.
24 ೨೪ “ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ಹಿಂದಿರುಗಿ ನಿನ್ನ ಆಲಯಕ್ಕೆ ಬಂದು ನಿನ್ನ ಹೆಸರನ್ನು ಸ್ತುತಿಸಿ, ನಿನ್ನ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನು ಮಾಡಿದರೆ,
Lè lènmi va bat pèp Izrayèl la paske pèp la te peche kont ou, si yo tounen vin jwenn ou, si yo fè lwanj pou ou, si yo vin lapriyè nan pye ou isit la nan kay sa a,
25 ೨೫ ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪೂರ್ವಿಕರಿಗೂ ನೀನು ಕೊಟ್ಟಿರುವ ಸ್ವದೇಶಕ್ಕೆ ಅವರನ್ನು ತಿರುಗಿ ಬರಮಾಡು.
tanpri, kote ou ye nan syèl la, koute yo. Padonnen peche pèp Izrayèl ou a, fè yo tounen nan peyi ou te ba yo ansanm ak zansèt yo a.
26 ೨೬ “ಅವರ ಪಾಪಗಳ ನಿಮಿತ್ತವಾಗಿ, ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ತಿಳಿದುಕೊಂಡು ನಿನ್ನ ಹೆಸರನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ,
Lè va gen chechrès nan peyi a san yon ti degout lapli, paske pèp la te peche kont ou, si yo règrèt sa yo te fè a paske ou te pini yo, si yo vin lapriyè isit la, si yo fè lwanj ou,
27 ೨೭ ಪರಲೋಕದಿಂದ ನೀನು ಲಾಲಿಸಿ ನಿನ್ನ ಸೇವಕರು ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗಳಿಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.
tanpri, kote ou ye nan syèl la, koute yo. Padonnen peche sèvitè ou yo ak peche moun pèp Izrayèl ou yo. Moutre yo bon chemen pou yo pran an. Apre sa, Seyè, w'a voye lapli sou peyi ou te bay pèp ou a pou l' rele l' pa l' la.
28 ೨೮ “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಬಿಸಿಗಾಳಿ, ಮಿಡತೆ, ಚಿಟ್ಟೇಹುಳು, ಹಸಿರುಹುಳು ಇಲ್ಲವೆ ಶತ್ರುಗಳು ಪಟ್ಟಣಕ್ಕೆ ಮುತ್ತಿಗೆ ಹಾಕುವುದು, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆಯುಂಟಾದರೆ,
Lè va gen grangou nan peyi a, osinon lè move maladi lapès va tonbe sou li, lè plant yo va cheche nan van cho, lè krikèt ak chwal bondye va ravaje jaden yo, lè lènmi va sènen lavil nou yo pou atake pèp la, lè nenpòt maladi osinon nenpòt malè va tonbe sou pèp la,
29 ೨೯ ಎಲ್ಲಾ ಇಸ್ರಾಯೇಲ್ಯರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡಿದರೆ,
koute lapriyè y'ap fè nan pye ou. Lè nenpòt moun osinon tout pèp la va lapriyè nan pye ou, lè y'a règrèt sa yo fè a, lè y'a leve men yo nan direksyon tanp lan pou yo lapriyè ou,
30 ೩೦ ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.
tanpri, kote ou ye nan syèl kote ou rete a, koute lapriyè yo, padonnen yo. Bay chak moun sa yo merite, paske ou konnen sa ki nan kè yo. Se ou menm ki konnen sa ki nan fon kè moun.
31 ೩೧ ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು.
Wi, w'a bay chak moun sa yo merite, konsa pèp ou a va gen krentif pou ou, y'a mache nan chemen ou mete devan yo, pandan tout tan y'ap viv sou tè ou te bay zansèt nou yo.
32 ೩೨ “ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದೆ ಸೇರದಂಥ ಒಬ್ಬ ಅನ್ಯನೂ, ಪರದೇಶಿಯು ನಿನ್ನ ಮಹತ್ತಾದ ನಾಮ, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವನ್ನು ಕೇಳಿ ದೂರದೇಶದಿಂದ ಬಂದು, ಈ ಆಲಯದ ಮುಂದೆ ನಿಂತು, ನಿನ್ನನ್ನು ಪ್ರಾರ್ಥಿಸಿದರೆ ನಿನ್ನ ನಿವಾಸವಾಗಿರುವ,
Menm lè yon moun lòt nasyon ki pa fè pati pèp ou a soti byen lwen vini poutèt ou, paske li tande jan n'ap nonmen non ou, li tande pale tout bèl bagay w'ap fè avèk fòs kouraj ou, si li vin lapriyè nan tanp sa a,
33 ೩೩ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮದ ಮಹತ್ವವನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಹೆಸರಿನಲ್ಲಿ ಈ ಆಲಯವು ಕಟ್ಟಲ್ಪಟಿದ್ದೆಯೆಂದು ತಿಳಿದುಕೊಳ್ಳುವರು.
