< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >

1 ಸೊಲೊಮೋನನು ಪ್ರಾರ್ಥಿಸುವುದನ್ನು ಮುಗಿಸಿದ ಕೂಡಲೆ, ಆಕಾಶದಿಂದ ಬೆಂಕಿಯು ಬಿದ್ದು ಸರ್ವಾಂಗಹೋಮಗಳನ್ನೂ, ಯಜ್ಞಮಾಂಸವನ್ನೂ ದಹಿಸಿ ಬಿಟ್ಟಿತು, ಯೆಹೋವನ ತೇಜಸ್ಸು ಆಲಯದ ತುಂಬಾ ತುಂಬಿಕೊಂಡಿತು.
וּכְכַלּ֤וֹת שְׁלֹמֹה֙ לְהִתְפַּלֵּ֔ל וְהָאֵ֗שׁ יָֽרְדָה֙ מֵֽהַשָּׁמַ֔יִם וַתֹּ֥אכַל הָעֹלָ֖ה וְהַזְּבָחִ֑ים וּכְב֥וֹד יְהוָ֖ה מָלֵ֥א אֶת־הַבָּֽיִת׃
2 ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.
וְלֹ֤א יָֽכְלוּ֙ הַכֹּ֣הֲנִ֔ים לָב֖וֹא אֶל־בֵּ֣ית יְהוָ֑ה כִּֽי־מָלֵ֥א כְבוֹד־יְהוָ֖ה אֶת־בֵּ֥ית יְהוָֽה׃
3 ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
וְכֹ֣ל ׀ בְּנֵ֣י יִשְׂרָאֵ֗ל רֹאִים֙ בְּרֶ֣דֶת הָאֵ֔שׁ וּכְב֥וֹד יְהוָ֖ה עַל־הַבָּ֑יִת וַיִּכְרְעוּ֩ אַפַּ֨יִם אַ֤רְצָה עַל־הָרִֽצְפָה֙ וַיִּֽשְׁתַּֽחֲו֔וּ וְהוֹד֤וֹת לַיהוָה֙ כִּ֣י ט֔וֹב כִּ֥י לְעוֹלָ֖ם חַסְדּֽוֹ׃
4 ಅರಸನೂ ಮತ್ತು ಎಲ್ಲಾ ಜನರೂ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನು ಅರ್ಪಿಸಿದರು.
וְהַמֶּ֖לֶךְ וְכָל־הָעָ֑ם זֹבְחִ֥ים זֶ֖בַח לִפְנֵ֥י יְהוָֽה׃ ס
5 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.
וַיִּזְבַּ֞ח הַמֶּ֣לֶךְ שְׁלֹמֹה֮ אֶת־זֶ֣בַח הַבָּקָ֗ר עֶשְׂרִ֤ים וּשְׁנַ֙יִם֙ אֶ֔לֶף וְצֹ֕אן מֵאָ֥ה וְעֶשְׂרִ֖ים אָ֑לֶף וַֽיַּחְנְכוּ֙ אֶת־בֵּ֣ית הָֽאֱלֹהִ֔ים הַמֶּ֖לֶךְ וְכָל־הָעָֽם׃
6 ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.
וְהַכֹּהֲנִ֞ים עַל־מִשְׁמְרוֹתָ֣ם עֹמְדִ֗ים וְהַלְוִיִּ֞ם בִּכְלֵי־שִׁ֤יר יְהוָה֙ אֲשֶׁ֨ר עָשָׂ֜ה דָּוִ֣יד הַמֶּ֗לֶךְ לְהֹד֤וֹת לַיהוָה֙ כִּֽי־לְעוֹלָ֣ם חַסְדּ֔וֹ בְּהַלֵּ֥ל דָּוִ֖יד בְּיָדָ֑ם וְהַכֹּהֲנִים֙ מַחְצְרִ֣ים נֶגְדָּ֔ם וְכָל־יִשְׂרָאֵ֖ל עֹמְדִֽים׃ ס
7 ಸೊಲೊಮೋನನು ಯೆಹೋವನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠೆ ಮಾಡಿದನು. ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನೂ, ಸಮಾಧಾನ ಯಜ್ಞದ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ಸರ್ವಾಂಗಹೋಮವನ್ನೂ, ಧಾನ್ಯನೈವೇದ್ಯಗಳನ್ನೂ, ಸಮಾಧಾನ ಯಜ್ಞದ ಕೊಬ್ಬಿನ ಕಾಣಿಕೆಯನ್ನು ಸಮರ್ಪಿಸಿದನು.
