< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 8 >
1 ೧ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.
När de tjugu år voro förlidna, under vilka Salomo byggde på HERRENS hus och på sitt eget hus,
2 ೨ ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು.
byggde Salomo upp de städer som Huram hade givit honom och lät Israels barn bosätta sig i dem.
3 ೩ ಅನಂತರ ಸೊಲೊಮೋನನು ಚೋಬ ರಾಜ್ಯದ ಹಮಾತಿಗೆ ಬಂದು ಅದನ್ನು ಸ್ವಾಧೀನಮಾಡಿಕೊಂಡನು.
Och Salomo drog till Hamat-Soba och bemäktigade sig det.
4 ೪ ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.
Och han byggde upp Tadmor i öknen och alla de förrådsstäder som i Hamat äro byggda av honom.
5 ೫ ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು.
Vidare byggde han upp Övre Bet-Horon och Nedre Bet-Horon och gjorde dem till fasta städer med murar, portar och bommar,
6 ೬ ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.
så ock Baalat och alla Salomos förrådsstäder, ävensom alla vagnsstäderna och häststäderna, och allt annat som Salomo kände åstundan att bygga i Jerusalem, på Libanon och eljest i hela det land som lydde under hans välde.
7 ೭ ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,
Allt det folk som fanns kvar av hetiterna, amoréerna, perisséerna, hivéerna och jebuséerna, korteligen, alla de som icke voro av Israel --
8 ೮ ಮೊದಲಾದ ಅನ್ಯ ಜನಾಂಗಗಳನ್ನು, ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟಿ ಕೆಲಸ ಮಾಡುವವರಾಗಿದ್ದಾರೆ.
deras avkomlingar, så många som funnos kvar i landet efter dem, i det att Israels barn icke hade utrotat dem, dessa pålade Salomo att vara arbetspliktiga, såsom de äro ännu i dag.
9 ೯ ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.
Men somliga av Israels barn gjorde Salomo icke till trälar vid de arbeten han utförde, utan de blevo krigare och hövitsmän för hans kämpar, eller uppsyningsmän över hans vagnar och ridhästar.
10 ೧೦ ಈ ಇನ್ನೂರೈವತ್ತು ಮಂದಿ ಅರಸನಾದ ಸೊಲೊಮೋನನ ಮುಖ್ಯಾಧಿಕಾರಿಗಳೂ, ಪ್ರಜೆಗಳ ಮೇಲ್ವಿಚಾರಕರೂ ಆಗಿದ್ದರು.
Och konung Salomos överfogdar voro två hundra femtio; dessa hade befälet över folket.
11 ೧೧ ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.
Och Salomo lät Faraos dotter flytta upp från Davids stad till det hus som han hade byggt åt henne; ty han sade: »Jag vill icke att någon kvinna skall bo i Davids, Israels konungs, hus, ty det är en helig plats, eftersom HERRENS ark har kommit dit.»
12 ೧೨ ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ,
Nu offrade Salomo brännoffer åt HERREN på HERRENS, altare, det som han hade byggt framför förhuset;
13 ೧೩ ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.
han offrade var dag de för den dagen bestämda offren, efter Moses bud, på sabbaterna, vid nymånaderna och vid högtiderna tre gånger om året, nämligen vid det osyrade brödets högtid, vid veckohögtiden och vid lövhyddohögtiden.
14 ೧೪ ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.
Och efter sin fader Davids anordning fastställde han de avdelningar i vilka prästerna skulle tjänstgöra, ävensom leviternas åligganden, att de skulle utföra lovsången och betjäna prästerna -- var dag de för den dagen bestämda åliggandena -- så ock huru dörrvaktarna, efter sina avdelningar, skulle hålla vakt vid de särskilda portarna; ty så hade gudsmannen David bjudit.
15 ೧೫ ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.
Och man vek icke av ifrån vad konungen hade bjudit angående prästerna och leviterna, varken i fråga om någon annan angelägenhet eller i fråga om förråden.
16 ೧೬ ಈ ಪ್ರಕಾರ ಆಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಆಲಯವು ಪೂರ್ಣಗೊಂಡಿತ್ತು.
Så utfördes allt Salomos arbete, först intill den dag då grunden lades till HERRENS hus, och sedan intill dess det blev fullbordat. Och så var då HERRENS hus färdigt.
17 ೧೭ ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.
Vid denna tid drog Salomo till Esjon-Geber och till Elot, på havsstranden, i Edoms land.
18 ೧೮ ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.
Och Huram sände till honom skepp genom sitt folk, och därjämte av sitt folk sjökunnigt manskap. De foro med Salomos folk till Ofir och hämtade därifrån fyra hundra femtio talenter guld, som de förde till konung Salomo.