< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 9 >

1 ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.
וּמַֽלְכַּת־שְׁבָ֗א שָֽׁמְעָה֮ אֶת־שֵׁ֣מַע שְׁלֹמֹה֒ וַתָּב֣וֹא לְנַסּוֹת֩ אֶת־שְׁלֹמֹ֨ה בְחִיד֜וֹת בִּירֽוּשָׁלִַ֗ם בְּחַ֣יִל כָּבֵ֣ד מְאֹ֡ד וּ֠גְמַלִּים נֹשְׂאִ֨ים בְּשָׂמִ֧ים וְזָהָ֛ב לָרֹ֖ב וְאֶ֣בֶן יְקָרָ֑ה וַתָּבוֹא֙ אֶל־שְׁלֹמֹ֔ה וַתְּדַבֵּ֣ר עִמּ֔וֹ אֵ֛ת כָּל־אֲשֶׁ֥ר הָיָ֖ה עִם־לְבָבָֽהּ׃
2 ಸೊಲೊಮೋನನು ಆಕೆಯ ಪ್ರಶ್ನೆಗಳಿಗೂ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದ್ದರಿಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು.
וַיַּגֶּד־לָ֥הּ שְׁלֹמֹ֖ה אֶת־כָּל־דְּבָרֶ֑יהָ וְלֹֽא־נֶעְלַ֤ם דָּבָר֙ מִשְּׁלֹמֹ֔ה אֲשֶׁ֧ר לֹ֦א הִגִּ֖יד לָֽהּ׃
3 ಶೆಬಾದ ರಾಣಿಯು, ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ,
וַתֵּ֙רֶא֙ מַֽלְכַּת־שְׁבָ֔א אֵ֖ת חָכְמַ֣ת שְׁלֹמֹ֑ה וְהַבַּ֖יִת אֲשֶׁ֥ר בָּנָֽה׃
4 ಭೋಜನ ಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೂ, ಅರಸನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗ ಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ
וּמַאֲכַ֣ל שֻׁלְחָנ֡וֹ וּמוֹשַׁ֣ב עֲבָדָיו֩ וּמַעֲמַ֨ד מְשָׁרְתָ֜יו וּמַלְבּֽוּשֵׁיהֶ֗ם וּמַשְׁקָיו֙ וּמַלְבּ֣וּשֵׁיהֶ֔ם וַעֲלִיָּת֔וֹ אֲשֶׁ֥ר יַעֲלֶ֖ה בֵּ֣ית יְהוָ֑ה וְלֹא־הָ֥יָה ע֛וֹד בָּ֖הּ רֽוּחַ׃
5 ಅವನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
וַתֹּ֙אמֶר֙ אֶל־הַמֶּ֔לֶךְ אֱמֶת֙ הַדָּבָ֔ר אֲשֶׁ֥ר שָׁמַ֖עְתִּי בְּאַרְצִ֑י עַל־דְּבָרֶ֖יךָ וְעַל־חָכְמָתֶֽךָ׃
6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ.
וְלֹֽא־הֶאֱמַ֣נְתִּי לְדִבְרֵיהֶ֗ם עַ֤ד אֲשֶׁר־בָּ֙אתִי֙ וַתִּרְאֶ֣ינָה עֵינַ֔י וְהִנֵּה֙ לֹ֣א הֻגַּד־לִ֔י חֲצִ֖י מַרְבִּ֣ית חָכְמָתֶ֑ךָ יָסַ֕פְתָּ עַל־הַשְּׁמוּעָ֖ה אֲשֶׁ֥ר שָׁמָֽעְתִּי׃
7 ನಿನ್ನ ಪ್ರಜೆಗಳೂ, ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.
אַשְׁרֵ֣י אֲנָשֶׁ֔יךָ וְאַשְׁרֵ֖י עֲבָדֶ֣יךָ אֵ֑לֶּה הָעֹמְדִ֤ים לְפָנֶ֙יךָ֙ תָּמִ֔יד וְשֹׁמְעִ֖ים אֶת־חָכְמָתֶֽךָ׃
8 ನಿನ್ನನ್ನು ಮೆಚ್ಚಿ, ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.
יְהִ֨י יְהוָ֤ה אֱלֹהֶ֙יךָ֙ בָּר֔וּךְ אֲשֶׁ֣ר ׀ חָפֵ֣ץ בְּךָ֗ לְתִתְּךָ֤ עַל־כִּסְאוֹ֙ לְמֶ֔לֶךְ לַיהוָ֖ה אֱלֹהֶ֑יךָ בְּאַהֲבַ֨ת אֱלֹהֶ֤יךָ אֶת־יִשְׂרָאֵל֙ לְהַעֲמִיד֣וֹ לְעוֹלָ֔ם וַיִּתֶּנְךָ֤ עֲלֵיהֶם֙ לְמֶ֔לֶךְ לַעֲשׂ֖וֹת מִשְׁפָּ֥ט וּצְדָקָֽה׃
9 ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧ ದ್ರವ್ಯವನ್ನೂ, ಅಮೂಲ್ಯರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದ ಸುಗಂಧದ್ರವ್ಯ ಮತ್ತೆ ಸಿಗಲೇ ಇಲ್ಲ.