וַיְקַדֵּ֣שׁ שְׁלֹמֹ֗ה אֶת־תּ֤וֹךְ הֶֽחָצֵר֙ אֲשֶׁר֙ לִפְנֵ֣י בֵית־יְהוָ֔ה כִּֽי־עָ֤שָׂה שָׁם֙ הָֽעֹל֔וֹת וְאֵ֖ת חֶלְבֵ֣י הַשְּׁלָמִ֑ים כִּֽי־מִזְבַּ֤ח הַנְּחֹ֙שֶׁת֙ אֲשֶׁ֣ר עָשָׂ֣ה שְׁלֹמֹ֔ה לֹ֣א יָכ֗וֹל לְהָכִ֛יל אֶת־הָעֹלָ֥ה וְאֶת־הַמִּנְחָ֖ה וְאֶת־הַחֲלָבִֽים׃
8 ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ, ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಅಲ್ಲಿ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆ ಆಚರಿಸಿದರು.
וַיַּ֣עַשׂ שְׁלֹמֹ֣ה אֶת־הֶ֠חָג בָּעֵ֨ת הַהִ֜יא שִׁבְעַ֤ת יָמִים֙ וְכָל־יִשְׂרָאֵ֣ל עִמּ֔וֹ קָהָ֖ל גָּד֣וֹל מְאֹ֑ד מִלְּב֥וֹא חֲמָ֖ת עַד־נַ֥חַל מִצְרָֽיִם׃
9 ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.
וַֽיַּעֲשׂ֛וּ בַּיּ֥וֹם הַשְּׁמִינִ֖י עֲצָ֑רֶת כִּ֣י ׀ חֲנֻכַּ֣ת הַמִּזְבֵּ֗חַ עָשׂוּ֙ שִׁבְעַ֣ת יָמִ֔ים וְהֶחָ֖ג שִׁבְעַ֥ת יָמִֽים׃
10 ೧೦ ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.
וּבְי֨וֹם עֶשְׂרִ֤ים וּשְׁלֹשָׁה֙ לַחֹ֣דֶשׁ הַשְּׁבִיעִ֔י שִׁלַּ֥ח אֶת־הָעָ֖ם לְאָהֳלֵיהֶ֑ם שְׂמֵחִים֙ וְט֣וֹבֵי לֵ֔ב עַל־הַטּוֹבָ֗ה אֲשֶׁ֨ר עָשָׂ֤ה יְהוָה֙ לְדָוִ֣יד וְלִשְׁלֹמֹ֔ה וּלְיִשְׂרָאֵ֖ל עַמּֽוֹ׃
11 ೧೧ ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು.
וַיְכַ֧ל שְׁלֹמֹ֛ה אֶת־בֵּ֥ית יְהוָ֖ה וְאֶת־בֵּ֣ית הַמֶּ֑לֶךְ וְאֵ֨ת כָּל־הַבָּ֜א עַל־לֵ֣ב שְׁלֹמֹ֗ה לַעֲשׂ֧וֹת בְּבֵית־יְהוָ֛ה וּבְבֵית֖וֹ הִצְלִֽיחַ׃ פ
12 ೧೨ ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.
וַיֵּרָ֧א יְהוָ֛ה אֶל־שְׁלֹמֹ֖ה בַּלָּ֑יְלָה וַיֹּ֣אמֶר ל֗וֹ שָׁמַ֙עְתִּי֙ אֶת־תְּפִלָּתֶ֔ךָ וּבָחַ֜רְתִּי בַּמָּק֥וֹם הַזֶּ֛ה לִ֖י לְבֵ֥ית זָֽבַח׃
13 ೧೩ ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,
הֵ֣ן אֶֽעֱצֹ֤ר הַשָּׁמַ֙יִם֙ וְלֹֽא־יִהְיֶ֣ה מָטָ֔ר וְהֵן־אֲצַוֶּ֥ה עַל־חָגָ֖ב לֶאֱכ֣וֹל הָאָ֑רֶץ וְאִם־אֲשַׁלַּ֥ח דֶּ֖בֶר בְּעַמִּֽי׃
14 ೧೪ ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
וְיִכָּנְע֨וּ עַמִּ֜י אֲשֶׁ֧ר נִֽקְרָא־שְׁמִ֣י עֲלֵיהֶ֗ם וְיִֽתְפַּֽלְלוּ֙ וִֽיבַקְשׁ֣וּ פָנַ֔י וְיָשֻׁ֖בוּ מִדַּרְכֵיהֶ֣ם הָרָעִ֑ים וַאֲנִי֙ אֶשְׁמַ֣ע מִן־הַשָּׁמַ֔יִם וְאֶסְלַח֙ לְחַטָּאתָ֔ם וְאֶרְפָּ֖א אֶת־אַרְצָֽם׃
15 ೧೫ ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗಳಿಗೆ ಕಿವಿಗೊಡುವೆನು.
