< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 1 >
1 ೧ ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.
E Salomão filho de Davi foi estabelecido em seu reino; e o SENHOR seu Deus foi com ele, e lhe engrandeceu muito.
2 ೨ ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.
E chamou Salomão a todo Israel, comandantes, líderes de centenas, e juízes, e a todos os príncipes de todo Israel, cabeças de famílias.
3 ೩ ಅವನ ಸಂಗಡ ಇದ್ದ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿರುವ ಪೂಜಾಸ್ಥಳಕ್ಕೆ ಹೋದನು. ಏಕೆಂದರೆ ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿದ ದೇವದರ್ಶನದ ಗುಡಾರವು ಅಲ್ಲಿತ್ತು.
E foi Salomão, e com ele toda esta congregação, ao alto que havia em Gibeão; porque ali estava o tabernáculo do testemunho de Deus, que Moisés servo do SENHOR havia feito no deserto.
4 ೪ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.
Mas Davi havia trazido a arca de Deus de Quriate-Jearim ao lugar que ele lhe havia preparado; porque ele lhe havia estendido uma tenda em Jerusalém.
5 ೫ ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.
Assim o altar de bronze que havia feito Bezalel filho de Uri filho de Hur, estava ali diante do tabernáculo do SENHOR, ao qual Salomão foi a consultar com aquela congregação.
6 ೬ ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು.
Subiu, pois, Salomão ali diante do SENHOR, ao altar de bronze que estava no tabernáculo do testemunho, e ofereceu sobre ele mil holocaustos.
7 ೭ ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಿನಗೆ, ಯಾವ ವರ ಬೇಕು ಕೇಳಿಕೋ” ಎಂದು ಹೇಳಲು
E aquela noite apareceu Deus a Salomão, e disse-lhe: Pede o que queres que eu te dê.
8 ೮ ಸೊಲೊಮೋನನು ದೇವರಿಗೆ, “ನೀನು ನನ್ನ ತಂದೆಯಾದ ದಾವೀದನಿಗೆ ಮಹಾ ದಯೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಅರಸನಾಗುವಂತೆ ಮಾಡಿದೆ.
E Salomão disse a Deus: Tu fizeste com Davi meu pai grande misericórdia, e a mim me puseste por rei em seu lugar.
9 ೯ ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.
Confirme-se, pois, agora, ó SENHOR Deus, tua palavra dada a Davi meu pai; porque tu me puseste por rei sobre um povo em multidão como o pó da terra.
10 ೧೦ ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.
Dá-me agora sabedoria e conhecimento, para sair e entrar diante deste povo: porque quem poderá julgar este teu povo tão grande?
11 ೧೧ ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.
E disse Deus a Salomão: Porquanto isto foi em teu coração, que não pediste riquezas, riqueza, ou glória, nem a alma dos que te querem mal, nem pediste muitos dias, mas sim que pediste para ti sabedoria e conhecimento para julgar meu povo, sobre o qual te constituí por rei.
12 ೧೨ ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು.
Sabedoria e conhecimento te são dados; e também te darei riquezas, bens, e glória, que nunca houve nos reis que foram antes de ti, nem depois de ti haverá tais.
13 ೧೩ ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು.
E voltou Salomão a Jerusalém do alto que estava em Gibeão, de ante o tabernáculo do testemunho; e reinou sobre Israel.
14 ೧೪ ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು.
E juntou Salomão carros e cavaleiros; e teve mil e quatrocentos carros, e doze mil cavaleiros, os quais pôs nas cidades dos carros, e com o rei em Jerusalém.
15 ೧೫ ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.
E pôs o rei prata e ouro em Jerusalém como pedras, e cedro como sicômoros que nascem nos campos em abundância.
16 ೧೬ ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.
E traziam cavalos do Egito e de Coa para Salomão; pois os mercadores do rei [os] compravam de Coa por [um certo] preço.
17 ೧೭ ರಥಕ್ಕೆ ಆರುನೂರು ಬೆಳ್ಳಿ ನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ, ಕುದುರೆಗಳನ್ನೂ ಐಗುಪ್ತ್ಯ ದೇಶದಿಂದ ತರಿಸುತ್ತಿದ್ದರು. ಇವುಗಳನ್ನು ಹಿತ್ತಿಯರ ಮತ್ತು ಅರಾಮ್ಯರ ಅರಸರ ಮುಖಾಂತರವೇ ತರಿಸುತ್ತಿದ್ದರು.
E subiam, e tiravam do Egito, um carro por seiscentas peças de prata, e um cavalo por cento e cinquenta: e assim se tiravam por meio deles para todos os reis dos Heteus, e para os reis da Síria.