וַתִּתֵּ֨ן לַמֶּ֜לֶךְ מֵאָ֥ה וְעֶשְׂרִ֣ים ׀ כִּכַּ֣ר זָהָ֗ב וּבְשָׂמִ֛ים לָרֹ֥ב מְאֹ֖ד וְאֶ֣בֶן יְקָרָ֑ה וְלֹ֤א הָיָה֙ כַּבֹּ֣שֶׂם הַה֔וּא אֲשֶׁר־נָתְנָ֥ה מַֽלְכַּת־שְׁבָ֖א לַמֶּ֥לֶךְ שְׁלֹמֹֽה׃
10 ೧೦ ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್ ದೇಶದ ಬಂಗಾರವನ್ನಲ್ಲದೆ ಸುಗಂಧದ ಮರಗಳ ಅಮೂಲ್ಯರತ್ನಗಳನ್ನೂ ತಂದರು.
וְגַם־עַבְדֵ֤י חוּרָם֙ וְעַבְדֵ֣י שְׁלֹמֹ֔ה אֲשֶׁר־הֵבִ֥יאוּ זָהָ֖ב מֵאוֹפִ֑יר הֵבִ֛יאוּ עֲצֵ֥י אַלְגּוּמִּ֖ים וְאֶ֥בֶן יְקָרָֽה׃
11 ೧೧ ಅರಸನು ಸುಗಂಧದ ಮರದಿಂದ ಯೆಹೋವನ ದೇವಾಲಯವನ್ನು ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ, ಸಂಗೀತಗಾರರಿಗಾಗಿ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಗಂಧದ ಮರವು ಹಿಂದೆಂದೂ ಯೆಹೂದ ದೇಶದಲ್ಲಿ ಕಂಡಿರಲಿಲ್ಲ.
וַיַּ֣עַשׂ הַ֠מֶּלֶךְ אֶת־עֲצֵ֨י הָֽאַלְגּוּמִּ֜ים מְסִלּ֤וֹת לְבֵית־יְהוָה֙ וּלְבֵ֣ית הַמֶּ֔לֶךְ וְכִנֹּר֥וֹת וּנְבָלִ֖ים לַשָּׁרִ֑ים וְלֹא־נִרְא֥וּ כָהֵ֛ם לְפָנִ֖ים בְּאֶ֥רֶץ יְהוּדָֽה׃
12 ೧೨ ಅರಸನಾದ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ, ಆಕೆಗೆ ತಾನು ಕೊಟ್ಟು ವಸ್ತುಗಳನ್ನಲ್ಲದೆ, ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.
וְהַמֶּ֨לֶךְ שְׁלֹמֹ֜ה נָתַ֣ן לְמַֽלְכַּת־שְׁבָ֗א אֶת־כָּל־חֶפְצָהּ֙ אֲשֶׁ֣ר שָׁאָ֔לָה מִלְּבַ֖ד אֲשֶׁר־הֵבִ֣יאָה אֶל־הַמֶּ֑לֶךְ וַֽתַּהֲפֹ֛ךְ וַתֵּ֥לֶךְ לְאַרְצָ֖הּ הִ֥יא וַעֲבָדֶֽיהָ׃ פ
13 ೧೩ ಸೊಲೊಮೋನನಿಗೆ ಪ್ರತಿ ವರ್ಷ ಆರು ನೂರಅರವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.
וַיְהִי֙ מִשְׁקַ֣ל הַזָּהָ֔ב אֲשֶׁר־בָּ֥א לִשְׁלֹמֹ֖ה בְּשָׁנָ֣ה אֶחָ֑ת שֵׁ֥שׁ מֵא֛וֹת וְשִׁשִּׁ֥ים וָשֵׁ֖שׁ כִּכְּרֵ֥י זָהָֽב׃
14 ೧೪ ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು.
לְבַ֞ד מֵאַנְשֵׁ֧י הַתָּרִ֛ים וְהַסֹּחֲרִ֖ים מְבִיאִ֑ים וְכָל־מַלְכֵ֤י עֲרַב֙ וּפַח֣וֹת הָאָ֔רֶץ מְבִיאִ֛ים זָהָ֥ב וָכֶ֖סֶף לִשְׁלֹמֹֽה׃
15 ೧೫ ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರವು ಹಿಡಿಸುತ್ತಿತ್ತು.