עַתָּ֗ה עֵינַי֙ יִהְי֣וּ פְתֻח֔וֹת וְאָזְנַ֖י קַשֻּׁב֑וֹת לִתְפִלַּ֖ת הַמָּק֥וֹם הַזֶּֽה׃
16 ೧೬ ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.
וְעַתָּ֗ה בָּחַ֤רְתִּי וְהִקְדַּ֙שְׁתִּי֙ אֶת־הַבַּ֣יִת הַזֶּ֔ה לִהְיוֹת־שְׁמִ֥י שָׁ֖ם עַד־עוֹלָ֑ם וְהָי֨וּ עֵינַ֧י וְלִבִּ֛י שָׁ֖ם כָּל־הַיָּמִֽים׃
17 ೧೭ ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,
וְאַתָּ֞ה אִם־תֵּלֵ֣ךְ לְפָנַ֗י כַּאֲשֶׁ֤ר הָלַךְ֙ דָּוִ֣יד אָבִ֔יךָ וְלַעֲשׂ֕וֹת כְּכֹ֖ל אֲשֶׁ֣ר צִוִּיתִ֑יךָ וְחֻקַּ֥י וּמִשְׁפָּטַ֖י תִּשְׁמֽוֹר׃
18 ೧೮ ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
וַהֲקִ֣ימוֹתִ֔י אֵ֖ת כִּסֵּ֣א מַלְכוּתֶ֑ךָ כַּאֲשֶׁ֣ר כָּרַ֗תִּי לְדָוִ֤יד אָבִ֙יךָ֙ לֵאמֹ֔ר לֹֽא־יִכָּרֵ֤ת לְךָ֙ אִ֔ישׁ מוֹשֵׁ֖ל בְּיִשְׂרָאֵֽל׃
19 ೧೯ ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,
וְאִם־תְּשׁוּב֣וּן אַתֶּ֔ם וַעֲזַבְתֶּם֙ חֻקּוֹתַ֣י וּמִצְוֹתַ֔י אֲשֶׁ֥ר נָתַ֖תִּי לִפְנֵיכֶ֑ם וַהֲלַכְתֶּ֗ם וַעֲבַדְתֶּם֙ אֱלֹהִ֣ים אֲחֵרִ֔ים וְהִשְׁתַּחֲוִיתֶ֖ם לָהֶֽם׃
20 ೨೦ ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.
וּנְתַשְׁתִּ֗ים מֵעַ֤ל אַדְמָתִי֙ אֲשֶׁ֣ר נָתַ֣תִּי לָהֶ֔ם וְאֶת־הַבַּ֤יִת הַזֶּה֙ אֲשֶׁ֣ר הִקְדַּ֣שְׁתִּי לִשְׁמִ֔י אַשְׁלִ֖יךְ מֵעַ֣ל פָּנָ֑י וְאֶתְּנֶ֛נּוּ לְמָשָׁ֥ל וְלִשְׁנִינָ֖ה בְּכָל־הָעַמִּֽים׃
21 ೨೧ ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.
וְהַבַּ֤יִת הַזֶּה֙ אֲשֶׁ֣ר הָיָ֣ה עֶלְי֔וֹן לְכָל־עֹבֵ֥ר עָלָ֖יו יִשֹּׁ֑ם וְאָמַ֗ר בַּמֶּ֨ה עָשָׂ֤ה יְהוָה֙ כָּ֔כָה לָאָ֥רֶץ הַזֹּ֖את וְלַבַּ֥יִת הַזֶּֽה׃
22 ೨೨ ಆಗ ಅವರಿಗೆ, ‘ಈ ದೇಶದವರು ತಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿ, ಅನ್ಯ ದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಆತನು ಈ ಎಲ್ಲಾ ಆಪತ್ತನ್ನು ಅವರಿಗೆ ಬರಮಾಡಿದ್ದಾನೆ.’” ಎಂದು ಉತ್ತರ ಕೊಡುವರು ಎಂದನು.
וְאָמְר֗וּ עַל֩ אֲשֶׁ֨ר עָֽזְב֜וּ אֶת־יְהוָ֣ה ׀ אֱלֹהֵ֣י אֲבֹתֵיהֶ֗ם אֲשֶׁ֣ר הוֹצִיאָם֮ מֵאֶ֣רֶץ מִצְרַיִם֒ וַֽיַּחֲזִ֙יקוּ֙ בֵּאלֹהִ֣ים אֲחֵרִ֔ים וַיִּשְׁתַּחֲו֥וּ לָהֶ֖ם וַיַּֽעַבְד֑וּם עַל־כֵּן֙ הֵבִ֣יא עֲלֵיהֶ֔ם אֵ֥ת כָּל־הָרָעָ֖ה הַזֹּֽאת׃ פ

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >