< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 9 >
1 ೧ ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.
১আর শিবার রাণী শলোমনের সুনাম শুনে কঠিন বাক্য দিয়ে শলোমনের পরীক্ষা করার জন্য প্রচুর পরিমাণে ঐশ্বর্য্য নিয়ে এবং প্রচুর সুগন্ধি মশলা, সোনা ও মণিবাহক উটদের সঙ্গে নিয়ে যিরূশালেমে আসলেন এবং শলোমনের কাছে এসে তাঁর মনে যা যা ছিল তা সবই তাঁকে বললেন।
2 ೨ ಸೊಲೊಮೋನನು ಆಕೆಯ ಪ್ರಶ್ನೆಗಳಿಗೂ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದ್ದರಿಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು.
২আর শলোমন তাঁর সব প্রশ্নের উত্তর দিলেন; শলোমনের কাছে কোনো কিছুই না বোঝার মত ছিল না, তিনি তাঁকে সবই বললেন।
3 ೩ ಶೆಬಾದ ರಾಣಿಯು, ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ,
৩এই ভাবে শিবার রাণী শলোমনের জ্ঞান ও তাঁর তৈরী গৃহ
4 ೪ ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ, ಅರಸನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗ ಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ
৪এবং তাঁর টেবিলের খাবার ও তাঁর কর্মচারীদের থাকবার জায়গা ও দাঁড়িয়ে থাকা চাকরদের শ্রেণী ও তাদের পোশাক এবং তাঁর পানীয় পরিবেশকদের ও তাদের পোশাক এবং সদাপ্রভুর গৃহে উঠার জন্য তাঁর তৈরী সিঁড়ি, এই সব দেখে অবাক হয়ে গেলেন।
5 ೫ ಅವನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
৫আর তিনি রাজাকে বললেন, “আমি আমার দেশে থেকে আপনার বাক্য ও জ্ঞানের বিষয়ে যে কথা শুনেছিলাম, তা সত্যি।
6 ೬ ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ.
৬কিন্তু আমি যতক্ষণ এসে নিজের চোখে না দেখলাম, ততক্ষণ লোকেদের সেই সব কথায় আমার বিশ্বাস হয়নি; আর দেখুন, আপনার জ্ঞানের অর্ধেকও আমাকে বলা হয়নি; আমি যে সুনাম শুনেছিলাম, তার থেকে আপনার গুণ অনেক বেশী।
7 ೭ ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.
৭ধন্য আপনার লোকেরা এবং ধন্য আপনার এই দাসেরা, যারা সব দিন আপনার সামনে দাঁড়িয়ে থেকে আপনার জ্ঞানের কথা শোনে।
8 ೮ ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.
৮ধন্য আপনার ঈশ্বর সদাপ্রভু, যিনি আপনার ঈশ্বর সদাপ্রভুর জন্য রাজা করে তাঁর সিংহাসনে আপনাকে বসবার জন্য আপনার উপর সন্তুষ্ট হয়েছেন। ইস্রায়েলের লোকদেরকে চিরস্থায়ী করার জন্য আপনার ঈশ্বর তাদেরকে ভালবাসেন, এই জন্য সুবিচার ও ন্যায় রক্ষার জন্য আপনাকে রাজা করেছেন।”
9 ೯ ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧ ದ್ರವ್ಯವನ್ನೂ, ಅಮೂಲ್ಯರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದ ಸುಗಂಧದ್ರವ್ಯ ಮತ್ತೆ ಸಿಗಲೇ ಇಲ್ಲ.
৯পরে তিনি রাজাকে সাড়ে একশো কুড়ি তালন্ত সোনা, অনেক সুগন্ধি মশলা ও মণি উপহার দিলেন। শিবার রাণী রাজা শলোমনকে যে রকম সুগন্ধি মশলা দিলেন, সেই রকম সুগন্ধি মশলা আর হয়নি।
10 ೧೦ ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್ ದೇಶದ ಬಂಗಾರವನ್ನಲ್ಲದೆ ಸುಗಂಧದ ಮರಗಳ ಅಮೂಲ್ಯರತ್ನಗಳನ್ನೂ ತಂದರು.
১০আর হূরমের ও শলোমনের যে দাসরা ওফীর থেকে সোনা নিয়ে আসত, তারা চন্দন কাঠ আর মণিও আনত।
11 ೧೧ ಅರಸನು ಸುಗಂಧದ ಮರದಿಂದ ಯೆಹೋವನ ದೇವಾಲಯವನ್ನು ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ, ಸಂಗೀತಗಾರರಿಗಾಗಿ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಗಂಧದ ಮರವು ಹಿಂದೆಂದೂ ಯೆಹೂದ ದೇಶದಲ್ಲಿ ಕಂಡಿರಲಿಲ್ಲ.
১১সেই সব চন্দন কাঠ দিয়ে সদাপ্রভুর রাজা গৃহের ও রাজবাড়ীর জন্য সিঁড়ি, গায়কদের জন্য বীণা ও নেবল তৈরী করালেন। এর আগে যিহূদা দেশে কেউ কখনও সেই রকম দেখে নি।
12 ೧೨ ಅರಸನಾದ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ, ಆಕೆಗೆ ತಾನು ಕೊಟ್ಟು ವಸ್ತುಗಳನ್ನಲ್ಲದೆ, ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.
১২আর শলোমন রাজা শিবার রাণীর ইচ্ছা অনুসারে চাওয়া সবই তাঁকে দিলেন, রাণী তাঁর জন্য যা এনেছিলেন তার চেয়ে অনেক বেশী উপহার তিনি তাঁকে দিলেন; পরে রাণী ও তাঁর দাসেরা নিজের দেশে ফিরে গেলেন।
13 ೧೩ ಸೊಲೊಮೋನನಿಗೆ ಪ್ರತಿ ವರ್ಷ ಆರು ನೂರಅರವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.
১৩এক বছরের মধ্যে শলোমনের কাছে ছশো ছেষট্টি তালন্ত পরিমাপের সোনা আসত।
14 ೧೪ ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು.
১৪এছাড়া বণিক ও ব্যবসায়ীরা সোনা নিয়ে আসত এবং আরবের সমস্ত রাজারা ও দেশের শাসনকর্তারা শলোমনের কাছে সোনা ও রূপা নিয়ে আসতেন।
15 ೧೫ ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರವು ಹಿಡಿಸುತ್ತಿತ್ತು.
১৫তাতে শলোমন রাজা পেটানো সোনা দিয়ে দুইশো বড় ঢাল তৈরী করলেন। প্রত্যেকটি ঢালে ছশো শেকল পরিমাপের পেটানো সোনা ছিল।
16 ೧೬ ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಮುನ್ನೂರು ತೊಲಾ ಬಂಗಾರ ಬೇಕಾಗುತ್ತಿತ್ತು. ಅರಸನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿರಿಸಿದನು.
১৬আর তিনি পেটানো সোনা দিয়ে তিনশো ছোট ঢাল তৈরী করলেন; তার প্রত্যেক ঢালে তিনশো শেকল পরিমাপের সোনা ছিল। পরে রাজা লিবানোন অরণ্যের বাড়িতে সেগুলি রাখলেন।
17 ೧೭ ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.
১৭আর রাজা হাতির দাঁতের একটা বড় সিংহাসন তৈরী করিয়ে খাঁটি সোনা দিয়ে মুড়লেন।
18 ೧೮ ಅದಕ್ಕೆ ಹೊಂದಿಕೆಯಾದ ಆರು ಮೆಟ್ಟಲುಗಳೂ, ಬಂಗಾರದ ಸಿಂಹಾಸನವೂ, ಒಂದು ಪಾದಪೀಠವು ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.
১৮ঐ সিংহাসনের সিঁড়ির ছয়টা ধাপ, আর একটি সোনার পা রাখবার আসন সিংহাসনের সঙ্গে লাগানো ছিল এবং আসনের দুদিকে হাতল ছিল এবং সেই হাতলের পাশে দুটি সিংহমূর্তি দাঁড়ানো ছিল,
19 ೧೯ ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
১৯আর সেই ছয়টা ধাপের উপরে দুপাশে বারোটি সিংহমূর্তি দাঁড়িয়ে ছিল; এই রকম সিংহাসন অন্য কোনো রাজ্যে তৈরী হয়নি।
20 ೨೦ ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳಾಗಿದ್ದವು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
২০শলোমন রাজার সমস্ত পানীয়ের পাত্রগুলো সোনার ছিল ও লিবানোন অরণ্যের বাড়ির সমস্ত পাত্র ছিল খাঁটি সোনার তৈরী; শলোমনের দনের রূপা কোনো কিছুর মধ্যে গণনা করা হত না।
21 ೨೧ ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು.