וַיַּ֨עַשׂ הַמֶּ֧לֶךְ שְׁלֹמֹ֛ה מָאתַ֥יִם צִנָּ֖ה זָהָ֣ב שָׁח֑וּט שֵׁ֤שׁ מֵאוֹת֙ זָהָ֣ב שָׁח֔וּט יַעֲלֶ֖ה עַל־הַצִּנָּ֥ה הָאֶחָֽת׃
16 ೧೬ ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಮುನ್ನೂರು ತೊಲಾ ಬಂಗಾರ ಬೇಕಾಗುತ್ತಿತ್ತು. ಅರಸನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿರಿಸಿದನು.
וּשְׁלֹשׁ־מֵא֤וֹת מָֽגִנִּים֙ זָהָ֣ב שָׁח֔וּט שְׁלֹ֤שׁ מֵאוֹת֙ זָהָ֔ב יַעֲלֶ֖ה עַל־הַמָּגֵ֣ן הָאֶחָ֑ת וַיִּתְּנֵ֣ם הַמֶּ֔לֶךְ בְּבֵ֖ית יַ֥עַר הַלְּבָנֽוֹן׃ פ
17 ೧೭ ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.
וַיַּ֧עַשׂ הַמֶּ֛לֶךְ כִּסֵּא־שֵׁ֖ן גָּד֑וֹל וַיְצַפֵּ֖הוּ זָהָ֥ב טָהֽוֹר׃
18 ೧೮ ಅದಕ್ಕೆ ಹೊಂದಿಕೆಯಾದ ಆರು ಮೆಟ್ಟಲುಗಳೂ, ಬಂಗಾರದ ಸಿಂಹಾಸನವೂ, ಒಂದು ಪಾದಪೀಠವು ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.
וְשֵׁ֣שׁ מַעֲל֣וֹת לַ֠כִּסֵּא וְכֶ֨בֶשׁ בַּזָּהָ֤ב לַכִּסֵּא֙ מָאֳחָזִ֔ים וְיָד֛וֹת מִזֶּ֥ה וּמִזֶּ֖ה עַל־מְק֣וֹם הַשָּׁ֑בֶת וּשְׁנַ֣יִם אֲרָי֔וֹת עֹמְדִ֖ים אֵ֥צֶל הַיָּדֽוֹת׃
19 ೧೯ ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
וּשְׁנֵ֧ים עָשָׂ֣ר אֲרָי֗וֹת עֹמְדִ֥ים שָׁ֛ם עַל־שֵׁ֥שׁ הַֽמַּעֲל֖וֹת מִזֶּ֣ה וּמִזֶּ֑ה לֹא־נַעֲשָׂ֥ה כֵ֖ן לְכָל־מַמְלָכָֽה׃
20 ೨೦ ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳಾಗಿದ್ದವು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
וְ֠כֹל כְּלֵ֞י מַשְׁקֵ֨ה הַמֶּ֤לֶךְ שְׁלֹמֹה֙ זָהָ֔ב וְכֹ֗ל כְּלֵ֛י בֵּֽית־יַ֥עַר הַלְּבָנ֖וֹן זָהָ֣ב סָג֑וּר אֵ֣ין כֶּ֗סֶף נֶחְשָׁ֛ב בִּימֵ֥י שְׁלֹמֹ֖ה לִמְאֽוּמָה׃
21 ೨೧ ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು.
כִּֽי־אֳנִיּ֤וֹת לַמֶּ֙לֶךְ֙ הֹלְכ֣וֹת תַּרְשִׁ֔ישׁ עִ֖ם עַבְדֵ֣י חוּרָ֑ם אַחַת֩ לְשָׁל֨וֹשׁ שָׁנִ֜ים תָּב֣וֹאנָה ׀ אֳנִיּ֣וֹת תַּרְשִׁ֗ישׁ נֹֽשְׂאוֹת֙ זָהָ֣ב וָכֶ֔סֶף שֶׁנְהַבִּ֥ים וְקוֹפִ֖ים וְתוּכִּיִּֽים׃ פ
22 ೨೨ ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.
וַיִּגְדַּל֙ הַמֶּ֣לֶךְ שְׁלֹמֹ֔ה מִכֹּ֖ל מַלְכֵ֣י הָאָ֑רֶץ לְעֹ֖שֶׁר וְחָכְמָֽה׃
23 ೨೩ ಭೂರಾಜರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಸೊಲೊಮೋನ ದರ್ಶನಕ್ಕೆ ಬರುತ್ತಿದ್ದರು.
