< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 12 >
1 ೧ ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳುವುದು ನನಗೆ ಅನಿವಾರ್ಯವಾಗಿದೆ. ಆದ್ದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನೂ ಮತ್ತು ತಿಳಿಯಪಡಿಸಿದ ರಹಸ್ಯಗಳನ್ನೂ ಕುರಿತು ಹೇಳುತ್ತೇನೆ.
Fără îndoială, nu îmi folosește să mă laud. Fiindcă voi veni la viziuni și revelații ale Domnului.
2 ೨ ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.
Am cunoscut un om în Cristos, acum paisprezece ani, (dacă în trup, nu pot spune, dacă afară din trup, nu pot spune; Dumnezeu știe); unul ca acesta a fost răpit până la al treilea cer.
3 ೩ ಅವನು ಪರದೈಸಿ ತನಕ ಒಯ್ಯಲ್ಪಟ್ಟು ಮನುಷ್ಯರಿಂದ ಉಚ್ಚರಿಸಲೂ, ಆಡಲೂ ಬಾರದಂತಹ ಮಾತುಗಳನ್ನು ಕೇಳಿದನೆಂದೂ ಬಲ್ಲೆನು. ಆ ಸಮಯದಲ್ಲಿ ಆತನು ದೇಹಸಹಿತನಾಗಿದ್ದನೋ ಅಥವಾ ದೇಹರಹಿತನಾಗಿದ್ದನೋ ನಾನರಿಯೆನು, ದೇವರೇ ಬಲ್ಲನು.
Și am cunoscut un astfel de om (dacă în trup, dacă în afara trupului, nu pot spune; Dumnezeu știe);
Că a fost răpit în paradis și a auzit cuvinte de nespus, care nu este legiuit omului să le rostească.
5 ೫ ಅವನನ್ನು ಕುರಿತಾಗಿ ನಾನು ಹೆಮ್ಮೆ ಪಡುವೆನು. ಆದರೆ ನನ್ನನ್ನು ಕುರಿತಂತೆ ನನ್ನ ಬಲಹೀನತೆಯನ್ನು ಕುರಿತಲ್ಲದೆ ಬೇರೆ ಹೊಗಳಿಕೆ ನನಗೆ ಇಲ್ಲ.
Cu un astfel de om mă voi lăuda, iar cu mine nu mă voi lăuda decât în neputințele mele.
6 ೬ ಹೊಗಳಿಕೊಳ್ಳುವುದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ಬುದ್ಧಿಹೀನನಾಗುವುದಿಲ್ಲ, ಯಾಕೆಂದರೆ ನಾನು ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ಅಥವಾ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.
Căci dacă aș voi să mă laud, nu voi fi prost, fiindcă voi spune adevărul; dar mă feresc, ca nu cumva cineva să mă considere mai presus de ceea ce mă vede a fi, sau de ceea ce aude de la mine.
7 ೭ ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.
Și ca nu cumva să fiu înălțat peste măsură prin abundența revelațiilor, mi-a fost dat un ghimpe în carne, mesager al lui Satan, să mă lovească cu pumnii, ca nu cumva să fiu înălțat peste măsură.
8 ೮ ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ
Pentru aceasta, de trei ori am implorat pe Domnul, ca să se depărteze de la mine.
9 ೯ ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.
Și mi-a spus: Harul meu îți este de ajuns, fiindcă puterea mea este făcută desăvârșită în slăbiciune. De aceea cu cea mai mare plăcere mă voi lăuda mai degrabă în neputințele mele, ca puterea lui Cristos să rămână peste mine.
10 ೧೦ ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
De aceea am plăcere în slăbiciuni, în ocări, în nevoi, în persecuții, în strâmtorări, pentru Cristos; deoarece când sunt slab, atunci sunt tare.
11 ೧೧ ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.
Am devenit prost în laudă; voi m-ați constrâns; fiindcă eu trebuia să fi fost recomandat de voi, fiindcă în nimic nu sunt în urma acestor apostoli, cei mai mari dintre cei mai mari, cu toate că nu sunt nimic.
12 ೧೨ ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವುದರಲ್ಲಿಯೂ, ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಗಳನ್ನೂ, ಹಾಗೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಒಬ್ಬ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ಪ್ರಕಟವಾದವಲ್ಲಾ.
Într-adevăr, semnele unui apostol au fost lucrate printre voi în toată răbdarea, în semne și minuni și fapte puternice.
13 ೧೩ ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ಯಾವ ವಿಷಯದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆಮಾಡಿಲ್ಲವಲ್ಲಾ? ನನ್ನ ಈ ತಪ್ಪನ್ನು ಕ್ಷಮಿಸಿರಿ.
Fiindcă care este lucrul în care ați fost inferiori față de celelalte biserici, decât că eu însumi nu v-am fost greutate? Iertați-mi această nedreptate.
14 ೧೪ ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.
Iată, sunt gata a treia oară să vin la voi; și nu vă voi fi greutate, fiindcă nu caut ale voastre, ci pe voi, fiindcă nu copiii sunt datori să strângă pentru părinți, ci părinții pentru copii.
15 ೧೫ ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?
Și eu, cu mare plăcere, voi cheltui și mă voi cheltui pentru voi; deși cu cât vă iubesc mai mult, cu atât mai puțin sunt iubit.
16 ೧೬ ಆದರೆ ಹೀಗಿರಲು, ನಾನು ನಿಮಗೆ ಭಾರವಾಗಲಿಲ್ಲ, ಆದರೆ ಉಪಾಯದಿಂದ ನಿಮ್ಮನ್ನು ಸಂಚುಹೂಡಿ ಹಿಡಿದೆನು ಎಂದು ಹೇಳಿರಿ.
Dar fie așa, eu nu v-am împovărat; totuși, fiind isteț, v-am prins prin șiretlic.
17 ೧೭ ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾದರೂ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ?
Am câștigat eu ceva de la voi prin vreunul dintre cei pe care i-am trimis la voi?
18 ೧೮ ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿ ಕೊಟ್ಟೆನು, ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಹಾದಿಯಲ್ಲಿ ನಡೆಯಲಿಲ್ಲವೋ? ನಾವು ಅದೇ ಕ್ರಮದಲ್ಲಿ ಹೆಜ್ಜೆ ಇಡಲಿಲ್ಲವೋ?
Am rugat pe Titus, și cu el am trimis un frate. A câștigat Titus ceva de la voi? Nu am umblat noi în același duh? Nu am umblat noi pe aceleași urme?
19 ೧೯ ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ.
Din nou, credeți că ne apărăm față de voi? Vorbim înaintea lui Dumnezeu în Cristos, dar le facem pe toate, preaiubiților, pentru edificarea voastră.
20 ೨೦ ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.
Fiindcă mă tem ca nu cumva, când vin, să nu vă găsesc așa cum aș voi, și eu să fiu găsit de voi așa cum nu ați voi; ca nu cumva să fie polemici, invidii, furii, certuri, vorbiri de rău, șoptiri, îngâmfări, răscoale;
21 ೨೧ ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.
Și nu cumva, când vin din nou, Dumnezeul meu să mă umilească printre voi și să deplâng pe mulți care au păcătuit deja și nu s-au pocăit de necurăția și curvia și desfrânarea pe care le-au practicat.