tanpri, nan syèl kote ou rete a, koute lapriyè li. W'a fè pou li tou sa li mande ou. Konsa, tout pèp sou latè va konnen ou. Y'a gen krentif pou ou tankou pèp Izrayèl ou a gen krentif pou ou. Y'a konnen tanp mwen bati pou ou a, se la pou yo vin adore ou.
34 ೩೪ “ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧ ಮಾಡುವುದಕ್ಕಾಗಿ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸಿದರೆ,
Lè pèp ou a va soti al goumen kont lènmi l' yo, nenpòt ki bò w'a voye yo, lè y'a vire tèt yo nan direksyon lavil ou chwazi a ak nan direksyon Tanp mwen bati pou ou a pou yo lapriyè nan pye ou,
35 ೩೫ ನೀನು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ, ಕೇಳಿ ಅವರಿಗೆ ಸಹಾಯವನ್ನು ಮಾಡು.
tanpri, nan syèl kote ou rete a, koute lapriyè yo. Koute lapriyè y'ap fè nan pye ou, defann kòz yo.
36 ೩೬ “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು, ಪಾಪ ಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ, ಇರುವ ದೇಶಕ್ಕೆ ಒಯ್ದಾಗ,
Lè pèp ou a va peche kont ou, paske pa gen moun ki pa fè peche, lè w'a move sou yo, lè w'a lage yo nan men lènmi yo ki va fè yo prizonye, ki va depòte yo nan lòt peyi, li te mèt toupre, li te mèt byen lwen,
37 ೩೭ ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ವಿಜ್ಞಾಪನೆ ಮಾಡಿ,
antan yo la nan peyi kote lènmi yo te depòte yo a, si yo règrèt sa yo te fè, si yo lapriyè nan pye ou, si yo rekonèt yo te fè sa ki mal, si yo rekonèt yo te peche, si yo rekonèt yo antò,
38 ೩೮ ನಿನ್ನ ಕಡೆಗೆ ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ತಿರುಗಿ, ನೀನು ಅವರ ಪೂರ್ವಿಕರಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿರುವ ಈ ಆಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥನೆಯನ್ನು ಮಾಡಿದರೆ,
si yo tounen vin jwenn ou ak tout kè yo ak tout nanm yo, antan yo nan peyi kote lènmi te depòte yo a, si yo vire tèt yo nan direksyon peyi ou te bay zansèt yo a, nan direksyon lavil ou te chwazi a, nan direksyon Tanp mwen bati pou ou a, pou yo lapriyè ou,
39 ೩೯ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು, ವಿಜ್ಞಾಪನೆಯನ್ನು ಆಲಿಸಿ, ಅವರಿಗೆ ನ್ಯಾಯವನ್ನು ಪಾಲಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗಳಿಗೆ ಕ್ಷಮೆಯನ್ನು ಅನುಗ್ರಹಿಸು.
tanpri, koute lapriyè y'ap fè nan pye ou, kote ou ye nan syèl kote ou rete a. Koute lapriyè yo, defann kòz yo. Padonnen pèp ou a tout peche yo te fè kont ou yo.
40 ೪೦ ನನ್ನ ದೇವರೇ, ಕಟಾಕ್ಷವಿಟ್ಟು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡು.
Koulye a, Bondye mwen, louvri je ou, koute lapriyè n'ap fè nan pye ou isit la.
41 ೪೧ ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.
Koulye a, leve non, Seyè, Bondye! Vin kote pou ou pran repo a! Vini non ansanm ak Bwat Kontra ou la ki fè wè jan ou gen pouvwa. Se pou prèt yo fè konnen jan ou bay pèp ou a delivrans! Se pou tout pèp ou a rele tèlman yo kontan!
42 ೪೨ ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.” ಎಂದು ವಿಜ್ಞಾಪನೆ ಮಾಡಿಕೊಂಡನು.
Poutèt pwomès ou te fè David, sèvitè ou la, tanpri, Seyè, pa vire do bay moun ou te chwazi a!