< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 8 >

1 ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.
और बीस साल के आख़िर में जिन सुलेमान ने ख़ुदावन्द का घर और अपना घर बनाया था यूँ हुआ कि।
2 ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು.
सुलेमान ने उन शहर को जो हुराम ने सुलेमान को दिए थे फिर ता'मीर किया और बनी इस्राईल को वहाँ बसाया।
3 ಅನಂತರ ಸೊಲೊಮೋನನು ಚೋಬ ರಾಜ್ಯದ ಹಮಾತಿಗೆ ಬಂದು ಅದನ್ನು ಸ್ವಾಧೀನಮಾಡಿಕೊಂಡನು.
और सुलेमान हमात ज़ूबाह को जाकर उस पर ग़ालिब हुआ।
4 ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.
और उसने वीरान में तदमूर को बनाया और ख़ज़ाना के सब शहरों को भी जो उस ने हमात में बनाए थे।
5 ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು.
और उसने ऊपर के बैत हौरून और नीचे के बैत हौरुन को बनाया जो दीवारों और फाटकों और अड़बंगों से मज़बूत किए हुए शहर थे।
6 ಬಾಲಾತೊರು ಮತ್ತು ಎಲ್ಲಾ ಉಗ್ರಾಣದ ಪಟ್ಟಣ, ಯುದ್ಧರಥಗಳನ್ನಿರಿಸುವ ಪಟ್ಟಣಗಳನ್ನೂ, ರಾಹುತರ ಪಟ್ಟಣಗಳನ್ನೂ ಸೊಲೊಮೋನನು ಕಟ್ಟಿಸಿದನು. ಅಲ್ಲದೆ ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.
और बा'लत और ख़ज़ाना के सब शहर जो सुलेमान के थे और रथों के सब शहर और सवारों के शहर जो कुछ सुलेमान चाहता था कि येरूशलेम और लुबनान और अपनी ममलुकत की सारी सर ज़मी बनाए वह सब बनाया।
7 ಇದಲ್ಲದೆ ಇಸ್ರಾಯೇಲರಿಂದ ಸಂಹೃತರಾಗದೆ, ಕಾನಾನ್ ದೇಶದಲ್ಲಿ ಉಳಿದಿದ್ದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ, ಯೆಬೂಸಿಯ,
और वह सब लोग जो हित्तियों और अमोरियों और फ़रिज़्ज़ीयों और हव्वियों और यबूसियों में से बाक़ी रह गए थे और इस्राईली न थे।
8 ಮೊದಲಾದ ಅನ್ಯ ಜನಾಂಗಗಳನ್ನು, ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟಿ ಕೆಲಸ ಮಾಡುವವರಾಗಿದ್ದಾರೆ.
उन ही की औलाद जो उनके बाद मुल्क में बाक़ी रह गई थी जिसे बनी इस्राईल ने नाबूद नहीं किया, उसी में से सुलेमान ने बेगारी मुक़र्रर किए जैसा आज के दिन है।
9 ಆದರೆ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ಇಸ್ರಾಯೇಲರನ್ನು ನೇಮಕ ಮಾಡಿಕೊಳ್ಳಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.
लेकिन सुलेमान ने अपने काम के लिए बनी इस्राईल में से किसी को ग़ुलाम न बनाया बल्कि वह जंगी मर्द और उसके लस्करों के सदार और उसके रथों और सवारों पर हुक्मरान थें।
10 ೧೦ ಈ ಇನ್ನೂರೈವತ್ತು ಮಂದಿ ಅರಸನಾದ ಸೊಲೊಮೋನನ ಮುಖ್ಯಾಧಿಕಾರಿಗಳೂ, ಪ್ರಜೆಗಳ ಮೇಲ್ವಿಚಾರಕರೂ ಆಗಿದ್ದರು.
और सुलेमान बादशाह के खास मनसबदार जो लोगों पर हुकूमत करते थे दो सौ पचास थें।
11 ೧೧ ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.
और सुलेमान फ़िर'औन की बेटी को दाऊद के शहर से उस घर में जो उसके लिए बनाया था ले आया क्यूँकि उसने कहाँ, कि मेरी बीवी इस्राईल के बादशाह दाऊद के घर में नहीं रहेंगी क्यूँकि वह मक़ाम मुक़द्दस है जिन में ख़ुदावन्द का सन्दूक़आ गया है।
12 ೧೨ ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ,
तब सुलेमान ख़ुदावन्द के लिए ख़ुदावन्द उस मज़बह पर जिसको उसने उसारें के सामने बनाया था सोख़्तनी क़ुर्बानीयाँ अदा करने लगा।
13 ೧೩ ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.
वह हर दिन के फ़र्ज़ के मुताबिक़ जैसा मूसा ने हुक्म दिया था सब्तों और नए चाँदों और साल में तीन बार मुक़र्रारा 'ईद या'नी फ़तीरी रोटी की 'ईद और हफ़्तों की 'ईद और ख़ेमों की 'ईद पर क़ुर्बानी करता था।
14 ೧೪ ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.
और उस ने बाप दाऊद के हुक्म के मुताबिक़ काहिनों के फ़रीक़ो को हर दिन के फ़र्ज़ के मुताबिक़ उनके काम पर और लावीयों को उनकी ख़िदमत पर मुक़र्रर किया ताकि वह काहिनों के आमने सामने हम्द और ख़िदमत करें और दरबानों को भी उनके फ़रीक़ो के मुताबिक़ हर फाटक पर मुक़र्रर किया क्यूँकि मर्दे ख़ुदा दाऊद ने ऐसा ही हुक्म दिया था।
15 ೧೫ ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.
और वह बादशाह के हुक्म से जो उसने काहिनों और लावियों को किसी बात की निस्बत या ख़ज़ानों के हक़ में दिया था बाहर न हुए।
16 ೧೬ ಈ ಪ್ರಕಾರ ಆಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಆಲಯವು ಪೂರ್ಣಗೊಂಡಿತ್ತು.
और सुलेमान का सारा काम ख़ुदावन्द के घर की बुनियाद डालने के दिन से उसके तैयार होने तक तमाम हुआ और ख़ुदावन्द का घर पूरा बन गया।
17 ೧೭ ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.
तब सुलेमान अस्यून जाबर और ऐलोत को गया जो मुल्क — ए — अदोम में समुन्दर के किनारे है।
18 ೧೮ ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.
और हुराम ने अपने नौकरों के हाथ से जहाज़ों और मलाहों को जो समुन्दर से वाक़िफ़ थे उसके पास भेजा और वह सुलेमान के मुलाज़िमों के साथ ओफ़ीर में आए और वहाँ से साढ़े चार सौ क़िन्तार सोना लेकर बादशाह के पास लाए।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 8 >