וְכֹל֙ מַלְכֵ֣י הָאָ֔רֶץ מְבַקְשִׁ֖ים אֶת־פְּנֵ֣י שְׁלֹמֹ֑ה לִשְׁמֹ֙עַ֙ אֶת־חָכְמָת֔וֹ אֲשֶׁר־נָתַ֥ן הָאֱלֹהִ֖ים בְּלִבּֽוֹ׃
24 ೨೪ ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣಿಗಳು, ಶಸ್ತಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
וְהֵ֣ם מְבִיאִ֣ים אִ֣ישׁ מִנְחָת֡וֹ כְּלֵ֣י כֶסֶף֩ וּכְלֵ֨י זָהָ֤ב וּשְׂלָמוֹת֙ נֵ֣שֶׁק וּבְשָׂמִ֔ים סוּסִ֖ים וּפְרָדִ֑ים דְּבַר־שָׁנָ֖ה בְּשָׁנָֽה׃ פ
25 ೨೫ ಸೊಲೊಮೋನನು ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.
וַיְהִ֨י לִשְׁלֹמֹ֜ה אַרְבַּעַת֩ אֲלָפִ֨ים אֻֽרְי֤וֹת סוּסִים֙ וּמַרְכָּב֔וֹת וּשְׁנֵים־עָשָׂ֥ר אֶ֖לֶף פָּרָשִׁ֑ים וַיַּנִּיחֵם֙ בְּעָרֵ֣י הָרֶ֔כֶב וְעִם־הַמֶּ֖לֶךְ בִּירוּשָׁלִָֽם׃
26 ೨೬ ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು.
וַיְהִ֥י מוֹשֵׁ֖ל בְּכָל־הַמְּלָכִ֑ים מִן־הַנָּהָר֙ וְעַד־אֶ֣רֶץ פְּלִשְׁתִּ֔ים וְעַ֖ד גְּב֥וּל מִצְרָֽיִם׃
27 ೨೭ ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯು ಕಲ್ಲಿನ ಹಾಗೆಯೂ, ದೇವದಾರು ಮರಗಳು ಇಳಿಜಾರು ಪ್ರದೇಶದಲ್ಲಿ ಬೆಳೆಯುವ ಅತ್ತಿ ಮರಗಳಂತೆ ಹೇರಳವಾಗಿದ್ದವು.
וַיִּתֵּ֨ן הַמֶּ֧לֶךְ אֶת־הַכֶּ֛סֶף בִּירוּשָׁלִַ֖ם כָּאֲבָנִ֑ים וְאֵ֣ת הָאֲרָזִ֗ים נָתַ֛ן כַּשִּׁקְמִ֥ים אֲשֶׁר־בַּשְּׁפֵלָ֖ה לָרֹֽב׃
28 ೨೮ ಸೊಲೊಮೋನನಿಗೋಸ್ಕರ ಐಗುಪ್ತ್ಯದಿಂದಲೂ ಹಾಗೂ ಬೇರೆ ದೇಶಗಳಿಂದಲೂ ಕುದುರೆಗಳನ್ನು ತರುತ್ತಿದ್ದರು.
וּמוֹצִיאִ֨ים סוּסִ֧ים מִמִּצְרַ֛יִם לִשְׁלֹמֹ֖ה וּמִכָּל־הָאֲרָצֽוֹת׃
29 ೨೯ ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.
וּשְׁאָר֙ דִּבְרֵ֣י שְׁלֹמֹ֔ה הָרִאשֹׁנִ֖ים וְהָאֲחֲרוֹנִ֑ים הֲלֹא־הֵ֣ם כְּתוּבִ֗ים עַל־דִּבְרֵי֙ נָתָ֣ן הַנָּבִ֔יא וְעַל־נְבוּאַ֞ת אֲחִיָּ֣ה הַשִּֽׁילוֹנִ֗י וּבַחֲזוֹת֙ יֶעְדּ֣וֹ הַחֹזֶ֔ה עַל־יָרָבְעָ֖ם בֶּן־נְבָֽט׃
30 ೩೦ ಸೊಲೊಮೋನನು ಯೆರೂಸಲೇಮಿನಲ್ಲಿ ಇದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದನು.
וַיִּמְלֹ֨ךְ שְׁלֹמֹ֧ה בִֽירוּשָׁלִַ֛ם עַל־כָּל־יִשְׂרָאֵ֖ל אַרְבָּעִ֥ים שָׁנָֽה׃
31 ೩೧ ಆನಂತರ ಸೊಲೊಮೋನನು ತನ್ನ ಪೂರ್ವಿಕರ ಬಳಿಗೆ ಸೇರಿದನು, ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.
וַיִּשְׁכַּ֤ב שְׁלֹמֹה֙ עִם־אֲבֹתָ֔יו וַֽיִּקְבְּרֻ֔הוּ בְּעִ֖יר דָּוִ֣יד אָבִ֑יו וַיִּמְלֹ֛ךְ רְחַבְעָ֥ם בְּנ֖וֹ תַּחְתָּֽיו׃ פ

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 9 >