২১কারণ হূরমের দাসেদের সঙ্গে রাজার কতগুটি জাহাজ তর্শীশে যেত; সেই তর্শীশের জাহাজগুলি তিন বছরে একবার সোনা, রূপা, হাতির দাঁত, বানর ও ময়ূর নিয়ে আসত।
22 ೨೨ ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.
২২এই ভাবে ঐশ্বর্য্য ও জ্ঞানে শলোমন রাজা পৃথিবীর সব রাজার মধ্যে প্রধান হলেন।
23 ೨೩ ಭೂರಾಜರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು.
২৩আর ঈশ্বর শলোমনের হৃদয়ে যে জ্ঞান দিয়েছিলেন, তাঁর সেই জ্ঞানের কথাবার্তা শুনবার জন্য পৃথিবীর সব রাজা তাঁর সঙ্গে দেখা করতে চেষ্টা করতেন।
24 ೨೪ ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣಿಗಳು, ಶಸ್ತಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
২৪আর সবাই উপহার, সোনা-রূপার পাত্র, পোশাক, অস্ত্র ও সুগন্ধি মশলা, ঘোড়া আর খচ্চর আনতেন; প্রতি বছর এই রকম হত।
25 ೨೫ ಸೊಲೊಮೋನನು ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.
২৫আর ঘোড়া ও রথের জন্য শলোমনের চার হাজার ঘর ছিল ও বারো হাজার ঘোড়াচালক ছিল; তিনি তাদের রথ রাখবার নগরগুলিতে এবং যিরূশালেমে রাজার কাছে রাখতেন।
26 ೨೬ ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು.
২৬আর তিনি ফরাৎ নদী থেকে পলেষ্টীয়দের দেশ ও মিশরের সীমানা পর্যন্ত সমস্ত রাজাদের উপরে রাজত্ব করতেন।
27 ೨೭ ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯು ಕಲ್ಲಿನ ಹಾಗೆಯೂ, ದೇವದಾರು ಮರಗಳು ಇಳಿಜಾರು ಪ್ರದೇಶದಲ್ಲಿ ಬೆಳೆಯುವ ಅತ್ತಿ ಮರಗಳಂತೆ ಹೇರಳವಾಗಿದ್ದವು.
২৭রাজা যিরূশালেমে রূপাকে পাথরের মত এবং এরস কাঠকে উপত্যকার ডুমুর গাছের মত অনেক করলেন।
28 ೨೮ ಸೊಲೊಮೋನನಿಗೋಸ್ಕರ ಐಗುಪ್ತ್ಯದಿಂದಲೂ ಹಾಗೂ ಬೇರೆ ದೇಶಗಳಿಂದಲೂ ಕುದುರೆಗಳನ್ನು ತರುತ್ತಿದ್ದರು.
২৮আর লোকেরা মিশর ও সব দেশ থেকে শলোমনের জন্য ঘোড়া আনত।
29 ೨೯ ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.
২৯শলোমনের সমস্ত কাজের কথা প্রথম থেকে শেষ পর্যন্ত নাথন ভাববাদীর বইয়ে ও শীলোনীয় অহিয়ের ভাববাণীতে এবং নবাটের ছেলে যারবিয়ামের বিষয়ে ইদ্দো দর্শকের দর্শন নামক বইতে কি লেখা নেই?
30 ೩೦ ಸೊಲೊಮೋನನು ಯೆರೂಸಲೇಮಿನಲ್ಲಿ ಇದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದನು.
৩০পরে শলোমন যিরূশালেমে চল্লিশ বছর ধরে সমস্ত ইস্রায়েলের উপরে রাজত্ব করলেন।
31 ೩೧ ಆನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.
৩১তারপরে শলোমন তাঁর পূর্বপুরুষদের সঙ্গে ঘুমিয়ে পড়লেন ও তাঁর বাবা দায়ূদের শহরে কবর দেওয়া হল এবং তাঁর ছেলে রহবিয়াম তাঁর জায়গায় রাজা হলেন।