< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 11 >

1 ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ.
אני מקווה שתתייחסו אלי בסבלנות גם אם אני מדבר בטיפשות. אנא, סלחו לי והניחו לי לומר את אשר על לבי.
2 ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.
אני דואג לכם דאגה עמוקה כאלוהים עצמו; אתם כבתולה טהורה שהארשתי לאיש אחד, למשיח.
3 ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.
אך אני חושש שמא תסטו יום אחד ממסירותכם הטהורה למשיח, כשם שחווה רומתה על־ידי הנחש בגן העדן.
4 ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.
אתם מתנהגים כפתאים ומאמינים לכל מה שאומרים לכם, גם אם מישהו מכריז לכם על ישוע השונה מזה שהכרזנו, או על רוח ששונה מרוח הקודש שקיבלתם, או על דרך שונה לישועה. אכן, אתם מוכנים להאמין לכל דבר!
5 “ಅತಿಶ್ರೇಷ್ಟರಾದ ಅಪೊಸ್ತಲರು” ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ
סבורני שאיני נופל במאומה מ”שליחים“מיוחדים אלה!
6 ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.
אולי אינני נואם מעולה, אך אני יודע לפחות על מה אני מדבר, כפי שהוכחנו לכם פעמים רבות.
7 ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ?
האם חטאתי כשהשפלתי את עצמי (כדי לרומם אתכם!) ובישרתי לכם את בשורת האלוהים ללא תשלום?
8 ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ.
קהילות אחרות תמכו בי בעת שעבדתי למענכם. כן, לקחתי את כספם כדי לעזור לכם.
9 ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.
בכל עת שהותי עמכם לא ביקשתי מכם פרוטה; האחים שבאו ממקדוניה סיפקו את כל צרכי. מעולם לא ביקשתי מכם דבר, וגם להבא לא אבקש.
10 ೧೦ ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.
בשם אמת המשיח בי, אני מבטיח שאתגאה על כך בכל יוון!
11 ೧೧ ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.
מדוע? האם משום שאיני אוהב אתכם? אלוהים יודע שאני אוהב אתכם!
12 ೧೨ ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.
אעשה זאת כדי לסכור את פיהם של אלה שמתפארים וטוענים:”אנחנו עושים את עבודת אלוהים בדיוק כמו פולוס וטימותיוס!“
13 ೧೩ ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.
אנשים אלה הינם שליחי־שקר, רמאים שמתחפשים לשליחי המשיח.
14 ೧೪ ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,
אך איני מתפלא על כך! אם השטן עצמו יכול להתחפש למלאך אור,
15 ೧೫ ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.
אין פלא שמשרתיו יכולים להתחפש למשרתי צדק. אך לבסוף הם יקבלו את העונש שמגיע להם על מעלליהם.
16 ೧೬ ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.
אני חוזר ואומר, אל תחשבוני לשוטה, אך גם אם אתם חושבים אותי לשוטה, הקשיבו לי בכל זאת והניחו לי להתגאות כמוהם.
17 ೧೭ ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವರಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ.
גאווה זאת לא ניתנה לי מאת המשיח, שכן אני נוהג כשוטה.
18 ೧೮ ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವುದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
אך מאחר שרבים מתגאים על הישגיהם האנושיים, גם אני אתגאה כמוהם.
19 ೧೯ ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ
אתם חושבים את עצמכם לחכמים גדולים, אך אתם מקשיבים ברצון לשוטים האלה.
20 ೨೦ ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.
לא אכפת לכם אם הם משעבדים אתכם, מנצלים אתכם, מכשילים אתכם, סוטרים על פניכם או מתנשאים עליכם.
21 ೨೧ ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.
אני מתבייש להודות שאיני חזק או נועז כמוהם. אך בכל מה שהם יכולים להתגאות, אני שוב מדבר כשוטה, גם אני יכול להתגאות!
22 ೨೨ ಅವರು ಇಬ್ರಿಯರೋ? ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು.
האם הם עברים? גם אני. האם הם ישראלים? גם אני. זרע אברהם? גם אני.
23 ೨೩ ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.
האם הם משרתי המשיח? אולי אני מדבר כשוטה, אך אני משרת טוב מהם! עמלתי קשה מהם, הושלכתי לכלא פעמים רבות מהם, הוכיתי יותר, ועמדתי לפני המוות פעמים רבות יותר.
24 ೨೪ ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಲವತ್ತು ಏಟುಗಳು ಬಿದ್ದವು.
חמש פעמים הלקוני היהודים שלושים־ותשע מלקות.
25 ೨೫ ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.
שלוש פעמים הולקיתי בשוטים, פעם אחת נסקלתי באבנים, שלוש פעמים נטרפה ספינתי, ופעם נסחפתי עשרים־וארבע שעות בים הפתוח.
26 ೨೬ ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.
במסעותיי הרבים והמעייפים ניצלתי מסכנת שיטפונות, מידי שודדים, מידי היהודים ומידי הגויים. הותקפתי על־ידי המון בערים שונות, ניצלתי ממוות במדבר, מטביעה בים ומאנשים שהתחזו כמאמינים משיחיים.
27 ೨೭ ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.
עמלתי וטרחתי ולילות רבים לא עצמתי עין. פעמים רבות רעבתי וצמאתי; כן, הייתי ללא אוכל, לבוש או קורת־גג.
28 ೨೮ ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು.
מלבד כל אלה אני נושא עמי דאגה מתמדת לשלום הקהילות.
29 ೨೯ ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ?
כאשר מישהו שוגה, אני חש בצערו. כאשר מישהו חוטא, לבי כואב.
30 ೩೦ ನಾನು ಹೊಗಳಿಕೊಳ್ಳುವುದ್ದಾದರೆ ನನ್ನ ಬಲಹೀನತೆಯನ್ನು ಕುರಿತೆ ಹೊಗಳಿಕೊಳ್ಳುತ್ತೇನೆ.
אם עלי להתגאות, אני בוחר להתגאות בדברים שמראים את חולשתי.
31 ೩೧ ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು. (aiōn g165)
האלוהים ואבי המשיח אדוננו, יבורך שמו לעולמים, יודע שאני דובר אמת. (aiōn g165)
32 ೩೨ ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು
בהיותי בדמשק, המושל מטעם המלך ארטס הפקיד שומרים על שערי העיר כדי לתפסני,
33 ೩೩ ಅವರು ನನ್ನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ ಗೋಡೆಯಲ್ಲಿದ್ದ ಒಂದು ಕಿಟಕಿಯಿಂದ ಇಳಿಸಿಬಿಟ್ಟರು. ಹೀಗೆ ಅವನ ಕೈಯಿಂದ ತಪ್ಪಿಸಿಕೊಂಡು ಓಡಿಹೋದೆನು.
אך הורדתי בסל דרך פתח בחומה ונמלטתי מידיו.

< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 11 >